Good News: ಕೇಂದ್ರ ಸರ್ಕಾರದಿಂದ ರೈತರಿಗೆ ಬಿಗ್ ಗುಡ್ ನ್ಯೂಸ್
Good News: ರೈತರನ್ನು ದೇಶದ ಬೆನ್ನೆಲುಬು ಅಂತಲೇ ಕರೆಯಲಾಗುತ್ತದೆ. ಕೆಂದ್ರ ಸರ್ಕಾರದಿಂದ ದೇಶದ ರೈತರಿಗೆ ಅನುಕೂಲವಾಗುವಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಒಂದಾಗಿದ್ದು, ಈ ಯೋಜನೆಯಡಿ ರೈತರ ಖಾತೆಗೆ ಇಂದು (ಫೆಬ್ರವರಿ 24) 19ನೇ ಕಂತಿನ ಹಣ ಜಮಾ ಆಗಲಿದೆ. ಹಾಗಾದ್ರೆ ಎಷ್ಟು ಹಣ ಹಾಕಲಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 24) ಬಿಹಾರದ ಭಾಗಲ್ಪುರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 19ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯಡಿ ಅರ್ಹ ರೈತರು ವರ್ಷಕ್ಕೆ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ತಲಾ 2,000 ರೂಪಾಯಿಗಳ ಮೂರು ಸಮಾನ ಕಂತುಗಳಲ್ಲಿ ಪಡೆಯುತ್ತಾರೆ. ಈ ಯೊಜನೆ ಯಾರಿಗೆಲ್ಲಾ ಅನ್ವಯವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಯೋಜನೆ ಪಡೆಯಲು ಯಾರೆಲ್ಲಾ ಅರ್ಹರು?
* ಭಾರತೀಯ ನಾಗರಿಕರಾಗಿರಬೇಕು
* ಸಣ್ಣ ಅಥವಾ ಅತಿ ಸಣ್ಣ ರೈತರಾಗಿರಬೇಕು
* ಸಾಗುವಳಿ ಭೂಮಿಯ ಮಾಲೀಕರಾಗಿರಬೇಕು
* ತಿಂಗಳಿಗೆ ಕನಿಷ್ಠ 10,000 ರೂಪಾಯಿಗಳ ಪಿಂಚಣಿ ಪಡೆಯುವ ನಿವೃತ್ತರಾಗಿರಬಾರದು
* ಆದಾಯ ತೆರಿಗೆಗೆ ಅರ್ಜಿ ಸಲ್ಲಿಸಿರಬಾರದು
* ಸಾಂಸ್ಥಿಕ ಭೂಮಾಲೀಕರಾಗಿರಬಾರದು
ದೇಶದ 9.8ಕೋಟಿ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ 19ನೇ ಕಂತನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಇದರಡಿಯಲ್ಲಿ 22,000 ಕೋಟಿ ರೂಪಾಯಿಗಳನ್ನು ವರ್ಗಾಯಿಸಲಾಗುತ್ತದೆ. ಇದನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗುವುದು. ಪಿಎಂ-ಕಿಸಾನ್ ಯೋಜನೆಯಡಿ ಪ್ರತಿಯೊಬ್ಬ ಫಲಾನುಭವಿ ರೈತನಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6,000 ರೂಪಾಯಿಗಳನ್ನು ನೀಡಲಾಗುತ್ತದೆ.
ಈ ಬಗ್ಗೆ ಇತ್ತೀಚೆಗಷ್ಟೇ ಮಾಹಿತಿ ನೀಡಿದ್ದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಫೆಬ್ರವರಿ 24ರಂದು ಬಿಹಾರದ ಭಾಗಲ್ಪುರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದ್ದರು. ಈ ಮೊತ್ತವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ. 18ನೇ ಕಂತಿನಲ್ಲಿ ಫಲಾನುಭವಿಗಳ ಸಂಖ್ಯೆ 9.6 ಕೋಟಿಗೆ ಹೆಚ್ಚಾಗಿದೆ ಎಂದು ತಿಳಿಸಿದ್ದರು.
ಫೆಬ್ರವರಿ 2019ರಲ್ಲಿ ಪ್ರಾರಂಭವಾದ PM-KISAN ವಿಶ್ವದ ಅತಿದೊಡ್ಡ DBT ಯೋಜನೆಯಾಗಿದೆ. ಈ ಯೋಜನೆಯು ರೈತರಿಗೆ ಬೀಜಗಳು ಮತ್ತು ರಸಗೊಬ್ಬರಗಳ ಖರೀದಿ ವೆಚ್ಚವನ್ನು ಪೂರೈಸಲು ಸಹಾಯ ಮಾಡಿದೆ. ರೈತ ಸಮುದಾಯದ ಆದಾಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಇದುವರೆಗೆ ಒಟ್ಟು 3.46 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಿದ್ದು, ಇದೀಗ 19ನೇ ಕಂತು ಬಿಡುಗಡೆಯಾದ ನಂತರ ಈ ಮೊತ್ತವು 3.68 ಲಕ್ಷ ಕೋಟಿ ರೂಪಾಯಿ ಆಗಲಿದೆ.












Click it and Unblock the Notifications