ಸಮ್ಮಿಶ್ರ ಸರ್ಕಾರದ ವಿರುದ್ಧ ಜೂನ್ 30ರಿಂದ ಬಿಜೆಪಿ ಸರಣಿ ಪ್ರತಿಭಟನೆ

ಬೆಂಗಳೂರು, ಜೂನ್ 15: ರೈತರ ಸಾಲಮನ್ನಾ, ರೈತರ ಆತ್ಮಹತ್ಯೆ ಮುಂತಾದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿಯು ಇದೇ ಜೂನ್ 30ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಬಿಜೆಪಿಯ ರೈತ ಮೋರ್ಚಾ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಜೂನ್ 30ರಿಂದ ಜುಲೈ 15ರ ವರೆಗೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

BJP call for protest against coalition government from June 30 to July 15

ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷ ಲಕ್ಷ್ಮಣ್ ಸವಧಿ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಿಕೊಂಡಿದ್ದು, ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಹಳೆ ಮೈಸೂರು, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕಗಳಲ್ಲಿ ಈ ಗುಂಪುಗಳು ಪ್ರತಿಭಟನೆಯ ನೇತೃತ್ವ ವಹಿಸಲಿವೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಈ ಹೋರಾಟವನ್ನು ರೈತ ಮೋರ್ಚಾ ಹಮ್ಮಿಕೊಂಡಿದ್ದು, ಚುನಾವಣೆ ಪೂರ್ವ ಕುಮಾರಸ್ವಾಮಿ ಅವರು ನೀಡಿದ್ದ ಭರವಸೆ ಹಾಗೂ ಅಧಿಕಾರಕ್ಕೆ ಬಂದ ನಂತರ ಕುಮಾರಸ್ವಾಮಿ ಅವರು ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+