• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಸಿರು ಶಾಲು ಹೊದ್ದು ಹಲ್ಲು‌ ಕಿರಿದರೆ ಸಾಲದು : ಎಚ್‌ಡಿಕೆ ಟ್ವೀಟ್

|

ಬೆಂಗಳೂರು, ಜನವರಿ 26 : "ಕೇಂದ್ರ ಬಿಜೆಪಿ ಸರ್ಕಾರ ರೈತರ ಬೆಳೆ, ಒಡವೆ ಸಾಲದ ಬಡ್ಡಿ‌ ಮೇಲಿನ ಸಬ್ಸಿಡಿಗೆ ಮಣ್ಣು ಹಾಕಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.

ಭಾನುವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಎಚ್. ಡಿ. ಕುಮಾರಸ್ವಾಮಿ, "ಹಸಿರು ಶಾಲು ಹೊದ್ದು ಹಲ್ಲು‌ ಕಿರಿದರೆ ಸಾಲದು" ಎಂದು ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

2 ರುಪಾಯಿಗೆ ಒಂದು ಬುಟ್ಟಿ ಟೊಮೆಟೋ, ನೊಂದ ರೈತ ಮಾಡಿದ್ದೇನು?

"ರೈತರ ಬೆಳೆ ಮತ್ತು ಒಡವೆ ಸಾಲಗಳ ಬಡ್ಡಿಗೆ ನೀಡಬೇಕಾದ ಸಬ್ಸಿಡಿಯನ್ನು‌ ನಿಲ್ಲಿಸಿರುವ ಸರ್ಕಾರ ರೈತರನ್ನು ಲೇವಾದೇವಿದಾರರಿಗೆ ಶರಣಾಗುವಂತೆ ಮಾಡಿದೆ" ಎಂದು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅರಿಶಿಣ, ಮೆಣಸಿನ ನಡುವೆ ಇದನ್ನು ಬೆಳೆದು ಸಿಕ್ಕಿಬಿದ್ದ ರೈತ

"ಸಾಲಮನ್ನಾ ಆಗಿಲ್ಲ‌ ಎಂದು ಭಾಷಣವೀರ ಮೋದಿ‌ ಕೂಡ ಹೇಳಿದ್ದರು" ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಹ ಎಚ್. ಡಿ. ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.

ಚಿನ್ನದಿಂದಲ್ಲ, ಈರುಳ್ಳಿಯಿಂದ 90 ಲಕ್ಷ ಆದಾಯ ಗಳಿಸಿದ ರೈತ.!

ಹಸಿರು ಶಾಲು ಹೊದ್ದು ಹಲ್ಲು‌ ಕಿರಿದರೆ ಸಾಲದು

ಹಸಿರು ಶಾಲು ಹೊದ್ದು ಹಲ್ಲು‌ ಕಿರಿದರೆ ಸಾಲದು

"ಪ್ರಮಾಣ ವಚನದಲ್ಲಿ ಹಸಿರು ಶಾಲು ಹೊದ್ದು ಹಲ್ಲು‌ ಕಿರಿದರೆ ಸಾಲದು, ಕಿಸಾನ್ ಸಮ್ಮಾನ್ ಎಂಬ ಹೆಸರಲ್ಲಿ ಪ್ರಧಾನಿ ಬೂಟಾಟಿಕೆ ಮಾಡಿದರೆ ಆಗದು. ಕೇಂದ್ರ ಸರ್ಕಾರ ಕೂಡಲೇ ರೈತರ ಬೆಳೆ-ಒಡವೆ ಸಾಲದ ಬಡ್ಡಿಯ ಮೇಲಿನ ಸಬ್ಸಿಡಿ‌ ಬಿಡುಗಡೆ ಮಾಡಬೇಕು.ಇಲ್ಲವೇ ರಾಜ್ಯವೇ ಅದನ್ನು‌ ಭರಿಸಬೇಕು. ಇಲ್ಲದಿದ್ದರೆ ಬಿಜೆಪಿ ರೈತ ವಿರೋಧಿ ಎಂಬುದನ್ನು ಒಪ್ಪಬೇಕು" ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಲಪಟಾಯಿಸುತ್ತಿದೆ

ಕೇಂದ್ರ ಸರ್ಕಾರ ಲಪಟಾಯಿಸುತ್ತಿದೆ

"ರೈತರ ಬೆಳೆ ಮತ್ತು ಒಡವೆ ಸಾಲಗಳ ಬಡ್ಡಿಗೆ ನೀಡಬೇಕಾದ ಸಬ್ಸಿಡಿಯನ್ನು‌ ನಿಲ್ಲಿಸಿರುವ ಸರ್ಕಾರ ರೈತರನ್ನು ಲೇವಾದೇವಿದಾರರಿಗೆ ಶರಣಾಗುವಂತೆ ಮಾಡಿದೆ. ಇನ್ನೊಂದೆಡೆ ಬ್ಯಾಂಕ್‌ಗಳಲ್ಲಿರುವ ಬಡವರ ಚಿನ್ನವನ್ನು ಹರಾಜಿನ‌ ಮೂಲಕ‌ ಕೇಂದ್ರ ಸರ್ಕಾರ ಲಪಟಾಯಿಸುತ್ತಿದೆ" ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಭಾಷಣವೀರ ಮೋದಿ

ಭಾಷಣವೀರ ಮೋದಿ

"ನಾನು ಸಿಎಂ ಆಗಿದ್ದಾಗ ರೈತರ ಸಾಲ‌ಮನ್ನಾ ಬಗ್ಗೆ ಬಿಜೆಪಿ‌ ಅನುದಿನವೂ ಕಿತಾಪತಿ ಮಾಡಿತು‌‌. ಸಾಲಮನ್ನಾ ಆಗಿಲ್ಲ‌ ಎಂದು ಭಾಷಣವೀರ ಮೋದಿ‌ ಕೂಡ ಹೇಳಿದ್ದರು. ಆದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ರೈತರ ಬೆಳೆ-ಒಡವೆ ಸಾಲದ ಬಡ್ಡಿ‌ ಮೇಲಿನ ಸಬ್ಸಿಡಿಗೆ ಮಣ್ಣು ಹಾಕಿದೆ" ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಏನಿದು ವಿವಾದ?

ಏನಿದು ವಿವಾದ?

ಕೃಷಿ ಭೂಮಿಯ ಪಹಣಿ ದಾಖಲೆ ಹಾಗೂ ಒಡೆವೆಗಳನ್ನು ಬ್ಯಾಂಕ್‌ಗಳಲ್ಲಿ ಇಟ್ಟು ಪಡೆಯುತ್ತಿದ್ದ ಸಾಲಕ್ಕೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ. 2004-05ರಿಂದ ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಲೇವಾಲೇವಿಗಾರರಿಂದ ರೈತರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿತ್ತು. ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳಲ್ಲಿ ದಾಖಲೆ ಮತ್ತು ಒಡೆವೆ ಇಟ್ಟರೆ ರೈತರಿಗೆ ಶೇ 7ರ ಬಡ್ಡಿದರದಲ್ಲಿ 3 ಲಕ್ಷದ ತನಕ ಸಾಲ ದೊರೆಯುತ್ತಿತ್ತು. ಇದಕ್ಕೆ ರೈತರು ಶೇ 4ರಷ್ಟು ಬಡ್ಡಿಯನ್ನು ಪಾವತಿಸಬೇಕಿತ್ತು. ಉಳಿದಿದ್ದನ್ನು ಕೇಂದ್ರ ಸರ್ಕಾರ ಭರಿಸುತ್ತಿತ್ತು.

English summary
BJP government in Karnataka and Central anti-farmer alleged Karnataka farmer chief minister H.D.Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X