ಸಿದ್ದರಾಮಯ್ಯ ತವರಲ್ಲೇ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಸಿದ್ಧ
ನಂಜನಗೂಡು, ಸೆಪ್ಟೆಂಬರ್.04 ಸಂಸದ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರೈತ ಚೈತನ್ಯ ಯಾತ್ರೆ ಭಾನುವಾರ ಸೆಪ್ಟೆಂಬರ್13 ರಂದು ಮೈಸೂರಿನಲ್ಲಿ ಸಮಾರೋಪಗೊಳ್ಳಲಿದೆ.
ರಾಜ್ಯದ ಉದ್ದಗಲಕ್ಕೆ ಪ್ರವಾಸ ನಡೆಸಿದ ಬಿಎಸ್ ವೈ ಮತ್ತು ನಾಯಕರು ರೈತರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ. ಸಮಾರೋಪ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸುತ್ತಾರೆ ಎಂದು ಹೇಳಲಾಗಿದೆ.[ಬಿಎಸ್ ಯಡಿಯೂರಪ್ಪ ರಾಜ್ಯ ರಾಜಕಾರಣಕ್ಕೆ ಮರಳಿದರೆ?]

ಮೊದಲಿನಿಂದಲೂ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿಕೊಂಡು ಬಂದ ಬಿಎಸ್ ವೈ ಭಾನುವಾರ ಸಿಎಂ ತವರಿನಲ್ಲೇ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಯಾತ್ರೆ ನಂಜನಗೂಡಿನಲ್ಲಿ ಸಮಾವೇಶ ಗೊಂಡಿತ್ತು. ಈ ವೇಳೆ ಮಾತನಾಡಿದ ಬಿಎಸ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.['ನಾಳೆಯಿಂದ ಸಿದ್ದರಾಮಯ್ಯ ಅವರೇ ಹೈಕಮಾಂಡ್']
ಬಿಜೆಪಿಯ ಪ್ರಮುಖ ನಾಯಕರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಿಟಿ ರವಿ, ಶ್ರೀರಾಮಲು ಸೇರಿದಂತೆ ಅನೇಕರು ಯಾತ್ರೆಯಲ್ಲಿ ಭಾಗಹಿಸಿದ್ದರು. ಪವರ್ ಕಟ್, ರೈತರ ಸಾಲ ಮನ್ನಾ, ಆತ್ಮಹತ್ಯೆ ಪ್ರಕರಣಗಳಿಗೆ ಸಿಗದ ಪರಿಹಾರ, ಕಬ್ಬು ಬೆಳೆಗಾರರ ಹೋರಾಟ, ,ಕಳಸಾ ಬಂಡೂರಿ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿದ್ದಾರೆ.












Click it and Unblock the Notifications