ಯುವ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯರನ್ನು ಬಿಜೆಪಿಗೆ ಸೆಳೆಯಲು ಯತ್ನ
ಮೇಲುಕೋಟೆ, ನವೆಂಬರ್ 16: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭರವಸೆ ಹುಟ್ಟಿಸಿದ್ದ ಯುವನಾಯಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬಿಜೆಪಿಯು ತನ್ನತ್ತ ಸೆಳೆಯುವ ಯತ್ನ ಮಾಡುತ್ತಿದೆ.
ರೈತ ನಾಯಕ ದಿವಂಗತ ಪುಟ್ಟಣ್ಣಯ್ಯ ಅವರ ಮಗ ದರ್ಶನ್ ಪುಟ್ಟಣ್ಣಯ್ಯ ಅವರು ತಂದೆಯ ಕಾಲಾನಂತರ ಅಮೆರಿಕೆಯಿಂದ ಮೇಲುಕೋಟೆಗೆ ಬಂದು ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಜೆಡಿಎಸ್‌ನ ಸಿ.ಎಸ್.ಪುಟ್ಟರಾಜು ವಿರುದ್ಧ ಸೋಲನುಭವಿಸಿದ್ದರು.
ಸ್ವರಾಜ್ ಇಂಡಿಯಾ ಪಕ್ಷದಿಂದ ರೈತ ಸಂಘ ಹಾಗೂ ಕಾಂಗ್ರೆಸ್‌ನ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅವರು ಮೊದಲ ಬಾರಿಗೆ ಉತ್ತಮ ಮತಗಳಿಸುವ ಮೂಲಕ ಗಮನಸೆಳೆದಿದ್ದಾರೆ. ಅಲ್ಪ ಸಮಯದಲ್ಲಿಯೇ ಕ್ಷೇತ್ರದಲ್ಲಿ ತಮ್ಮದೇ ಆದ ಅಭಿಮಾನಿಗಳ ಬಳಗವನ್ನೂ ಸಂಪಾದಿಸಿದ್ದಾರೆ.
ಉದಯೋನ್ಮುಖ ನಾಯಕ ಎನ್ನಲಾಗುತ್ತಿರುವ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬಿಜೆಪಿಯು ತನ್ನತ್ತ ಸೆಳೆಯಲು ಯತ್ನಿಸುತ್ತಿದ್ದು, ಕ್ಷೇತ್ರದಲ್ಲಿ ಕ್ಷೀಣವಾಗಿರುವ ಬಿಜೆಪಿಗೆ ದರ್ಶನ್ ಪುಟ್ಟಣ್ಣಯ್ಯ ಮೂಲಕ ಬಲ ತುಂಬಲು ನೋಡುತ್ತಿದೆ.

ಆರ್.ಅಶೋಕ್ ನೇತೃತ್ವ
ಕೆಲವು ದಿನಗಳ ಹಿಂದಷ್ಟೆ ನಡೆದ ಮಂಡ್ಯ ಲೋಕಸಭೆ ಉಪಚುನಾವಣೆ ಸಮಯದಲ್ಲಿ ಬಿಜೆಪಿಯ ಮುಖಂಡ ಆರ್.ಅಶೋಕ್ ಅವರು ದರ್ಶನ್ ಪುಟ್ಟಣ್ಣಯ್ಯ ಅವರ ತಾಯಿಯವರನ್ನು ಭೇಟಿ ಆಗಿದ್ದರು. ಈ ಸಂದರ್ಭದಲ್ಲಿ ನಡೆದ ಮಾತು-ಕತೆ ತರುವಾಯ ಬಿಜೆಪಿಯು ಹೀಗೊಂದು ಪ್ರಯತ್ನ ಮಾಡುತ್ತಿದೆ.

ಮಂಡ್ಯದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ
ಮಂಡ್ಯದಲ್ಲಿ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿಯು ಉತ್ತಮ ಪ್ರದರ್ಶನ ತೋರಿದ್ದು, ಮೊದಲ ಬಾರಿಗೆ ಲಕ್ಷಕ್ಕಿಂತಲೂ ಹೆಚ್ಚು ಮತಗಳನ್ನು ಪಡೆದುಕೊಂಡಿದೆ. ಪಕ್ಷದ ಪರವಾಗಿ ಉತ್ತಮ ಅಲೆಯಿರುವ ಈ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಬಿಜೆಪಿ ಈ ಅಡಿ ಇಟ್ಟಿದೆ.

ಲೋಕಸಭೆ ಚುನಾವಣೆ ಟಿಕೆಟ್ ಭರವಸೆ
ರಾಜ್ಯ ರಾಜಕೀಯದಲ್ಲಿ ನೆಲೆ ಕಾಣಬೇಕೆಂದು ಅಮೆರಿಕೆಯಿಂದ ವಾಪಸ್ಸಾಗಿ, ಚುನಾವಣೆಯಲ್ಲಿ ಸೋತು ನಿರಾಶೆ ಅನುಭವಿಸಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಈ ಬಾರಿ ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವ ಭರವಸೆಯನ್ನು ಬಿಜೆಪಿ ನೀಡಿದೆ ಎನ್ನಲಾಗಿದೆ.

ತಂದೆ ಬಿಜೆಪಿ ವಿರೋಧಿಸಿ ರಾಜಕೀಯ ಮಾಡಿದ್ದರು
ಬಿಜೆಪಿಯನ್ನು ವಿರೋಧಿ ರಾಜಕೀಯವನ್ನು ಮಾಡುತ್ತಿರುವ ಸ್ವರಾಜ್ ಇಂಡಿಯಾದ ಪಕ್ಷ ಹಾಗೂ ರೈತ ಸಂಘದ ಸದಸ್ಯರಾಗಿರುವ ದರ್ಶನ್ ಪುಟ್ಟಣ್ಣಯ್ಯ ಅವರು ಬಿಜೆಪಿಯನ್ನು ಸೇರಲು ಬಯಸುತ್ತಾರೆಯೆ ಎಂಬುದು ಪ್ರಶ್ನೆ. ಅವರ ತಂದೆಯವರೂ ಸಹ ಬಿಜೆಪಿಯನ್ನು ವಿರೋಧಿಸುತ್ತಲೇ ರಾಜಕಾರಣ ಮಾಡಿದ್ದರು.

ಕಾಂಗ್ರೆಸ್‌ನಿಂದಲೂ ಸೆಳೆಯುವ ಯತ್ನ ಆರಂಭ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಹಾಗಾಗಿ ದರ್ಶನ್ ಪುಟ್ಟಣ್ಣಯ್ಯ ಬಿಜೆಪಿಗೆ ಸೆಳೆಯಲು ಯತ್ನ ಆರಂಭಿಸುತ್ತಿದ್ದಂತೆ ಇತ್ತ ಕಾಂಗ್ರೆಸ್ ಕೂಡ ದರ್ಶನ್ ಅವರನ್ನು ಕಾಂಗ್ರೆಸ್ ಸೆಳೆಯುವ ಯತ್ನ ಆರಂಭಿಸುವ ಸಾಧ್ಯತೆ ದಟ್ಟವಾಗಿದೆ.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್












Click it and Unblock the Notifications