• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಿಸಾನ್ ಸಮ್ಮಾನ್ ಯೋಜನೆ, ತಿಂಗಳೊಳಗೆ ಮೊದಲ ಕಂತು ಪಾವತಿ: ಸಿಎಂ

|

ಬೆಂಗಳೂರು, ಆಗಸ್ಟ್ 2: ಕೇಂದ್ರ ಸರ್ಕಾರವು ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ವಾರ್ಷಿಕ 6000 ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4000 ರೂಪಾಯಿ ನೆರವಿನ ಯೋಜನೆ ಜಾರಿಗೆ ಇನ್ನೆರಡು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಮೊದಲ ಕಂತಿನ 2000 ರೂಪಾಯಿಗಳನ್ನು 15-20 ದಿನಗಳೊಳಗೆ ರೈತರಿಗೆ ಪಾವತಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಂಪುಟ ರಚನೆ ಪಕ್ಕಕ್ಕಿಟ್ಟು ಅಧಿಕಾರಿಗಳಿಗೆ ಯಡಿಯೂರಪ್ಪ ಕ್ಲಾಸ್ಸಂಪುಟ ರಚನೆ ಪಕ್ಕಕ್ಕಿಟ್ಟು ಅಧಿಕಾರಿಗಳಿಗೆ ಯಡಿಯೂರಪ್ಪ ಕ್ಲಾಸ್

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಿಎಂಕಿಸಾನ್ ಯೋಜನೆಯಿಂದ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತನಿಗೆ ಅಲ್ಪ ನೆರವಾದರೂ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಬರ ಪರಿಸ್ಥಿತಿ: ರಾಜ್ಯದಲ್ಲಿ ಈ ಬಾರಿಯೂ ಮಳೆಯ ತೀವ್ರ ಕೊರತೆ ಇದೆ. 2019ರ ಜನವರಿಯಿಂದ ಮೇ 31ರ ವರೆಗೆ ಪೂರ್ವ ಮುಂಗಾರು ಮಳೆಯಲ್ಲಿ ಸರಾಸರಿ ಶೇ. 42 ರಷ್ಟು ಕೊರತೆ ಇದೆ.

ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ದಿನಾಂಕ ಬಹುತೇಕ ಪಕ್ಕಾಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ದಿನಾಂಕ ಬಹುತೇಕ ಪಕ್ಕಾ

ರಾಜ್ಯಕ್ಕೆ ಮುಂಗಾರು ಪ್ರವೇಶ ಎರಡು ವಾರ ತಡವಾಗಿದ್ದಲ್ಲದೆ, ಈ ವರೆಗೆ ವಾಡಿಕೆ ಮಳೆಗಿಂತ ಶೇ. 18ರಷ್ಟು ಮಳೆ ಕೊರತೆ ಇದೆ. ಜುಲೈ ತಿಂಗಳಲ್ಲಿಯೂ 3067ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಟ್ಯಾಂಕರ್‍ಗಳ ಮೂಲಕ ಇಲ್ಲವೇ ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಕೆಯಾಗುತ್ತಿರುವುದು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ ಎಂದು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.

ಜನ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಮೇವು ಲಭ್ಯತೆ ಮತ್ತು ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವ ಮೂಲಕ ಜನ ವಲಸೆ ಹೋಗುವುದನ್ನು ತಡೆಗಟ್ಟಲು ಹಾಗೂ ಅಂತರ್ಜಲ ವೃದ್ಧಿ ಮತುತ ಜಲಸಂರಕ್ಷಣೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಈ ವರೆಗೆ 618.1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸುಮಾರು 422 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಬರ ಪರಿಹಾರ ಮತ್ತಿತರ ತುರ್ತು ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಟ್ಯಾಂಕರುಗಳಿಂದ, ಖಾಸಗಿ ಬೋರ್‍ವೆಲ್‍ಗಳ ಮೂಲಕ ನೀರು ಪೂರೈಕೆ ಮಾಡುವಾಗ ಟ್ಯಾಂಕರು ಸ್ವಚ್ಛತೆ ಕಡೆಗೆ ನಿಗಾ ವಹಿಸುವಂತೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಬೇಕು ಎಂದು ಸೂಚಿಸಿದರು.

ಜಾನುವಾರುಗಳಿಗೆ ನೀರು, ಮೇವಿನ ಲಭ್ಯತೆ, ಅಗತ್ಯವಿದ್ದಲ್ಲಿ ಮೇವು ಬ್ಯಾಂಕ್ ಸ್ಥಾಪನೆ, ಗೋಶಾಲೆಗಳನ್ನು ತೆರೆಯುವುದು ಮೊದಲಾದ ಕ್ರಮಗಳನ್ನು ಅಗತ್ಯವನ್ನಾಧರಿಸಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗಳಿಗೆ ಭೇಟಿ: ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ವಿ.ಮಂಜುಳಾ ಭಾಗವಹಿಸಿದ್ದರು.

English summary
Chief minister BS Yeddyurappa directed the govt officials to transfer the first installment of PM Kisan Samman Scheme amount.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X