ಡಾ ಹೆಗ್ಗೆಡೆಯವರೇ ಸಿಎಂ ಆಗಲಿ : ಎಚ್ಡಿಕೆ

ವಿಜಾಪುರ, ಸೆ. 11 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾದರೆ 224 ಶಾಸಕರು ಏಕೆ ಬೇಕು ? ಅವರನ್ನೇ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ಡಾ ವೀರೇಂದ್ರ ಹೆಗ್ಗಡೆಯವರಿಗೆ ವಹಿಸೋಣ. ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಲಿ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಯನ್ನು ಅವರು ತೀವ್ರವಾಗಿ ಟೀಕಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳು ಜವಾಬ್ದಾರಿ ನೋಡಿಕೊಳ್ಳಲು ಆಗದಿದ್ದರೆ ಸರಕಾರ ಏಕೆ ? ವೀರೇಂದ್ರ ಹೆಗ್ಗಡೆಯವರೇ ಮುಖ್ಯಮಂತ್ರಿಗಳಾಗಲಿ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ಜನತೆ ಬರ ನೆರೆಯಿಂದ ಕಂಗಾಲಾಗಿದೆ. ಆದರೆ, ಯಡಿಯೂರಪ್ಪ ವಿದೇಶ ಪ್ರವಾಸ ಮಾಡಿ ಮಜಾ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಬರೀ ಕೇಂದ್ರ ಸರಕಾರದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ನಂಬಿ ಕುಳಿತ ಮುಖ್ಯಮಂತ್ರಿಗಳು ಅದನ್ನು ಕೂಡಾ ಸರಿಯಾಗಿ ಅನುಷ್ಠಾನ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+