ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲಾರ; ಭಾರೀ ಮಳೆಗೆ ಮಣ್ಣುಪಾಲಾದ 3 ಲಕ್ಷ ಮೌಲ್ಯದ ಕ್ಯಾಪ್ಸಿಕಂ ಬೆಳೆ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಮೇ 30: ಕೋಲಾರ ಜಿಲ್ಲೆಯಲ್ಲಿ ನಿನ್ನೆ ಸಂಜೆ ಧಾರಾಕಾರ ಮಳೆ ಸುರಿದಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೆಲವೆಡೆ ಹಾನಿಯೂ ಸಂಭವಿಸಿದೆ.

ಬಿರುಗಾಳಿ ಸಹಿತ ಭಾರಿ ಮಳೆಗೆ ಜಿಲ್ಲೆಯ ರೈತರ ಬೆಳೆಗಳು ನಾಶವಾಗಿವೆ. ಕೋಲಾರ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದ್ದು, ಇಲ್ಲಿನ ರಾಜಕಲ್ಲಹಳ್ಳಿ ಗ್ರಾಮದ ರೈತ ಗೋಪಾಲಕೃಷ್ಣ ಎಂಬುವರ 2 ಎಕರೆ ಕ್ಯಾಪ್ಸಿಕಂ ಬೆಳೆ ಸಂಪೂರ್ಣ ನಾಶವಾಗಿವೆ.

Capsicum Crop Worth 3 Lakhs Destroyed By Rain In Kolar

 ಭತ್ತದ ಬೆಳೆ ನಷ್ಟ ಪರಿಹಾರಕ್ಕೆ ದಾವಣಗೆರೆ ರೈತರಿಂದ ಪತ್ರ ಚಳವಳಿ ಭತ್ತದ ಬೆಳೆ ನಷ್ಟ ಪರಿಹಾರಕ್ಕೆ ದಾವಣಗೆರೆ ರೈತರಿಂದ ಪತ್ರ ಚಳವಳಿ

ರೈತ ಗೋಪಾಲ ಕೃಷ್ಣ ಅವರು ಎರಡು ಎಕರೆ ಜಮೀನಿನಲ್ಲಿ ಕ್ಯಾಪ್ಸಿಕಂ ಬೆಳೆದಿದ್ದರು. ಆದರೆ ಜೋರು ಗಾಳಿ ಮಳೆಯಿಂದಾಗಿ ಕ್ಯಾಪ್ಸಿಕಂ ಗಿಡಗಳೆಲ್ಲವೂ ನೆಲಕ್ಕೆ ಉರುಳಿ ಬಿದ್ದಿವೆ. ಇದರಿಂದ ಸುಮಾರು 3 ಲಕ್ಷ ಬೆಲೆ ಬಾಳುವ ಕ್ಯಾಪ್ಸಿಕಂ ಬೆಳೆ ನಾಶವಾಗಿವೆ. ಸರ್ಕಾರವು ಈ ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕೆಂದು ಗೋಪಾಲಕೃಷ್ಣ ಅವರು ಮನವಿ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದಲೂ ಜಿಲ್ಲೆಯಲ್ಲಿ ಸಂಜೆಯಾಗುತ್ತಿದ್ದಂತೆ ಮಳೆ ಶುರುವಾಗುತ್ತಿದೆ. ಜೋರು ಗಾಳಿ ಮಳೆಯಲ್ಲಿ ರೈತರು ತಾವು ಬೆಳೆದ ಬೆಳೆಗಳನ್ನು ಕಾಪಾಡಿಕೊಳ್ಳುವುದೂ ದುಸ್ತರವಾಗುತ್ತಿದೆ.

English summary
3 lakhs worth capsicum crops destroyed by rain in rajakallahalli of kolar district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X