Cauvery Dispute: ಇಂದೇ ಮಡ್ಯ ಬಂದ್‌ಗೆ ಕರೆ, ಯಾರೆಲ್ಲಾ ಭಾಗಿ?, ಇಲ್ಲಿದೆ ವಿವರ
ಮಂಡ್ಯ, ಸೆಪ್ಟೆಂಬರ್, 23: ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಈಗಾಗಲೆ ರಾಜ್ಯದೆಲ್ಲೆಡೆ ರೈತರು ಸಮರ ಮುಂದುವರೆಸಿದ್ದಾರೆ. ಹಾಗೆಯೇ ಇಂದು (ಸೆಪ್ಟೆಂಬರ್ 23) ರೈತರು ಮಂಡ್ಯ ಬಂದ್‌ಗೆ ಕರೆ ನೀಡಿದ್ದಾರೆ. ರೈತ ಹಿತರಕ್ಷಣಾ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿದಂತೆ ಇತರ ಸಂಘಟನೆಗಳಿಂದ ಮಂಡ್ಯ ಬಂದ್‌ಗೆ ಬೆಂಬಲ ಸೂಚಿಸಿವೆ. ಅಲ್ಲದೆ ಹಲವು ರಾಜಕೀಯ ನಾಯಕರು, ಕನ್ನಡ ಚಿತ್ರರಂಗದ ನಟ, ನಟಿಯರು ಭಾಗಿಯಾಗುವ ಸಾಧ್ಯತೆಯಿದೆ.
ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಇಂದು ಬೆಳಗ್ಗೆ ಸುಮಾರು 8 ಗಂಟೆಯಿಂದಲೆ ರೈತರ ಸಮರ ಮುಂದುವರೆಸಲಿದ್ದಾರೆ ಎನ್ನುವ ಮಾಹಿತಿ ಇದೆ. ಮಂಡ್ಯ ನಗರ ಬಂದ್‌ಗೆ ಕನ್ನಡ ಪರ ಸಂಘಟನೆಗಳು, ವರ್ತಕರು ಸೇರಿದಂತೆ ಅನೇಕ ಸಂಘ-ಸಂಸ್ಥೆಗಳು ಈಗಾಗಲೇ ಬೆಂಬಲ ಸೂಚಿಸಿವೆ.

ಮಂಡ್ಯದ ಸಂಜಯ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಉರುಳು ಸೇವೆ ನಡೆಯಲಿದ್ದು, ನಗರದ ಮುಖ್ಯ ರಸ್ತೆಗಳಲ್ಲಿ ಬೈಕ್ ರ‍್ಯಾಲಿಯೂ ನಡೆಯಲಿದೆ. ಜೊತೆಹೆ ಈ ಬಾರಿ ರೈತರ ಸಮರಕ್ಕೆ ಬಿಜೆಪಿ, ಜೆಡಿಎಸ್ ನಾಯಕರು ಕೂಡ ಸಾಥ್ ನೀಡಲಿದ್ದಾರೆ ಎನ್ನುವ ಮಾಹಿತಿ ಇದೆ.
ಮಂಡ್ಯ ಜಿಲ್ಲೆಯ ರೈತರು ಮಂಡ್ಯ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಬೆಳಗ್ಗೆ 10 ಗಂಟೆಗೆ ಮಂಡ್ಯಕ್ಕೆ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಆಗಮಿಸಲಿದ್ದಾರೆ. ಮಧ್ಯಾಹ್ನದ ವೇಳೆಗೆ ನವದೆಹಲಿಯಿಂದ ನೇರವಾಗಿ ಮಂಡ್ಯಕ್ಕೆ ಆಗಮಿಸಲಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಕಾವೇರಿಗಾಗಿ ಹೋರಾಟ ಮಾಡುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications