ಹಳೆಯ ದರದಲ್ಲಿಯೇ ರಸಗೊಬ್ಬರ ಮಾರಾಟಕ್ಕೆ ಸೂಚಿಸಿದ ಸರ್ಕಾರ
ನವದೆಹಲಿ, ಏಪ್ರಿಲ್ 9: ಯೂರಿಯಾಯೇತರ ರಸಗೊಬ್ಬರಗಳ ಗರಿಷ್ಠ ಚಿಲ್ಲರೆ ದರವನ್ನು (ಎಂಆರ್‌ಪಿ) ಹೆಚ್ಚಳ ಮಾಡದಂತೆ ಮತ್ತು ಅವುಗಳನ್ನು ಹಿಂದಿನ ದರದಲ್ಲಿಯೇ ಮಾರಾಟ ಮಾಡುವಂತೆ ರಸಗೊಬ್ಬರ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಸೂಚಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಯೂರಿಯಾಯೇತರ ರಸಗೊಬ್ಬರಗಳ ಆಂತರಿಕ ಚಿಲ್ಲರೆ ದರದಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಸಗೊಬ್ಬರ ಕಂಪೆನಿಗಳಿಗೆ ಈ ಸಂಬಂಧ ನಿರ್ದೇಶನ ನೀಡಲಾಗಿದೆ.
ಡಿ ಅಮೋನಿಯಂ ಫಾಸ್ಫೇಟ್ (ಡಿಎಪಿ), ಮ್ಯೂರಿಯೇಟ್ ಆಫ್ ಪೊಟ್ಯಾಶ್ (ಎಂಒಪಿ) ಮತ್ತು ಎನ್‌ಪಿಕೆಯಂತಹ ಯೂರಿಯಾಯೇತರ ರಸಗೊಬ್ಬರಗಳ ಚಿಲ್ಲರೆ ದರದ ಮೇಲೆ ನಿಯಂತ್ರಣವಿರುವುದಿಲ್ಲ ಮತ್ತು ಅವುಗಳನ್ನು ಉತ್ಪಾದಕರು ನಿರ್ಧರಿಸುತ್ತಾರೆ. ಕೇಂದ್ರ ಸರ್ಕಾರ ಪ್ರತಿ ವರ್ಷ ಅವುಗಳಿಗೆ ಸಬ್ಸಿಡಿ ನಿಗದಿಮಾಡುತ್ತದೆ.

'ಭಾರತ ಸರ್ಕಾರವು ಉನ್ನತ ಮಟ್ಟದ ಸಭೆ ಕರೆದಿತ್ತು ಮತ್ತು ಡಿಎಪಿ, ಎಂಒಪಿ ಮತ್ತು ಎನ್‌ಪಿಕೆಗಳ ದರವನ್ನು ಏರಿಕೆ ಮಾಡದಂತೆ ರಸಗೊಬ್ಬರ ಕಂಪೆನಿಗಳಿಗೆ ಸೂಚನೆ ನೀಡಿತ್ತು. ಇದಕ್ಕೆ ರಸಗೊಬ್ಬರ ಕಂಪೆನಿಗಳು ಸಮ್ಮತಿ ಸೂಚಿಸಿವೆ' ಎಂದು ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.
ಹಳೆಯ ದರದಲ್ಲಿಯೇ ಸಂಕೀರ್ಣ ರಸಗೊಬ್ಬರಗಳನ್ನು ಮಾರಾಟ ಮಾಡುವಂತೆ ಸೂಚನೆ ನೀಡಲಾಗಿದೆ. ರೈತರು ಡಿಎಪಿ, ಎಂಒಪಿ ಮತ್ತು ಎನ್‌ಪಿಕೆ ಪೌಷ್ಟಿಕಾಂಶಗಳನ್ನು ಹಿಂದಿನ ದರದಲ್ಲಿಯೇ ಪಡೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಸತತ ಬೆಲೆ ಹೆಚ್ಚಳದಿಂದ ತತ್ತರಿಸಿದ್ದ ರೈತರಿಗೆ ರಸಗೊಬ್ಬರ ದರದಲ್ಲಿ ಏಕಾಏಕಿ ಭಾರಿ ಹೆಚ್ಚಳ ಮಾಡಿದ್ದು, ಆತಂಕ ಮೂಡಿಸಿತ್ತು. ಕ್ರಿಭ್ಕೊ, ಎಂಸಿಎಫ್‌ಎಲ್, ಜುವಾರಿ ಆಗ್ರೋ ಕೆಮಿಕಲ್ಸ್, ಪ್ಯಾರಾಡೀಪ್ ಪ್ರಾಸ್ಫೇಟ್ಸ್ ಮುಂತಾದ ಕಂಪೆನಿಗಳು ಡಿಎಪಿ ದರವನ್ನು ಪ್ರತಿ ಚೀಲಕ್ಕೆ 1200ರಿಂದ 1,900ರವರೆಗೂ ಹೆಚ್ಚಿಸಿವೆ. ಎನ್‌ಪಿಕೆ 10.26.26 ರಸಗೊಬ್ಬರ 1175 ರೂ. ಇದ್ದಿದ್ದು ಹೊಸ ಬೆಲೆ 1775 ರೂ. ಆಗಿದೆ 12.32.16 ರಸಗೊಬ್ಬರ ಬೆಲೆ 1185 ರೂ ಇತ್ತು. ಪರಿಷ್ಕೃತ ದರ 1800 ರೂ ಆಗಿದೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications