ರೈತರ ಸಮಸ್ಯೆಗಳ ಸ್ಪಂದನೆಗೆ ಕೃಷಿ ಇಲಾಖೆಯಿಂದ ಸಹಾಯವಾಣಿ ಸ್ಥಾಪನೆ

ಚಿತ್ರದುರ್ಗ, ಏಪ್ರಿಲ್ 30: ಕೋವಿಡ್-19ರ ಎರಡನೇ ಅಲೆಯ ಪ್ರಯುಕ್ತ ಹೇರಲಾಗಿರುವ ಲಾಕ್‌ಡೌನ್ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತು ಕೃಷಿ ಇಲಾಖೆ ವತಿಯಿಂದ ಕೋವಿಡ್-19 ಸಹಾಯವಾಣಿ ಸ್ಥಾಪಿಸಲಾಗಿದೆ.

ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲೆಯ ರೈತರು ಈ ಸಂಕಷ್ಟದ ಸಮಯದಲ್ಲಿ ಎದುರಿಸಬಹುದಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ, ಸಲಹೆ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೋವಿಡ್-19 ಸಹಾಯವಾಣಿ ಆರಂಭಿಸಲಾಗಿದೆ.

ರೈತರು ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ, ಸಲಹೆ, ಮಾರ್ಗದರ್ಶನ ಪಡೆಯಲು ಮೊಬೈಲ್ ಸಂಖ್ಯೆ 8277931029 ಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

Chitradurga: Establishment Of Helpline From Agriculture Department To Solve Farmers Issues

ಹೆಚ್ಚಿನ ಮಾಹಿತಿಗಾಗಿ ರೈತರು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+