ಕೃಷಿ ಉತ್ತೇಜನಕ್ಕೆ ಶೇ.1 ಬಡ್ಡಿ ದರ ಬೆಳೆ ಸಾಲ

Yeddyurappa
ಬೆಂಗಳೂರು, ನ. 1 : ರೈತರಿಗೆ ಶೇ.೩ರ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡುತ್ತಿರುವ ರಾಜ್ಯ ಸರಕಾರ ಈಗ ಕೃಷಿಕರಿಗೆ ಇನ್ನಷ್ಟು ಉತ್ತೇಜನ ನೀಡಲು ಶೇ.1ರ ಬಡ್ಡಿ ದರದಲ್ಲಿ ಸಾಲ ನೀಡಲು ಆಲೋಚಿಸಿದೆ.

ಮುಂದಿನ ಬಜೆಟ್‌ನಲ್ಲಿ ಈ ಯೋಜನೆ ಪ್ರಕಟಿಸಲು ನಿರ್ಧರಿಸಲಾಗಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವ ರೈತರಿಗೆ ಈ ಸೌಲಭ್ಯ ಸಿಗಲಿದೆ. ಅವಧಿ ಯೊಳಗೆ ಸಾಲ ಮರು ಪಾವತಿಸದ ರೈತರು ಮಾಮೂಲಿ ಬಡ್ಡಿ ದರದಲ್ಲಿ ಸಾಲ ಮರು ಪಾವತಿ ಮಾಡಬೇಕಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಚಿಕ್ಕಬಳ್ಳಾಪುರಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಸಹಕಾರ ಬ್ಯಾಂಕ್‌ಗಳಲ್ಲಿ ಶೇ.3ರ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡಲಾಗುತ್ತಿದ್ದು, ರೈತರ ಹಿತದೃಷ್ಟಿಯಿಂದ ಬಡ್ಡಿ ದರವನ್ನು ಶೇ.1ಕ್ಕೆ ಇಳಿಸಲಾಗುವುದು ಎಂದು ಅವರು ಹೇಳಿದರು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸುತ್ತಿದೆ. ದೇಶದಲ್ಲೇ ಇಷ್ಟು ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸುತ್ತಿರುವ ರಾಜ್ಯ ಕರ್ನಾಟಕ. ರೈತನ ಮಗನಾಗಿರುವ ತಮಗೆ ಕೃಷಿಕ ಎದುರಿಸುತ್ತಿರುವ ಸಮಸ್ಯೆಗಳೇನೆಂಬುದು ಗೊತ್ತಿದೆ. ಕಡಿಮೆ ಬಡ್ಡಿ ದರದಲ್ಲಿ ಲ ವಿತರಿಸುವುದಕ್ಕೆ ಹಣಕಾಸಿನ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷ ಸಕಲ ಸಿದ್ಧತೆ ನಡೆಸಿದೆ. ಪ್ರತಿ ಜಿಲ್ಲೆ ಹಾಗೂ ತಾಲೂಕಿನಲ್ಲಿಯೂ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುವುದು. ಚುನಾವಣೆ ಮುಂದೂಡುವ ಯಾವುದೇ ಪ್ರಯತ್ನವಿಲ್ಲ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+