• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೀದರ್ ನಲ್ಲಿ ಮುಖ್ಯಮಂತ್ರಿಗಳ ಮೊದಲ 'ರೈತ ಸ್ಪಂದನ'

|

ಬೆಂಗಳೂರು, ನವೆಂಬರ್ 14 : ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮಾಡಿದ ಘೋಷಿಸಿದಂತೆ ರೈತ ಸ್ಪಂದನ ಕಾರ್ಯಕ್ರಮ ನಡೆಸಲು ಮುಂದಾಗಿದ್ದಾರೆ. ತಮ್ಮ ಮೊದಲ ʼರೈತ ಸ್ಪಂದನʼ ಕಾರ್ಯಕ್ರಮಕ್ಕೆ ನಾಳೆ (15-11-2018) ಬೀದರ್ ನಲ್ಲಿ ಚಾಲನೆ ನೀಡಲಿದ್ದಾರೆ.

ಕೃಷಿ ಒಂದು ಲಾಭದಾಯಕ ಉದ್ಯಮ ಎಂಬ ಭಾವವನ್ನು ನಮ್ಮ ರೈತರ ಮನದಲ್ಲಿ ಮೂಡಿಸಿ, ಕೃಷಿಕರನ್ನು ಆಧುನಿಕ ತಂತ್ರಜ್ಞಾನದತ್ತ ಸೆಳೆದೊಯ್ಯುವುದು ರೈತ ಸ್ಪಂದನ ಕಾರ್ಯಕ್ರಮದ ಮೂಲ ಆಶಯ.

ಆಗಸ್ಟ್ ತಿಂಗಳಿನಲ್ಲಿ ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ʼಭತ್ತ ನಾಟಿʼ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿಗಳು ಇದರ ಮುಂದುವರೆದ ಭಾಗವಾಗಿ ನಾಳೆ ಮಧ್ಯಾಹ್ನ 2.30ಕ್ಕೆ ಬೀದರ್ ಜಿಲ್ಲೆಯ ಚಿಟ್ಟಾ ಗ್ರಾಮದ ಪ್ರಗತಿಪರ ರೈತರ ತೋಟಕ್ಕೆ ಭೇಟಿ ನೀಡಲಿದ್ದಾರೆ.

ಸಂಜೆ 4 ಗಂಟೆಗೆ ಬೀದರ್ ನ ರಂಗಮಂದಿರದಲ್ಲಿ ಆಯೋಜಿಸಿರುವ ರೈತ ಸ್ಪಂದನ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲೆಯ ರೈತರೊಂದಿಗೆ ಸಂವಾದ ನಡೆಸುವರು.

'ಎಲ್ಲಾ ಹಳ್ಳಿಗಳಿಗೂ ಕುಡಿಯುವ ನೀರು ಕಲ್ಪಿಸಲು ಸಿಎಂರಿಂದ ಯೋಜನೆ'

ಬೀದರ್ ಜಿಲ್ಲೆಯ ಐವರು ಪ್ರಗತಿಪರ ರೈತರ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಯಾರಿಸಿರುವ ಸಾಕ್ಷ್ಯಚಿತ್ರ ಹಾಗೂ ಸರ್ಕಾರ ರೈತರಿಗೆ ನೀಡುತ್ತಿರುವ ಯೋಜನೆಗಳ ಕುರಿತ ಕಿರುಚಿತ್ರವನ್ನು ಮುಖ್ಯಮಂತ್ರಿಗಳು ವೀಕ್ಷಿಸುವರು.

ಮಿಶ್ರ ಬೆಳೆಯ ಪ್ರಯೋಗದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ರಾಯಚೂರು ಜಿಲ್ಲೆಯ ಪ್ರಗತಿಪರ ಕೃಷಿಕರಾದ ಕವಿತಾ ಉಮಾಶಂಕರ ಮಿಶ್ರಾ ಅವರು ಈ ಸಂದರ್ಭದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಬೀದರ್ ಜಿಲ್ಲೆಯ ಸುಮಾರು 800ಜನ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಇಸ್ರೇಲ್ ಕೃಷಿ ಪದ್ಧತಿ ಬಗ್ಗೆ ರೈತರಿಗೆ ಸಿಎಂ ಎಚ್ಡಿಕೆರಿಂದ ಪಾಠ

ಸಹಕಾರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಕೃಷಿ ಸಚಿವರಾದ ಎನ್. ಎಚ್.ಶಿವಶಂಕರ ರೆಡ್ಡಿ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರಾದ ರಾಜಶೇಖರ ಬಿ.ಪಾಟೀಲ ಅವರು ಭಾಗವಹಿಸಲಿದ್ದು, ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ನಾಗತಿಹಳ್ಳಿ ಚಂದ್ರಶೇಖರ್ ಸಂವಾದ ನಿರ್ವಹಣೆ ಮಾಡುವರು. ಬೀದರ್ ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಕೂಡ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

English summary
Karnataka CM HD Kumaraswamy to have Raita Spandana first interaction with farmers at Bidar. Karnataka government is planning to implement Israel technology in Agriculture sector.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X