ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ಆರಂಭ, ಮಾಧ್ಯಮಗಳಿಗೆ ನಿರ್ಬಂಧ
ಬೆಂಗಳೂರು, ನವೆಂಬರ್ 22: ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಕುಮಾರಸ್ವಾಮಿ ಅವರ ಸಭೆಯು ಕೃಷ್ಣದಲ್ಲಿ ಆರಂಭವಾಗಿದೆ.
ಸರ್ಕಾರದಲ್ಲಿ ಸಚಿವರಾಗಿರುವ ರಮೇಶ್ ಜಾರಕಿಹೊಳಿ, ಕಾಂಗ್ರೆಸ್‌ನ ಸತೀಶ್ ಜಾರಕಿಹೊಳಿ, ಶಾಸಕ ಆನಂದ್ ನ್ಯಾಮಗೌಡ, ಬಿಜೆಪಿಯ ನಿರಾಣಿ, ಉಮೇಶ್ ಕತ್ತಿ ಇನ್ನೂ ಹಲವು ಪ್ರಮುಖ ರಾಜಕೀಯ ಮುಖಂಡರ್ ಕಮ್ ಸಕ್ಕರೆ ಕಾರ್ಖಾನೆ ಮಾಲೀಕರು ಸಿಎಂ ಅವರ ಸಭೆಯಲ್ಲಿ ಭಾಗವಹಿಸಿದ್ದಾರೆ.
ಕಬ್ಬು ಬೆಳೆಗಾರರಿಗೆ ಬಾಕಿ ಹಣ ನೀಡದೆ ಇರುವ ಸಕ್ಕರೆ ಕಾರ್ಖಾನೆಗಳಿಗೆ ಸಿಎಂ ಎಚ್ಚರಿಕೆ ನೀಡುವ ಸಲುವಾಗಿ ಈ ಸಭೆಯನ್ನು ಕರೆದಿದ್ದಾರೆ. ಇದೇ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರಕ್ಕೆ ಅವಹಾಲುಗಳನ್ನೂ ಸಲ್ಲಿಸಿದ್ದಾರೆ.

ಕೃಷ್ಣ ಗೃಹ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು, ಮಾಧ್ಯಮಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಸಭೆಯ ನಂತರ ಸಿಎಂ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ನಿನ್ನೆ ಸಿಎಂ ಕುಮಾರಸ್ವಾಮಿ ಅವರು ನವೆಂಬರ್ 22 ರಂದು ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ್ದಾರೆ. ಅಂದೇ ಕೆಲವು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಯೂ ಸಭೆ ನಡೆಸಿದ್ದರು.












Click it and Unblock the Notifications