ಸಾಲಮನ್ನಾ ಆಗಿಲ್ಲ ಎಂದ ಮೋದಿಗೆ ಅಂಕಿ-ಅಂಶ ನೀಡಿದ ಕುಮಾರಸ್ವಾಮಿ
Recommended Video

ಬೆಂಗಳೂರು, ಫೆಬ್ರವರಿ 08: ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ನಲ್ಲಿ ಇಂದು ಮಾಡಿದ ಭಾಷಣದಲ್ಲಿ ಕರ್ನಾಟಕದ ಸಾಲಮನ್ನಾ ಬಗ್ಗೆ ಮಾಡಿದ ಟೀಕೆಗೆ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ಟರ್ ಮೂಲಕ ಉತ್ತರ ನೀಡಿದ್ದಾರೆ.
ಸಂಸತ್ನಲ್ಲಿ ಮಾತನಾಡಿದ್ದ ಮೋದಿ ಅವರು, ಕಾಂಗ್ರೆಸ್ನ ರೈತರ ಸಾಲಮನ್ನಾ ಭರವಸೆಯನ್ನು ಟೀಕಿಸುತ್ತಾ, ಕರ್ನಾಟಕದಲ್ಲಿ ಈ ವರೆಗೆ ಕೇವಲ 7000 ರೈತರ ಸಾಲಮನ್ನಾ ಆಗಿದೆ ಎಂದಿದ್ದರು.

ಇದಕ್ಕೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ಈಗಾಗಲೇ 1900 ಕೋಟಿ ಸಾಲಮನ್ನಾ ಆಗಿದೆ. ಇದರಿಂದ 4 ಲಕ್ಷ ರೈತರಿಗೆ ಅನುಕೂಲವಾಗಿದೆ ಎಂದು ಸಿಎಂ ಅವರು ಹೇಳಿದ್ದಾರೆ.
ಇದೇ ಫೆಬ್ರವರಿ ತಿಂಗಳಲ್ಲಿ ಅರ್ಹ ರೈತರ ಖಾಸಗಿ ಬ್ಯಾಂಕುಗಳ ಬೆಳೆ ಸಾಲದ ಮೊದಲ ಕಂತು ಪಾವತಿ ಮಾಡಲಾಗುತ್ತದೆ ಎಂದು ಸಿಎಂ ಟ್ವೀಟ್ನಲ್ಲಿ ಹೇಳಿದ್ದಾರೆ. ರೈತ ಸಾಲ ಮನ್ನಾದ ಮಾಹಿತಿಯುಳ್ಳ ಸರ್ಕಾರದ ವೆಬ್ಸೈಟ್ ವಿಳಾಸವನ್ನೂ ಟ್ವೀಟ್ಗೆ ಲಗತ್ತಿಸಿದ್ದಾರೆ.
ಮೋದಿ ಅವರು ಪ್ರಜಾಪ್ರಭುತ್ವದ ದೇವಸ್ಥಾನವಾದ ಸಂಸತ್ನಲ್ಲಿ ನಿಂದು ತಪ್ಪು ಮಾಹಿತಿ ಹರಡುತ್ತಿರುವುದು ದುರಾದೃಷ್ಟಕರ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
About Rs1900 crores already given to 4lakh farmers.All eligible commercial bank loanee farmers to get 1st installment in Feb itself.
— CM of Karnataka (@CMofKarnataka) February 7, 2019
Details@ https://t.co/K2DJo4P44F
It is unfortunate that PM @narendramodi continues to mislead the nation from the Temple of Democracy-theParliament pic.twitter.com/sGID7BHA1B
ನಾಳೆ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಅನ್ನು ಕುಮಾರಸ್ವಾಮಿ ಮಂಡಿಸಲಿದ್ದು, ಅರ್ಹ ರೈತರ ಖಾಸಗಿ ಬ್ಯಾಂಕುಗಳ ಬೆಳೆ ಸಾಲದ ಮೊದಲ ಕಂತಿನ ಹಣವನ್ನು ಬಜೆಟ್ನಲ್ಲಿ ಘೋಷಿಸುವ ಎಲ್ಲಾ ಸಾಧ್ಯತೆಗಳು ಇವೆ.
ಮೋದಿ ಅವರು ತಮ್ಮ ಭಾಷಣದಲ್ಲಿ ದೇವೇಗೌಡ ಅವರ ಉಲ್ಲೇಖವನ್ನೂ ಮಾಡಿದ್ದರು. ಅದಕ್ಕೆ ದೇವೇಗೌಡ ಅವರು ಸಹ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications