ಕಬ್ಬಿನ ಬಿಲ್ ಬಾಕಿ: ಪ್ರತಿಭಟನಾ ನಿರತ ರೈತರೊಂದಿಗೆ ಸಿಎಂ ಸಭೆ
ಬೆಳಗಾವಿ, ಡಿಸೆಂಬರ್ 22: ಸಚಿವ ರಮೇಶ್ ಜಾರಕಿಹೊಳಿ ಅವರ ಕಬ್ಬಿನ ಕಾರ್ಖಾನೆಯಿಂದ ಕಬ್ಬಿನ ಬಾಕಿ ಬಿಲ್ ಪಾವತಿಯಾಗಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಇಂದು ಮುಖ್ಯಮಂತ್ರಿಗಳು ಸಭೆ ನಡೆಸಿದರು.
ನವ ಕರ್ನಾಟಕ ನಿರ್ಮಾಣ ಯಾತ್ರಗೆಂದು ಬೆಳಗಾವಿ ಜಿಲ್ಲೆಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿಗಳು ಬೆಳಗಾವಿಯ ಅತಿಥಿ ಗೃಹದಲ್ಲಿ ರೈತ ಮುಖಂಡರ ಜೊತೆ ಚರ್ಚೆ ನಡೆಸಿದರು.

ಕಬ್ಬಿನ ಬಾಕಿ ಪಾವತಿಸಲು ಕಾಂಗ್ರೆಸ್ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸೂಚಿಸುವಂತೆ ಕೋರುವ ಜೊತೆಗೆ ವಿವಿಧ ಸಮಸ್ಯೆಗಳನ್ನು ಸಭೆಯಲ್ಲಿ ರೈತರು ಮುಖ್ಯಮಂತ್ರಿಗಳ ಮುಂದಿಟ್ಟರು.
ಬೆಳಗಾವಿ ಜಿಲ್ಲೆಯ ರೈತರಿಗೆ ಸರ್ಕಾರ ನೀಡಿರುವ ಕೊಡುಗೆಗಳ ಬಗ್ಗೆ ರೈತರ ಗಮನ ಸೆಳೆದ ಮುಖ್ಯಮಂತ್ರಿಗಳು ರೈತರ ಎಲ್ಲ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.












Click it and Unblock the Notifications