ಪಿಡಬ್ಲ್ಯೂಡಿ ಸೇರಿ ನಾಲ್ಕು ಇಲಾಖೆಗಳ ನೇಮಕಾತಿಗೆ ಸಿಎಂ ಅಸ್ತು

ಬೆಂಗಳೂರು, ಅಕ್ಟೋಬರ್ 12: ಪಿಡಬ್ಲ್ಯೂಡಿ ಸೇರಿದಂತೆ ವಿವಿಧ ನಾಲ್ಕು ಪ್ರಮುಖ ಇಲಾಖೆಗಳ ನೇಮಕಾತಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಮ್ಮತಿ ಸೂಚಿಸಿದ್ದಾರೆ.

ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಹಾಗೂ ಪಶುಸಂಗೋಪನೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಶುಕ್ರವಾರ ಚರ್ಚೆ ನಡೆಸಿದರು.

ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ, ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿಗಳು ಸಭೆಯಲ್ಲಿ ತಿಳಿಸಿದರು.

CM nod to recruitment in four major departments

ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ತೋಟಗಾರಿಕೆ ಸಚಿವ ಮನಗೂಳಿ ಮಲ್ಲಪ್ಪ ಚನ್ನವೀರಪ್ಪ , ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ , ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಲೋಕೋಪಯೋಗಿ ಮತ್ತು ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+