Tungabhadra Dam: ರೈತರಿಗೆ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬಳ್ಳಾರಿ, ಆಗಸ್ಟ್ 22: ಕೊಪ್ಪಳದ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಡ್ಯಾಂನ 19ನೇ ಕ್ರೆಸ್ಟ್‌ ಗೇಟ್ ಚೈನ್ ಲಿಂಕ್ ಮುರಿದು ಹೋಗಿ ಆತಂಕ ಉಂಟಾಗಿತ್ತು. ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿ, ನದಿಗೆ ಹರಿದು ಹೋಗುತ್ತಿದ್ದ ನೀರನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೈತರು ಸಂತಸಗೊಂಡಿದ್ದಾರೆ. ಆಗಸ್ಟ್ ಅಂತ್ಯ, ಸೆಪ್ಟೆಂಬರ್‌ನಲ್ಲಿ ಮಳೆ ಬಂದರೆ ಡ್ಯಾಂ ಮತ್ತೆ ಭರ್ತಿಯಾಗುವ ನಿರೀಕ್ಷೆಯಲ್ಲಿ ರೈತರು ಇದ್ದಾರೆ.

ಡ್ಯಾಂನ ಗೇಟ್ ನಂಬರ್ 19ರ ಅವಘಡ ಸಂಭವಿಸಿದಾಗ ಡ್ಯಾಂನಲ್ಲಿ ನೀರು ಸಂಗ್ರಹವಾಗಿದ್ದು 102 ಟಿಎಂಸಿ. ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 60 ಟಿಎಂಸಿ ನೀರನ್ನು ಹೊರಹಾಕಿ ರಿಪೇರಿ ಮಾಡಬೇಕಾಗಿರುವುದು ಎಂದು ಚಿಂತಿಸಲಾಗಿತ್ತು. ಆದರೆ ತಜ್ಞರ ಕಾರ್ಯ ಯೋಜನೆ ಮತ್ತು ಕಾರ್ಮಿಕರ ಕಠಿಣ ಶ್ರಮದಿಂದ ಕೇವಲ 30 ಟಿಎಂಸಿ ಮಾತ್ರ ನೀರನ್ನು ಹೊರಹರಿಸಿ, ಸಂಪೂರ್ಣ ರಿಪೇರಿ ಮಾಡಲಾಗಿದೆ.

CM Siddaramaiah Good News For Farmers Tungabhadra Dam Catchment Area

ಇದರಿಂದ 30 ಟಿಎಂಸಿಗೂ ಹೆಚ್ಚು ನೀರು ಉಳಿತಾಯ ಮಾಡಲಾಗಿದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಮುನ್ಸೂಚನೆ ಇದ್ದು, ಕೆಲವೇ ದಿನಗಳಲ್ಲಿ ತುಂಗಭದ್ರಾ ಡ್ಯಾಂ ಮತ್ತೆ ತುಂಬುವ ಎಲ್ಲಾ ಸಾಧ್ಯತೆ ಇದೆ. ಹಾಗಾಗಿ ಯಾರು ಆತಂಕ ಪಡಬಾರದು ಎಂದು ವಿಜಯನಗರ ಜಿಲ್ಲಾಡಳಿತ ಮನವಿ ಮಾಡಿತ್ತು.

ಸಿದ್ದರಾಮಯ್ಯ ಸಿಹಿಸುದ್ದಿ: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, "ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ಗೇಟ್ ಅಳವಡಿಕೆಯನ್ನು ಮೂರ್ನಾಲ್ಕು ದಿನಗಳ ಒಳಗಾಗಿ ಪೂರ್ಣಗೊಳಿಸಲಾಗಿದೆ. ದುರಸ್ತಿಯ ಅವಧಿಯಲ್ಲಿ 35 ಟಿಎಂಸಿ ನೀರು ಮಾತ್ರ ಪೋಲಾಗಿದೆ. ಇಂದಿಗೂ ಜಲಾಶಯದಲ್ಲಿ ಸುಮಾರು 78 ಟಿಎಂಸಿ ನೀರಿದೆ" ಎಂದು ಹೇಳಿದ್ದಾರೆ.

"ಇನ್ನೂ 20 ಟಿಎಂಸಿ ನೀರು ಹರಿದುಬಂದರೆ, ಜಲಾಶಯ ಶೇ 95 ರಷ್ಟು ಭರ್ತಿಯಾಗುತ್ತದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ ಮೊದಲ ಬೆಳೆಗೆ ನೀರು ಬಿಡಲಾಗಿದೆ. ಆದ್ದರಿಂದ ರೈತರಿಗೆ ಯಾವುದೇ ಆತಂಕ ಬೇಡ" ಎಂದು ತಿಳಿಸಿದ್ದಾರೆ.

ಗೇಟ್ ದುರಸ್ತಿ ಕಾರ್ಯ ಪೂರ್ಣಗೊಂಡ ಬಳಿಕ ಪೋಸ್ಟ್ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ ಗೇಟ್ ನಂಬರ್ 19ಕ್ಕೆ ಬದಲಿಯಾಗಿ 5 ತಡೆ ಗೇಟುಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿದ್ದು, ಈ ಸವಾಲಿನ ಕಾರ್ಯಕ್ಕೆ ಸ್ಥಳದಲ್ಲೇ ಮೊಕ್ಕಾಂಹೂಡಿ ಸೂಕ್ತ ಮಾರ್ಗದರ್ಶನ ನೀಡಿದ ಡ್ಯಾಂ ಗೇಟ್ ನಿರ್ಮಾಣ ಹಾಗೂ ಸುರಕ್ಷತೆ ತಜ್ಞ ನಿವೃತ್ತ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರಿಗೆ ಹಾಗೂ ಈ ಕಾರ್ಯದಲ್ಲಿ‌ ಅವಿರತ ಶ್ರಮಿಸಿದ ಎಲ್ಲಾ ಇಂಜಿನಿಯರರಿಗೆ, ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ, ಕಾರ್ಮಿಕರಿಗೆ ನಾಡಿನ ರೈತರ ಪರವಾಗಿ ಮತ್ತು ವೈಯಕ್ತಿಕವಾಗಿ ಧನ್ಯವಾದಗಳು' ಎಂದು ಹೇಳಿದ್ದರು.

'ಭಾರೀ ಪ್ರಮಾಣದ ನೀರಿನ ಹೊರಹರಿವಿದ್ದರೂ ಗೇಟ್ ಅಳವಡಿಕೆಯಂತಹ ಕಷ್ಟಸಾಧ್ಯವಾದ ಕಾರ್ಯವನ್ನು ಸಾಧ್ಯವಾಗಿಸಿ, ನಾಡಿನ ರೈತರನ್ನು ಆತಂಕದಿಂದ ಮುಕ್ತಗೊಳಿಸಿದ್ದೇವೆ. ತುಂಗಭದ್ರಾ ಜಲಾಶಯದ ನೀರನ್ನು ಆಧರಿಸಿ ಎರಡು ಬೆಳೆ ಬೆಳೆಯುವ ರೈತರು ಇನ್ನು ನಿಶ್ಚಿಂತರಾಗಿ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಬಹುದು. ನಾಡಿನ ಅನ್ನದಾತರು ಬಹುದೊಡ್ಡ ಸಂಕಷ್ಟದಿಂದ ಪಾರಾದದ್ದು ನನಗೆ ಖುಷಿ ನೀಡಿದೆ' ಎಂದು ಪೋಸ್ಟ್‌ ಹಾಕಿದ್ದರು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ 1633 ಅಡಿ ಎತ್ತರದ ತುಂಗಭದ್ರಾ ಜಲಾಶಯದಲ್ಲಿ ಈಗ 1626.31 ಅಡಿಗಳಷ್ಟು ನೀರಿನ ಸಂಗ್ರಹವಿದೆ. ಡ್ಯಾಂಗೆ ಒಳಹರಿವು 33,443 ಕ್ಯುಸೆಕ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+