ನೊಂದ ರೈತರ ಮನೆಗೆ ಅಂತೂ ಇಂತೂ ಭೇಟಿ ಇತ್ತ ಸಿಎಂ

ಬೆಂಗಳೂರು, ಜು, 19: ಅಂತೂ ಇಂತು ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರ್ಕಾರದ ಮಂತ್ರಿಗಳು ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಲು ಶುರುಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಅಂಬರೀಶ್ ಅವರೊಂದಿಗೆ ಮಂಡ್ಯ ಜಿಲ್ಲೆಯ ನೊಂದ ರೈತರ ಮನೆ ಬಾಗಿಲಿಗೆ ತೆರಳಿ ಪರಿಹಾರ ವಿತರಣೆ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ತುಮಕೂರು ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ತೆರಳಿ ಸಾಂತ್ವನ ಹೇಳುತ್ತಿದ್ದಾರೆ. ಸಾಲಬಾಧೆಗೆ ಬಲಿಯಾದ ರೈತರ ಮನೆಗೆ ಭಾನುವಾರ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದು, ಸಹಕಾರ ಸಂಘಗಳ ಸಾಲ ವಸೂಲಿಗೆ ತಡೆ ನೀಡಿರುವುದಾಗಿ ತಿಳಿಸಿದ್ದಾರೆ.[ರೇಡಿಯೋದಲ್ಲಿ ಸಿಎಂ ಸಿದ್ದು ರೈತರನ್ನು ಉದ್ದೇಶಿಸಿ 'ಮನ್ ಕಿ ಬಾತ್']

ಮಂಡ್ಯ ಜಿಲ್ಲೆಯ ಹೊನ್ನನಾಯಕನ ಹಳ್ಳಿಯ ರೈತ ಶಿವಲಿಂಗೇಗೌಡರ ಮನೆಗೆ ಸಚಿವರಾದ ಕಿಮ್ಮನೆ ರತ್ನಾಕರ್, ಮಹದೇವ ಪ್ರಸಾದ್ ಹಾಗೂ ಅಧಿಕಾರಿಗಳೊಂದಿಗೆ ತೆರಳಿದ ಸಿಎಂ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಶ್ರೀರಂಗಪಟ್ಟಣದಲ್ಲಿ ಸಿಎಂ ರೈರಿಂದ ಪ್ರತಿಭಟನೆ ಎದುರಿಸಬೇಕಾಯಿತು.

ರೈತರಿಂದ ಯಾವುದೇ ರೀತಿಯ ಸಾಲ ವಸೂಲಿ ಮಾಡದಂತೆ ಸಹಕಾರ ಸಂಘಗಳಿಗೆ ಸೂಚಿಸಲಾಗಿದೆ. ಬಲವಂತದ ಸಾಲ ವಸೂಲಿ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಮಾಡುವಂತೆ ಈ ವೇಳೆ ರೈತರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.[ಕರ್ನಾಟಕದಲ್ಲಿ ರೈತರ ಸಾವಿಗೆ ಕಾರಣವೇನು? ಇಲ್ಲಿದೆ ಉತ್ತರ]

ಖಾಸಗಿ ಲೇವಾದೇವಿದಾರರು ಹೆಚ್ಚು ಬಡ್ಡಿ ಪಡೆಯುತ್ತಾರೆ ಎಂಬ ದೂರುಗಳು ಕೇಳಿ ಬಂದಿದ್ದು ಅನೇಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಇಂಥ ಘಟನೆಗಳು ನಡೆದರೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಹೊನ್ನನಾಯಕನಹಳ್ಳಿಗೆ ಭೇಟಿ

ಹೊನ್ನನಾಯಕನಹಳ್ಳಿಗೆ ಭೇಟಿ

ಭಾನುವಾರ ಬೆಳಗ್ಗೆ ಸಿದ್ದರಾಮಯ್ಯನವರು ಮಂಡ್ಯ ಜಿಲ್ಲೆಯ ಹೊನ್ನನಾಯಕನಹಳ್ಳಿಗೆ ತೆರಳಿದ ಸಿದ್ದರಾಮಯ್ಯ ಮೃತ ರೈತ ಶಿವಲಿಂಗೇಗೌಡ ಕುಟಂಬಸ್ಥರಿಗೆ ಸಾಂತ್ವನ ಹೇಳಿದರು. ಪರಿಹಾರವಾಗಿ 1 ಲಕ್ಷದ ಚೆಕ್ ನ್ನು ನೀಡಿದರು. ಜೊತೆಗೆ ಶಿವಲಿಂಗೇಗೌಡ ಪತ್ನಿಗೆ ಡಿಸಿ ಕಚೇರಿಯಲ್ಲಿ ಕೆಲಸ, ಮಕ್ಕಳಿಗೆ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಒದಗಿಸುವ ಭರವಸೆ ನೀಡಿದ್ದಾರೆ.

ಎಸ್ ಎಂ ಕೃಷ್ಣಗೆ ಟಾಂಗ್

ಎಸ್ ಎಂ ಕೃಷ್ಣಗೆ ಟಾಂಗ್

ರೈತರ ವಿರೋಧದ ಹಿನ್ನಲೆಯಲ್ಲಿ ವಿರೇಶ್ ಸಮಿತಿ ಶಿಫಾರಸು ಜಾರಿಗೆ ತಂದಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರ ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಕೃಷ್ಣ ಆರೋಪಿಸಿದ್ದರು. ಅಲ್ಲದೇ ಒಬ್ಬರೇ ರೈತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತೇನೆ ಎಂದು ಕೃಷ್ಣ ಮಂಡ್ಯ ಜಿಲ್ಲಾ ಪ್ರವಾಸಕ್ಕೆ ಆರಂಭಮಾಡಿದ್ದರು.

ಕೃಷ್ಣ ಅವಧಿಯಲ್ಲೇ ನೇಮಕವಾಗಿದ್ದ ಸಮಿತಿ

ಕೃಷ್ಣ ಅವಧಿಯಲ್ಲೇ ನೇಮಕವಾಗಿದ್ದ ಸಮಿತಿ

ಸಮಿತಿ ಸಲಹೆ ಜಾರಿಗೆ ರೈತರೇ ವ್ಯಕ್ತಪಡಿಸಿರುವುದರಿಂದ ಅನನುಷ್ಠಾನ ಸಾಧ್ಯವಾಗುತ್ತಿಲ್ಲ. ಅಲ್ಲದೇ ಇದು ಕೃಷ್ಣ ಅವರ ಅವಧಿಯಲ್ಲೇ ನೇಮಕವಾಗಿದ್ದ ಮಿತಿ. ಅಂದಿನಿಂದಲೂ ಈ ಸಮಿತಿ ಶಿಫಾರಸುಗಳು ಹಾಗೇ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಶ್ರೀರಂಗಪಟ್ಟಣಕ್ಕೆ ಭೇಟಿ

ಶ್ರೀರಂಗಪಟ್ಟಣಕ್ಕೆ ಭೇಟಿ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿಗೆ ತೆರಳಿದ ಸಿದ್ದರಾಮಯ್ಯ ಮೃತ ರೈತ ರಾಜೇಂದ್ರ ಅವರ ನಿವಾಸಕ್ಕೆ ಭೇಟಿ ನೀಡಿ, ರೈತನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ 1 ಲಕ್ಷ ರು. ಪರಿಹಾರದ ಚೆಕ್ ವಿತರಣೆ ಮಾಡಿದರು.

ಬಲವಂತದ ಸಾಲ ವಸೂಲಾತಿ ಇಲ್ಲ

ಬಲವಂತದ ಸಾಲ ವಸೂಲಾತಿ ಇಲ್ಲ

ರೈತರು ಬ್ಯಾಂಕ್, ಸೊಸೈಟಿಗಳಲ್ಲಿ ಹಾಗೂ ಕೈ ಸಾಲ ಮಾಡಿಕೊಂಡಿದ್ದಾರೆ. ಜೂನ್, ಜುಲೈ ತಿಂಗಳಿನಲ್ಲಿ ಇದ್ದಕ್ಕಿದ್ದಂತೆ ಹೆಚ್ಚು ಆತ್ಮಹತ್ಯೆಗಳಾಗಿವೆ. ಆತ್ಮಹತ್ಯೆಗೆ ಕಾರಣ ಏನೆಂಬುದನ್ನು ಪರಿಶೀಲಿಸಲು ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ರೈತರೊಂದಿಗೆ ಸಮಾಲೋಚನೆ ಮಾಡಿ

ರೈತರೊಂದಿಗೆ ಸಮಾಲೋಚನೆ ಮಾಡಿ

ಆಯಾ ಜಿಲ್ಲೆಯ ಹಿರಿಯ ಅಧಿಕಾರಿಗಳು ರೈತರೊಂದಿಗೆ ಸಭೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಬೇಕು. ಖಾಸಗಿ ಲೇವಾದೇವಿದಾರರು ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+