ಬುಧವಾರ ಕಾಂಗ್ರೆಸ್ ಮುಖಂಡರ ಜತೆ ಸಿಎಂ ಸಭೆ, ಸಾಲಮನ್ನಾ ಬಗ್ಗೆ ತೀರ್ಮಾನ
ಬೆಂಗಳೂರು, ಮೇ 29: ಸಾಲಮನ್ನಾ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ನಾಳೆ (ಮೇ 30)ಕ್ಕೆ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.
ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಜೆಡಿಎಸ್‌ನ ಪ್ರಮುಖ ಶಾಸಕರೂ ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಾಲಮನ್ನಾದ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಕುರಿತು ಶೀಘ್ರವಾಗಿ ನಿರ್ಣಯ ತೆಗೆದುಕೊಳ್ಳಲೇ ಬೇಕಾದ ಅನಿವಾರ್ಯತೆ ಕುಮಾರಸ್ವಾಮಿ ಅವರ ಮುಂದಿದೆ. ಹಾಗಾಗಿ ನಾಳೆ ಈ ಸಭೆ ಆಯೋಜಿಸಲಾಗಿದ್ದು, ಸಭೆಯಲ್ಲಿ ಚರ್ಚಿಸಿ ನಾಳೆ ಮಧ್ಯಾಹ್ನದ ವೇಳೆಗೆ ಸಾಲಮನ್ನಾ ಬಗ್ಗೆ ತೀರ್ಮಾನ ತಿಳಿಸಲಾಗುವುದು.

ಈ ಬಗ್ಗೆ ನಿನ್ನೆಯೇ ಕುಮಾರಸ್ವಾಮಿ ಅವರು ಹೇಳಿದ್ದರು. ಪ್ರಧಾನಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕುಮಾರಸ್ವಾಮಿ ಅವರು, ಬುಧವಾರ ಸಾಲಮನ್ನಾ ಬಗ್ಗೆ ಸ್ಪಷ್ಟಪಡಿಸುವುದಾಗಿ ಹೇಳಿದ್ದರು.












Click it and Unblock the Notifications