ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಇಂದು ಕುಮಾರಸ್ವಾಮಿ ಸಭೆ

Recommended Video

      BELAGAVI : ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಇಂದು ಕುಮಾರಸ್ವಾಮಿ ಸಭೆ | Oneindia Kannada

      ಬೆಂಗಳೂರು, ನವೆಂಬರ್ 20: ಕಬ್ಬಿನ ಬಾಕಿ ಹಣ ಪಾವತಿ , ರೈತರ ಸಾಲ ಮನ್ನಾ, ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಸಭೆ ನಡೆಸಲಿದ್ದಾರೆ.

      ಸಭೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟೆ ರೈತರು ಪಾಲ್ಗೊಳ್ಳಲಿದ್ದಾರೆ. ಸೋಮವಾರವೇ ಬೆಳಗಾವಿ ಪ್ರವಾಸ ಕೈಗೊಳ್ಳಬೇಕಿತ್ತು ಆದರೆ ಸಚಿವ ಸಂಪುಟ ಸಭೆ ಇದ್ದ ಕಾರಣ ಪ್ರವಾಸವನ್ನು ರದ್ದುಗೊಳಿಸಿದ್ದರು.

      ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸೋಮವಾರ ಸಾವಿರಾರು ರೈತರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಜೆಸ್ಟಿಕ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ಮೆರವಣಿಗೆ ಹೊರಟು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಹಾಗೂ ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು. ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

      CM’s key meet with cane growers today

      ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಿಎಂ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದರು. ಅನ್ನದಾತರು ಉರಿಬಿಸಿಲಿನಲ್ಲೇ ರಸ್ತೆಯಲ್ಲೇ ಮಲಗಿ ಹೋರಾಟ ನಡೆಸಿದರು, ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ಬೇಡಿಕೆ ಈಡೇರಿಸಲು 15 ದಿನಗಳ ಗಡುವು ನೀಡಿ ತಮ್ಮ ಊರುಗಳ ಕಡೆ ನಡೆದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+