ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ; ಪೂರ್ಣಗೊಳಿಸಲು ರೈತರಿಗೆ ಸೂಚನೆ

ಹಾಸನ, ಆಗಸ್ಟ್ 31: 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯಡಿ ಹಾಸನ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಪೂರ್ವ ಮುಂಗಾರು ಹಂಗಾಮಿನಲ್ಲಿ ರೈತರ 7.92 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ಪೂರ್ಣಗೊಂಡಿರುತ್ತದೆ. ರೈತರು ಸ್ವತಃ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ರೈತರ ಬೆಳೆ ಸಮೀಕ್ಷೆ ಅಪ್ ಮೂಲಕ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ 2024-25 ಬಿಡುಗಡೆಗೊಳಿಸಲಾಗಿದೆ.

ಜಿಲ್ಲೆಯ ರೈತರು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ 14.96 ಲಕ್ಷ ತಾಕುಗಳಲ್ಲಿ (plots) ಬೆಳೆ ಸಮೀಕ್ಷೆ ಕೈಗೊಳ್ಳಲು ಗುರಿ ನಿಗದಿಯಾಗಿರುತ್ತದೆ. ಪ್ರಮುಖವಾಗಿ ಆಲೂರು ತಾಲ್ಲೂಕಿನಲ್ಲಿ 74456, ಅರಕಲಗೂಡು ತಾಲ್ಲೂಕಿನಲ್ಲಿ 1,61,148, ಅರಸೀಕೆರೆಯಲ್ಲಿ 2,39,721, ಬೇಲೂರು ತಾಲ್ಲೂಕಿನಲ್ಲಿ 1,40,191, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 3,51,151, ಹಾಸನ ತಾಲ್ಲೂಕಿನಲ್ಲಿ 2,84,715, ಹೊಳೆನರಸೀಪುರ ತಾಲ್ಲೂಕಿನಲ್ಲಿ 1,70,130 ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ 75,141 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕಾಗಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

Complete Monsoon Season Crop Survey Direction For Farmers

ಪ್ರಸ್ತುತ 1.21 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು, ಬೆಳೆ ಸಮೀಕ್ಷೆ ಪ್ರಗತಿಯಲ್ಲಿರುತ್ತದೆ. ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಮಾಹಿತಿಯನ್ನು ಬೆಳೆ ನಷ್ಟ ಪರಿಹಾರ, ಕನಿಷ್ಠ ಬೆಂಬಲ ಬೆಲೆ ಯೋಜನೆ, ಪಹಣಿಯಲ್ಲಿ ಬೆಳೆ ನಮೂದು ಮಾಡಲು, ಬೆಳೆ ವಿಮಾ ಯೋಜನೆ, ಬೆಳೆ ಸಾಲ ಇತ್ಯಾದಿ ಸೌಲಭ್ಯ ಒದಗಿಸಲು ಬಳಸಲಾಗುವುದು. ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಎಲ್ಲಾ ಬೆಳೆಗಳ ವಿವರವನ್ನು ಮುಂಗಾರು ಬೆಳೆ ಸಮೀಕ್ಷ 2024 ಮೊಬೈಲ್ ಆಪ್ ಮೂಲಕ ನಿಗದಿತ ಸಮಯದೊಳಗೆ ಅಪ್‌ಲೋಡ್ ಮಾಡುವುದು. ಒಂದು ವೇಳೆ ಸ್ವತಃ ರೈತರೆ ತಮ್ಮ ಬೆಳೆ ದಾಖಲು ಮಾಡಲು ಗೊಂದಲವಿದ್ದಲ್ಲಿ ಸದರಿ ಗ್ರಾಮಕ್ಕೆ ನಿಯೋಜಿಸಿರುವ ಖಾಸಗಿ ನಿವಾಸಿ (ಪಿ.ಆರ್.) ಗಳನ್ನು ಸಂಪರ್ಕಿಸಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಪಿ.ಆರ್. ಆಪ್ ಮೂಲಕ ದಾಖಲಿಸಬಹುದಾಗಿದೆ.

ರೈತರ ಬೆಳೆ ಸಮೀಕ್ಷೆ ವಿಧಾನ: ರೈತರು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್-2024-25 ಅಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. e-kyc ಮೂಲಕ ಆಧಾರ್ ದೃಢೀಕರಿಸಲು ಆಧಾರ್ ಸಂಖ್ಯೆ ನಮೂದಿಸಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆಗೆ ಬರುವ OTP ದಾಖಲಿಸಿ ಸಲ್ಲಿಸುವುದು, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದು, ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. OTP ದಾಖಲಿಸಿ ಸಲ್ಲಿಸುವುದು.

ಮೊಬೈಲ್ ಅಪ್ಲಿಕೇಶನ್ ಫ್ರೂಟ್ಸ್ ತಂತ್ರಾಂಶಕ್ಕೆ ಸಂಪರ್ಕಗೊಂಡಿದ್ದ ರೈತರ ಗುರುತಿನ ಸಂಖ್ಯೆ FID ಯಲ್ಲಿ ಸೇರ್ಪಡೆಯಾದ ಎಲ್ಲಾ ಪಹಣಿ ವಿವರ, ಪಾಲಿಗಾನ್ ಹಾಗೂ ಜಿ.ಐ.ಎಸ್. ಮ್ಯಾಪ್ ಸ್ವಯಂಚಾಲಿತವಾಗಿ ಡೌನ್‌ಲೋಡ್ ಆಗಿ, ಎಲ್ಲಾ ಸರ್ವೆ ನಂಬರ್‌ಗಳ ವಿವರ ಕಾಣಿಸುತ್ತದೆ.

ಬೆಳೆ ಸಮೀಕ್ಷೆ ಪ್ರಾರಂಭಿಸಲು ಸರ್ವೆ ನಂಬರ್ ಆಯ್ಕೆ ಮಾಡಿ. ಸದರಿ ಸರ್ವೆ ನಂಬರ್ ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ, ತಾವು ಬೆಳೆದ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ಎರಡು ಫೋಟೋ ತೆಗೆದು ಮಾಹಿತಿಯನ್ನು ಸೇರಿಸುವುದು.

ಹೆಚ್ಚಿನ ಮಾಹಿತಿಗಾಗಿ ಬೆಳೆ ಸಮೀಕ್ಷೆಗೆ ನಿಯೋಜಿಸಿರುವ ಗ್ರಾಮದ ಸ್ಥಳೀಯ ಯುವಕರು, ಕೃಷಿ ಇಲಾಖೆಯ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳು, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+