ಮೂರು ರಾಜ್ಯಗಳಲ್ಲಿ ಸಾಲಮನ್ನಾ ಮಾಡಿಯೇ ಸಿದ್ಧ: ರಾಹುಲ್ ಗಾಂಧಿ
ನವದೆಹಲಿ, ಡಿಸೆಂಬರ್ 15: ಮೂರು ರಾಜ್ಯಗಳಲ್ಲಿ ಚುನಾವಣೆ ಗೆದ್ದು ಸರ್ಕಾರ ರಚಿಸುತ್ತಿರುವ ಕಾಂಗ್ರೆಸ್ ಚುನಾವಣೆಗೆ ಮುನ್ನಾ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿಯೇ ತೀರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರವು ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಖಚಿತವಾಗಿ ಸಾಲಮನ್ನಾ ಮಾಡಿಯೇ ತೀರುತ್ತದೆ ಈ ಬಗ್ಗೆ ಅನುಮಾನವೇ ಬೇಡ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪಂಚ ರಾಜ್ಯ ಚುನಾವಣೆ ಪ್ರಚಾರ ಸಮಯದಲ್ಲಿ ರೈತರ ಸಮಸ್ಯೆಗಳನ್ನೇ ಮುನ್ನೆಲೆಯಾಗಿಟ್ಟುಕೊಂಡು ಕೇಂದ್ರದ ವಿರುದ್ಧ ಹರಿಹಾಯ್ದಿದ್ದ ರಾಹುಲ್ ಗಾಂಧಿ, ಕೇಂದ್ರ ಸಾಲಮನ್ನಾ ಮಾಡಲು ಒಪ್ಪಲಿಲ್ಲ ಎಂದು ಬಿಜೆಪಿಯನ್ನು ಟೀಕಿಸಿದ್ದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 10 ದಿನಗಳ ಒಳಗಾಗಿ ರೈತರ ಸಾಲಮನ್ನಾ ಮಾಡುತ್ತದೆ ಎಂದು ಸಹ ಅವರು ಹೇಳಿದ್ದರು. ರಾಹುಲ್ ಗಾಂಧಿ ಅವರು ಭರವಸೆ ನೀಡಿರುವ ಪ್ರಕಾರ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ರೈತರು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ.
ರಾಹುಲ್ ಗಾಂಧಿ ಸಾಲಮನ್ನಾ ಮಾಡುವ ಭರವಸೆಯಿಂದ ಸರಿದಿದ್ದಾರೆ ಎಂದು ಬಿಂಬಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು, ಆದರೆ ಅದು ಸುಳ್ಳು ವಿಡಿಯೋ ಆಗಿತ್ತು. ಈಗ ರಾಹುಲ್ ಅವರೇ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.












Click it and Unblock the Notifications