ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನ

|
Google Oneindia Kannada News

ನವದೆಹಲಿ, ಜನವರಿ 26: ದೆಹಲಿಯ ಐಟಿಒದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ನಡೆದ ಸಂಘರ್ಷದಲ್ಲಿ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಬ್ಯಾರಿಕೇಡ್ ಮುರಿದು ಒಳನುಗ್ಗಿದ ಅನೇಕ ರೈತರು ಕತ್ತಿ, ದೊಣ್ಣೆಗಳನ್ನು ಹಿಡಿದು ಪೊಲೀಸರು ಹಾಗೂ ವಾಹನಗಳ ಮೇಲೆ ದಾಳಿ ಮಾಡುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ವಿವಿಧೆಡೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.

ಕೆಲವೆಡೆ ಪೊಲೀಸರ ಮೇಲೆ ಕಲ್ಲುತೂರಾಟ ಕೂಡ ನಡೆದ ಘಟನೆಗಳು ವರದಿಯಾಗಿವೆ. ಕೆಲವರು ಖಡ್ಗ ಹಿಡಿದು ಪೊಲೀಸರ ಮೇಲೆ ಆಕ್ರಮಣ ಮಾಡುವುದು ವಿಡಿಯೋಗಳಲ್ಲಿ ಸೆರೆಯಾಗಿದೆ. ಐಟಿಒದಿಂದ ಖಾಲಿಟ್ರ್ಯಾಕ್ಟರ್‌ಗಳನ್ನು ಕಳುಹಿಸಲಾಗಿದೆ. ಗುಂಪುಗೂಡಿದ್ದ ಪ್ರತಿಭಟನಾಕಾರರನ್ನು ಚೆದುರಿಸಲಾಗಿದೆ. ಗಾಯಗೊಂಡ ಒಬ್ಬ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 Cops Injured In Clash With Protesters, Sword Flashes At Police

ದೆಹಲಿಯ ಗಡಿ ಭಾಗಗಳಲ್ಲಿ ಪರಿಸ್ಥಿತಿ ಉದ್ವಿಗ್ನ, ಬ್ಯಾರಿಕೇಡ್ ಮುರಿದು ರೈತರ ಮೆರವಣಿಗೆದೆಹಲಿಯ ಗಡಿ ಭಾಗಗಳಲ್ಲಿ ಪರಿಸ್ಥಿತಿ ಉದ್ವಿಗ್ನ, ಬ್ಯಾರಿಕೇಡ್ ಮುರಿದು ರೈತರ ಮೆರವಣಿಗೆ

ಅಕ್ಷರಧಾಮದ ಸಮೀಪ ತಮ್ಮ ಮೆರವಣಿಗೆಗೆ ಅಡ್ಡಿಪಡಿಸಿದ ಪೊಲೀಸರ ಮೇಲೆ ನಿಶಾಂಗ್ ಪ್ರತಿಭಟನಾಕಾರರು ಖಡ್ಗ ಹಿಡಿದು ಹಲ್ಲೆಗೆ ಮುಂದಾಗಿದ್ದಾರೆ. ಆಗ ಪೊಲೀಸರು ಅಶ್ರುವಾಯುಗಳನ್ನು ಸಿಡಿಸಿದ್ದಾರೆ. ಕೇಂದ್ರ ದೆಹಲಿಯ ಐಟಿಒದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನಿಸಿದ್ದು ಕೂಡ ವಿಡಿಯೋಗಳಲ್ಲಿ ಸೆರೆಯಾಗಿದೆ.

ರಾಜಧಾನಿಯಲ್ಲಿನ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ವಿವಿಧ ಮೆಟ್ರೋ ಸ್ಟೇಷನ್‌ಗಳಲ್ಲಿನ ಪ್ರವೇಶ ಮತ್ತು ನಿರ್ಗಮನದ ದ್ವಾರಗಳನ್ನು ಬಂದ್ ಮಾಡಿರುವುದಾಗಿ ದೆಹಲಿ ಮೆಟ್ರೋ ನಿಗಮ ತಿಳಿಸಿದೆ.

72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ

ಹಿಂಸಾಚಾರದ ಕಾರಣದಿಂದ ಕೇಂದ್ರ ದೆಹಲಿಗೆ ಪೂರ್ವ ಹಾಗೂ ಈಶಾನ್ಯ ಭಾಗಗಳಿಂದ ಸಂಪರ್ಕ ಕಲ್ಪಿಸುವ ಎಲ್ಲ ದಾರಿಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ. ಇಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡಿಲ್ಲ.

ರೈತರ ಟ್ರ್ಯಾಕ್ಟರ್ ಮೆರವಣಿಗೆ ಶಾಂತಿಯುತವಾಗಿರಲಿದೆ ಎಂದು ಯೋಗೇಂದ್ರ ಯಾದವ್ ಸೇರಿದಂತೆ ಎಲ್ಲ ರೈತ ಮುಖಂಡರು ಹೇಳಿದ್ದರು. ಆದರೆ ಮೆರವಣಿಗೆ ಆರಂಭವಾಗುವ ಮುನ್ನವೇ ಹಿಂಸಾಚಾರ ನಡೆದಿರುವುದು ವ್ಯಾಪಕ ಚರ್ಚೆಗೆ ಒಳಗಾಗಿದೆ. ಖಲಿಸ್ತಾನಿಗಳು ರೈತರ ಪ್ರತಿಭಟನೆಯಲ್ಲಿ ಇರುವುದಕ್ಕೆ ಈ ಹಿಂಸಾಚಾರವೇ ಸಾಕ್ಷಿ ಎಂದು ಅನೇಕರು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.

English summary
Farmers protest against farm laws has turned violent at Delhi. Many cops injured in clash with protesters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X