ಕೊರೊನಾ ಎಫೆಕ್ಟ್: ಉಚಿತ ಹಾಲು ಪೂರೈಸಲು ಕೆಎಂಎಫ್‌ಗೆ ಯಡಿಯೂರಪ್ಪ ಸೂಚನೆ

ಬೆಂಗಳೂರು, ಏಪ್ರೀಲ್ 1: ಕೊರೊನಾ ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇದರಿಂದ ಕರ್ನಾಟಕ ಹಾಲು ಮಹಾಮಂಡಳಕ್ಕೂ (ಕೆಎಂಎಫ್ ) ಲಕ್ಷಾಂತರ ಲೀಟರ್ ಹಾಲು ಮಾರಾಟವಾಗದೇ ಉಳಿಕೆಯಾಗುತ್ತಿದೆ. ಈ ಹಾಲನ್ನು ಲಾಕ್‌ಡೌನ್ ಮುಗಿಯುವವವರೆಗೂ ಉಚಿತವಾಗಿ ಹಂಚುವಂತೆ ಕೆಎಂಎಫ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ಬುಧವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ರೈತರ ಹಿತ ಕಾಯುವ ಸಲುವಾಗಿ ಆಯೋಜಿಸಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ಕೆಎಂಎಫ್ ಮೂಲಕ 69 ಲಕ್ಷ ಲೀಟರ್ ಹಾಲು ಖರೀದಿಯಾಗುತ್ತಿದ್ದು, 42 ಲಕ್ಷ ಲೀಟರ್ ಹಾಲು ಮಾರಾಟ ಮಾಡಲಾಗುತ್ತಿದೆ. 7.5 ಲಕ್ಷ ಲೀಟರ್ ಹಾಲು ಪ್ರತಿನಿತ್ಯ ಉಳಿತಾಯವಾಗುತ್ತಿದೆ. ಲಾಕ್‌ಡೌನ್‌ ಮುಗಿಯುವವರೆಗೆ ಸರ್ಕಾರವೇ ಖರೀದಿಸಿ, ಅಧಿಸೂಚಿಸಿದ ಕೊಳೆಗೇರಿಗಳು ಮತ್ತು ಕಾರ್ಮಿಕರ ಬಡಾವಣೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಉಚಿತವಾಗಿ ವಿತರಿಸಲು ಕ್ರಮ ವಹಿಸಸು ಸೂಚಿಸಿದ್ದೇನೆ ಎಂದು ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Coronavirus In Karnataka: CM Yediyurappa Orders To KMF For Free Milk Supply

ಅಲ್ಲದೇ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ವ್ಯಾಪಾರಿಗಳು ಸಂಕಷ್ಟದ ಅವಧಿಯನ್ನು ದುರುಪಯೋಗ ಪಡಿಸಿಕೊಳ್ಳುವುದು ಸರಿಯಲ್ಲ. ಇಂತಹ ಅಕ್ರಮಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಲಾಕ್‌ಡೌನ್‌ನಿಂದ ನಗರದಲ್ಲಿ ಸಿಲುಕಿಕೊಂಡಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಿಲ್ಡರುಗಳೇ ಊಟ, ವಸತಿ ವ್ಯವಸ್ಥೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+