ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರಿಂದಲೇ ಬೆಳೆ ಸಮೀಕ್ಷೆ; ಬೆಳೆ ವಿವರ ದಾಖಲಿಸುವುದು ಹೇಗೆ?

|
Google Oneindia Kannada News

ಶಿವಮೊಗ್ಗ, ಜುಲೈ 04; ಈ ಬಾರಿಯ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಕಾರ್ಯವು ಆರಂಭಗೊಂಡಿದೆ. ರೈತರು ಕಳೆದ ವರ್ಷದಂತೆ ಈ ವರ್ಷವೂ ಸ್ವಂತ ಜಮೀನಿನಲ್ಲಿ ಬೆಳೆ ಸಮೀಕ್ಷೆ ಮಾಡಬೇಕು. ತಾವು ಬೆಳೆದ ಬೆಳೆ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು 'ಮುಂಗಾರು ರೈತ ಬೆಳೆ ಸಮೀಕ್ಷೆ 2022-23' (Kharif Farmer Crop Survey 2022-23) ಎಂಬ ಹೆಸರಿನ ಮೊಬೈಲ್ ಅಪ್ಲಿಕೇಷನ್ ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.

ಪ್ರಾಥಮಿಕ ಕೃಷಿ ಸಹಕಾರಿ ಸಾಲ ಸಂಘಗಳು ಕಂಪ್ಯೂಟರೀಕರಣಪ್ರಾಥಮಿಕ ಕೃಷಿ ಸಹಕಾರಿ ಸಾಲ ಸಂಘಗಳು ಕಂಪ್ಯೂಟರೀಕರಣ

ರೈತರ ಆಧಾರ್ ಸಂಖ್ಯೆಯನ್ನು ಸ್ಕ್ಯಾನ್ ಮಾಡಿಕೊಂಡು ಆಧಾರ್ ವಿವರ ಮತ್ತು ಮೊಬೈಲ್ ಅಪ್ಲಿಕೇಷನ್‍ನಲ್ಲಿರುವ ಮಾಸ್ಟರ್ ವಿವರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ನಂತರ ತಮ್ಮ ಜಮೀನಿನ ಸರ್ವೆ ನಂಬರ್‌ಗಳ ಅಪ್ಲಿಕೇಷನ್‌ಗೆ ಸೇರಿಸಿಕೊಳ್ಳಬೇಕು.

ಮೊದಲ ಬಾರಿಗೆ ಬೆಂಗಳೂರಲ್ಲಿ ಎಲ್ಲಾ ರಾಜ್ಯದ ಕೃಷಿ ಸಚಿವರ ಸಭೆಮೊದಲ ಬಾರಿಗೆ ಬೆಂಗಳೂರಲ್ಲಿ ಎಲ್ಲಾ ರಾಜ್ಯದ ಕೃಷಿ ಸಚಿವರ ಸಭೆ

ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿಹೊಂಡ , ಮನೆ ಇತರೆ) ಬಳಕೆಯಾದ ಪ್ರದೇಶದ ವಿವರವನ್ನು ಸಹ ದಾಖಲಿಸಬೇಕಾಗಿರುತ್ತದೆ.

ರೈತರಿಗೆ ಕೃಷಿ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಗಣಿಸಬೇಡಿ!ರೈತರಿಗೆ ಕೃಷಿ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಗಣಿಸಬೇಡಿ!

ಚಿತ್ರಗಳನ್ನು ತೆಗೆದು ಅಪ್‌ಲೋಡ್ ಮಾಡಬೇಕು

ಚಿತ್ರಗಳನ್ನು ತೆಗೆದು ಅಪ್‌ಲೋಡ್ ಮಾಡಬೇಕು

ರೈತರು ತಾವು ಬೆಳೆದ ಪ್ರತಿ ಬೆಳೆಯ ಎರಡು ಛಾಯಾಚಿತ್ರಗಳನ್ನು ತೆಗೆದು ಅಪ್‌ಲೋಡ್ ಮಾಡಬೇಕು. ಹೀಗೆ ಅಪ್‌ಲೋಡ್‌ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ಅನುಮೋದಿಸುತ್ತಾರೆ. ರೈತರು ದಾಖಲಿಸಿದ ಬೆಳೆ ವಿವರಕ್ಕೂ ಛಾಯಾಚಿತ್ರಕ್ಕೂ ತಾಳೆಯಾಗದ ಸಂದರ್ಭದಲ್ಲಿ ಮೇಲ್ವಿಚಾರಕರು ಅಂತಹ ಮಾಹಿತಿಯನ್ನು ತಿರಸ್ಕರಿಸಿ ಮರು ಸಮೀಕ್ಷೆಗೆ ಖಾಸಗಿ ನಿವಾಸಿಗಳನ್ನು ಕಳುಹಿಸುತ್ತಾರೆ.

ವಿವರ ದಾಖಲಿಸಲು ಅವಕಾಶ

ವಿವರ ದಾಖಲಿಸಲು ಅವಕಾಶ

ಒಂದು ವೇಳೆ ರೈತರು ತಮ್ಮ ಸ್ನೇಹಿತರು ಅಥವಾ ಸಂಬಂಧಿಕರಿಗೆ ಸಹಾಯ ಮಾಡುವುದಾದರೆ ಅವರ ಸರ್ವೆ ನಂಬರ್‌ಗಳನ್ನು ಸಹ ತಮ್ಮ ಮೊಬೈಲ್ ಅಪ್ಲಿಕೇಷನ್‍ನಲ್ಲಿ ಸೇರಿಸಿಕೊಂಡು ಅವರ ಜಮೀನಿನ ವಿವರ ದಾಖಲಿಸಲೂ ಸಹ ಅವಕಾಶ ಕಲ್ಪಿಸಲಾಗಿದೆ.

ಒಬ್ಬ ರೈತರು ಮೊಬೈಲ್ ಅಪ್ಲಿಕೇಷನ್‍ನಲ್ಲಿ 10 ಜಮೀನುಗಳ ಬೆಳೆ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ಸಮಯದಲ್ಲಿ ಬೆಳೆ ವಿವರ ದಾಖಲಿಸಲಾಗದ ರೈತರ ಜಮೀನಿನ ಬೆಳೆ ವಿವರಗಳನ್ನು ಖಾಸಗಿ ನಿವಾಸಿಗಳು ದಾಖಲಿಸುತ್ತಾರೆ.

ಸರ್ಕಾರದ ಯೋಜನೆಗಳಿಗೆ ಬಳಕೆ

ಸರ್ಕಾರದ ಯೋಜನೆಗಳಿಗೆ ಬಳಕೆ

ಬೆಳೆ ಸಮೀಕ್ಷೆ ಮಾಹಿತಿಯನ್ನು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ. ಎನ್. ಡಿ. ಆರ್. ಎಫ್./ ಎಸ್. ಆರ್. ಎಫ್. ಅಡಿಯಲ್ಲಿ ಪ್ರವಾಹ ಮಾಹಿತಿ, ಬರಗಾಲ ಸಂದರ್ಭದಲ್ಲಿ ನೀಡುವ ನಷ್ಠ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ ಬಳಕೆ ಮಾಡಲಾಗುತ್ತದೆ.

ಬೆಳೆ ಪರಿಶೀಲನೆಗೆ ಸಹಕಾರಿ

ಬೆಳೆ ಪರಿಶೀಲನೆಗೆ ಸಹಕಾರಿ

ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಈ ಬೆಳೆ ಸಮೀಕ್ಷೆ ಸಹಕಾರಿಯಾಗಿದೆ.

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ನಮೂದಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Recommended Video

Kohli ಆಟದ ಬಗ್ಗೆ ಚರ್ಚೆ, Rohit ವಾಪಸ್ Reverse swing 01 | *CricketWrap | OneIndia Kannada

English summary
According to Karnataka government order application based crop survey by farmers began for the 2022-23 year. Farmers to upload crop photo and other details by mobile.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X