MSP For Paddy: ದಾವಣಗೆರೆಯಲ್ಲಿ ಭತ್ತ, ರಾಗಿ ಬೆಳೆದ ರೈತರಿಗೆ ಸಿಹಿಸುದ್ದಿ

ದಾವಣಗೆರೆ, ಡಿಸೆಂಬರ್ 14: ದಾವಣಗೆರೆಯಲ್ಲಿ ಈ ಹಂಗಾಮಿನಲ್ಲಿ ಭತ್ತ ಮತ್ತು ರಾಗಿ ಬೆಳೆದ ರೈತರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭಗೊಂಡಿದೆ. ರೈತರಿಂದ ಉತ್ಪನ್ನಗಳನ್ನು 2025ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಖರೀದಿಸಲಾಗುತ್ತದೆ. ಆದರೆ ಖರೀದಿಗೂ ಮುನ್ನ ರೈತರು ಅಗತ್ಯ ದಾಖಲೆಗಳ ಜೊತೆ ನೋಂದಣಿಯನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ರೈತರಿಗೆ ಈ ಕುರಿತು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಗಂಗಾಧರಸ್ವಾಮಿ ಜಿ. ಎಂ. ಮಾಹಿತಿ ನೀಡಿದ್ದಾರೆ. ಕನಿಷ್ಟ ಬೆಂಬಲ ಬೆಲೆ ಯೋಜನೆ (ಎಂಎಸ್‌ಪಿ) ಯಡಿ ರೈತರಿಂದ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ರೂ. 2300 ಹಾಗೂ ಎ ಗ್ರೇಡ್ ಭತ್ತ ಪ್ರತಿ ಕ್ವಿಂಟಾಲ್‍ಗೆ ರೂ. 2320 ರಂತೆ ಹಾಗೂ ಪ್ರತಿ ಕ್ವಿಂಟಾಲ್‍ಗೆ ರಾಗಿಗೆ ರೂ. 4290 ರಂತೆ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ತಾಲೂಲು ಕೇಂದ್ರಗಳಲ್ಲಿ ನೋಂದಣಿ ಕೇಂದ್ರ ತೆರೆಯಲಾಗಿದೆ ಎಂದು ಹೇಳಿದ್ದಾರೆ.

Davanagere Paddy And Ragi Purchase Under MSP Date Announced

ನೋಂದಣಿ ಕೇಂದ್ರಗಳ ವಿವರ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ದಾವಣಗೆರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹೊನ್ನಾಳ್ಳಿ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಜಗಳೂರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹರಿಹರ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಚನ್ನಗಿರಿ ಇಲ್ಲಿ ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೋಂದಾಯಿಸಿಕೊಳ್ಳಲಾಗುತ್ತದೆ.

ಒಂದು ವೇಳೆ ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೋಂದಣಿ ಮಾಡಿಕೊಳ್ಳಲು ರೈತರಿಗೆ ಸೂಚಿಸಲಾಗಿದೆ. ನೋಂದಣಿ ಈಗಾಗಲೇ ಆರಂಭವಾಗಿದ್ದು 2025ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಉತ್ಪನ್ನಗಳನ್ನು ಖರೀದಿಸಲಾಗುತ್ತದೆ.

ರೈತರು ಕೃಷಿ ಇಲಾಖೆ ನೀಡಿರುವ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ಫ್ರೂಟ್ ನೋಂದಣಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ ಸಾಧನದ ಮುಖಾಂತರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಮಾಹಿತಿ ನೀಡಲಾಗಿದೆ.

ಫ್ರೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ನೇರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುತ್ತದೆ. ಆದ್ದರಿಂದ ರೈತರು ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್‍ಪಿಸಿಎಲ್ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ನೀಡಬೇಕಿದೆ.

ರೈತರು ತಾವು ನೀಡುವ ಎಲ್ಲಾ ದಾಖಲಾತಿಗಳಲ್ಲಿಯೂ ಒಂದೇ ಹೆಸರು ನಮೂದಾಗಿರತಕ್ಕದ್ದು, ಮತ್ತು ರಾಗಿ ತಂದು ಖರೀದಿ ಕೇಂದ್ರದಲ್ಲಿ ರಾಶಿ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸಲು ನೇಮಿಸಲ್ಪಟ್ಟ ಗ್ರೇಡರ್ಸ್ ದಾಸ್ತಾನಿನ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟವೆಂದು ಧೃಢಪಟ್ಟರೆ ಮಾತ್ರ ಖರೀದಿಸಲಾಗುತ್ತದೆ. ಗುಣಮಟ್ಟ ಸರಿಯಿಲ್ಲವೆಂದು ದೃಢಪಡಿಸಿದ್ದಲ್ಲಿ ರೈತರು ತಮ್ಮ ಸ್ವಂತ ಖರ್ಚಿನಿಂದ ವಾಪಸ್ ತೆಗೆದುಕೊಂಡು ಹೋಗಬೇಕು.

ಪ್ರತಿ ರೈತರಿಂದ ಪ್ರತಿ ಎಕರೆಗೆ ರಾಗಿ 10 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮತ್ತು ಭತ್ತವನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುತ್ತದೆ.

ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತಹಶೀಲ್ದಾರ್, ಉಪವಿಭಾಗಾಧಿಕಾರಿ, ಜಂಟಿ ನಿರ್ದೇಶಕರು (ಆಹಾರ) ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂರವಾಣಿ ಸಂಖ್ಯೆ 08192-296770ಗೆ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+