ದಾವಣಗೆರೆ ಜಿಲ್ಲೆಯ ತಾಲೂಕುವಾರು ದಾಖಲಾದ ಮಳೆ ಮತ್ತು ನಷ್ಟದ ವಿವರ ತಿಳಿಯಿರಿ
ದಾವಣಗೆರೆ, ಮೇ, 22: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಒಂದೆಡೆ ಬಿಸಿಲಿನ ಬೇಗೆಗೆ ತತ್ತರಸಿದ್ದ ಜನರಿಗೆ ವರುಣ ತಂಪೆರೆದರೆ, ಮತ್ತೊಂದೆಡೆ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ರೈತರು ಬೆಳೆದಿದ್ದ ಬೆಳೆಗಳು ಜಲಾವೃತವಾಗಿವೆ. ಅದರಲ್ಲಿಯೂ ಭತ್ತ, ಬಾಳೆ, ಪಪ್ಪಾಯಿ ಸೇರಿದಂತೆ ಇತರೆ ಬೆಳೆಗಳು ನೀರುಪಾಲಾಗಿದ್ದು, ರೈತರಿಗೆ ಮತ್ತೊಂದು ಬರೆ ಬಿದ್ದಂತಾಗಿದೆ. ಸುಮಾರು 1 ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.
ಭಾನುವಾರ ರಾತ್ರಿ ಭಾರೀ ಗಾಳಿ, ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿತ್ತು. ಅಲ್ಲದೆ, ತರಕಾರಿ ಬೆಳೆಗಳು ಸಹ ನೀರುಪಾಲಾಗಿದೆ. ಹೀಗೆ ಕೈಗೆ ಬಂದಿದ್ದ ಫಸಲು ಬಾರದೇ ರೈತರು ಕಣ್ಣೀರು ಸುರಿಸುವಂತಾಗಿದೆ. ಜಿಲ್ಲೆಯಲ್ಲಿ 13.6 ಮಿ.ಮೀ. ಸರಾಸರಿ ಮಳೆ ಸುರಿದಿದ್ದು, ಜಿಲ್ಲಾಡಳಿತ ಅಂದಾಜಿಸಿರುವ ಪ್ರಕಾರ 79.40 ಲಕ್ಷ ರೂ.ನಷ್ಟ ಸಂಭವಿಸಿದೆ. ಕೆಲವೆಡೆ ಮನೆಗಳು ಧರೆಗುರುಳಿದರೆ, ಮತ್ತೆ ಕೆಲವೆಡೆ ಜಮೀನುಗಳು ಜಲಾವೃತವಾಗಿವೆ.

ಚನ್ನಗಿರಿಯಲ್ಲಿನ ಮಳೆ ವಿವರ
ಚನ್ನಗಿರಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 9.5 ಮಿ.ಮೀ. ಆಗಿದ್ದರೆ, ದಾವಣಗೆರೆ ತಾಲೂಕಿನಲ್ಲಿ ವಾಡಿಕೆ ಮಳೆ 1.0 ಮಿ.ಮೀ.ನಷ್ಟು ಆಗಿದೆ. ವಾಸ್ತವ ಮಳೆ 19.5 ಮಿ.ಮೀ ಸುರಿದಿದೆ. ಹರಿಹರದಲ್ಲಿ ವಾಡಿಕೆ ಮಳೆ 1.1 ಮಿ.ಮೀ ಹಾಗೂ ವಾಸ್ತವ ಮಳೆ 17.2 ಮಿ.ಮೀ. ಆಗಿದೆ.
ಇನ್ನು ಹೊನ್ನಾಳಿ ವಾಡಿಕೆ ಮಳೆ 2.4 ಮಿ.ಮೀ ಹಾಗೂ ವಾಸ್ತವ ಮಳೆ 9.0 ಮಿ.ಮೀ, ಜಗಳೂರು ವಾಡಿಕೆ ಮಳೆ 1.9 ಮಿ.ಮೀ ಹಾಗೂ ವಾಸ್ತವ ಮಳೆ 13.7 ಮಿ.ಮೀ, ನ್ಯಾಮತಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 14.1 ಮಿ.ಮೀ ಮಳೆಯಾಗಿದೆ.
ದಾವಣಗೆರೆ ತಾಲೂಕು ವ್ಯಾಪ್ತಿಯ ಹಾನಿ ವಿವರ
ದಾವಣಗೆರೆ ತಾಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, 150 ಹೆಕ್ಟೇರ್ ಭತ್ತದ ಬೆಳೆ ನಾಶವಾಗಿದೆ. ಇದರಿಂದ ಒಟ್ಟು ಅಂದಾಜು 30.60 ಲಕ್ಷ ರೂಪಾಯಿ ನಷ್ಟ, ಹರಿಹರ ತಾಲೂಕು ವ್ಯಾಪ್ತಿಯಲ್ಲಿ 2 ಮನೆ ಭಾಗಶಃ ಹಾನಿಯಾಗಿದ್ದು, 295 ಹೆಕ್ಟೇರ್ ಭತ್ತ ನೀರುಪಾಲಾಗಿದೆ. ಒಟ್ಟು ಅಂದಾಜು 18.93 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜಗಳೂರು ತಾಲೂಕು ವ್ಯಾಪ್ತಿಯ ಹಾನಿ ವಿವರ
ಜಗಳೂರು ತಾಲೂಕು ವ್ಯಾಪ್ತಿಯಲ್ಲಿ 1 ಮನೆ ತೀವ್ರ ಹಾನಿಯಾಗದ್ದು, 10 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 30 ಹೆಕ್ಟೇರ್ ಅಡಿಕೆ, 38 ಹೆಕ್ಟೇರ್ ಬಾಳೆ, 20 ಹೆಕ್ಟೇರ್ ಪಪ್ಪಾಯಿ ಬೆಳೆ ಹಾನಿಯಾಗಿದೆ. 1 ಎತ್ತು ಮೃತಪಟ್ಟಿದ್ದು ಒಟ್ಟು ಅಂದಾಜು 29.87 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟಾರೆ ಅಂದಾಜು 79.40 ಲಕ್ಷ ರೂಪಾಯಿನಷ್ಟು ನಷ್ಟ ಸಂಭವಿಸಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಇನ್ನು ಕೆಲವೆಡೆ ಜಿಲ್ಲಾಡಳಿತ ಸರ್ವೇ ನಡೆಸಬೇಕಾಗಿದೆ. ಹಾಗಾಗಿ, ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಸಂಭವಿಸಿದೆ. ಬೆಳೆಗಳು ಮಳೆಗೆ ಕೊಚ್ಚಿ ಹೋಗಿರುವುದರಿಂದ ರಾಜ್ಯ ಸರ್ಕಾರವು ಈ ಹಿಂದೆ ನೀಡುತ್ತಿದ್ದ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ಬೆಳೆ ನಷ್ಟ ಅನುಭವಿಸಿದ ರೈತರು ಆಗ್ರಹಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications