ಸಾಲಗಾರರ ಕಾಟಕ್ಕೆ ಹೆದರಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ
ಚಿಕ್ಕಸೋಮನಹಳ್ಳಿ ಗ್ರಾಮದ ನಿವಾಸಿ ಈರೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಅಘಲಯ ಗ್ರಾಮದ ವಿ.ಎಸ್.ಎಸ್.ಎನ್. ಬ್ಯಾಂಕಿನಿಂದ 2ಲಕ್ಷ ಹಾಗೂ ಎಸ್ಬಿಐ ನಲ್ಲಿ 2 ಲಕ್ಷ ಸಾಲ ಮಾಡಿದ್ದರು.
ಕೆ.ಆರ್.ಪೇಟೆ, ಮೇ 16: ಬರದಿಂದ ಬೆಳೆಬೆ ಳೆಯಲಾಗದೆ ಸಾಲ ಮಾಡಿಕೊಂಡಿದ್ದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಚಿಕ್ಕಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಸೋಮನಹಳ್ಳಿ ಗ್ರಾಮದ ನಿವಾಸಿ ಈರೇಗೌಡ (50) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಅಘಲಯ ಗ್ರಾಮದಲ್ಲಿರುವ ವಿ.ಎಸ್.ಎಸ್.ಎನ್. ಬ್ಯಾಂಕಿನಲ್ಲಿ ಎರಡು ಲಕ್ಷ ರೂ. ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಎರಡು ಲಕ್ಷ ರೂ.ಗಳನ್ನು ಸಾಲ ಮಾಡಿದ್ದರು. ಅಲ್ಲದೆ, ಕೈಸಾಲವನ್ನು ಕೂಡ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.[ಮಂಡ್ಯದಲ್ಲಿ ವಿಷವುಣಿಸಿ, ಉಸಿರುಗಟ್ಟಿಸಿ ವಿದ್ಯಾರ್ಥಿಯ ಕೊಲೆ]

ಒಂದು ಎಕರೆ ಜಮೀನು ಹೊಂದಿದ್ದು ಮಳೆಯಾಗದ ಹಿನ್ನೆಲೆಯಲ್ಲಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಮಾಡಿದ ಸಾಲದ ಬಡ್ಡಿ ದಿನದಿಂದ ದಿನಕ್ಕೆ ಹೆಚ್ಚಾಗಿತ್ತಲ್ಲದೆ, ಕೈ ಸಾಲ ನೀಡಿದವರು ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ.
ಇದರಿಂದ ಬೇಸತ್ತ ಅವರು ತಮ್ಮ ಜಮೀನಿನ ಬಳಿಯ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮೃತರ ಪತ್ನಿ ನಾಗಮ್ಮ ಪಟ್ಟಣ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮೃತ ರೈತನಿಗೆ ಒಬ್ಬ ಪುತ್ರ ಮತ್ತು ಪುತ್ರಿಯಿದ್ದಾರೆ. ಸಬ್ಇನ್ಸ್ ಪೆಕ್ಟರ್ ಅರುಣ್ಕುಮಾರ್ ಅವರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications