ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯದಲ್ಲಿ ಭತ್ತ, ರಾಗಿ ಖರೀದಿ ಕೇಂದ್ರ ಸ್ಥಾಪಿಸುವಂತೆ ಒತ್ತಾಯ: ಮುಖ್ಯಮಂತ್ರಿಗಳಿಗೆ ಮನವಿ ಪತ್ರ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ನವೆಂಬರ್‌, 28: ಜಿಲ್ಲೆಯಲ್ಲಿ ಬೆಳೆಯಲಾಗಿರುವ ಭತ್ತ ಮತ್ತು ರಾಗಿಯನ್ನು ಬೆಂಬಲ ಯೋಜನೆಯಡಿ ಖರೀದಿ ಮಾಡಲು ಶೀಘ್ರವೇ ಖರೀದಿ ಕೇಂದ್ರ ತೆರೆಯಬೇಕು. ಹಾಗೂ ರೈತರು ಬೆಳೆ ಮಾರಾಟ ಮಾಡಲು ವಿಧಿಸಿರುವ ಮಿತಿಯನ್ನು ತೆಗೆದುಹಾಕಬೇಕು ಎಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರ ಈವರೆಗೂ ಖರೀದಿ ಕೇಂದ್ರಗಳ ಸ್ಥಾಪನೆ ಬಗ್ಗೆ ಹಾಗೂ ಬೆಂಬಲ ಬೆಲೆ ನಿಗದಿಪಡಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಒಬ್ಬ ರೈತನಿಂದ ಇಂತಿಷ್ಟೇ ಕ್ವಿಂಟಾಲ್ ಭತ್ತವನ್ನು ಖರೀದಿ ಮಾಡಬೇಕು ಎಂದು ಮಿತಿಯನ್ನು ಮಾಡಿದೆ. ಇನ್ನು ನೋಂದಣಿ ಪ್ರಕ್ರಿಯೆ ಯಾವಾಗ ಪ್ರಾರಂಭ ಆಗುತ್ತದೆ ಎನ್ನುವುದನ್ನು ಖಾತ್ರಿಪಡಿಸಿಲ್ಲ. ಇದರಿಂದ ರೈತಾಪಿ ವರ್ಗ ತುಂಬಾ ಆತಂಕಕ್ಕೀಡಾಗಿದೆ. ತಾವು ಮಧ್ಯಪ್ರವೇಶ ಮಾಡಿ ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಕ್ಕರೆ ನಾಡಿನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದ್ದ ಕಮಲದಿಂದ ಸಂಚಲನ ಸೃಷ್ಟಿಸಕ್ಕರೆ ನಾಡಿನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದ್ದ ಕಮಲದಿಂದ ಸಂಚಲನ ಸೃಷ್ಟಿ

2021-22ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸುಮಾರು 98 ಭತ್ತ ಖರೀದಿ ಏಜೆನ್ಸಿ ಮ್ಯಾಪಿಂಗ್ ಮಾಡಿದ ಮಿಲ್‌ಗಳಿಂದ ಖರೀದಿಸಲಾಗಿತ್ತು. ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತವನ್ನು 75 ಸಾವಿರ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಿತ್ತು. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸುಮಾರು 81,459 ಹೆಕ್ಟೇರ್ ವಿಸ್ತೀರ್ಣದಲ್ಲಿರುವ ಭತ್ತದ ಬೆಳೆಯು ಕಟಾವಿಗೆ ಬಂದಿದೆ. ಅಂದಾಜು 50 ಲಕ್ಷ ಕ್ವಿಂಟಾಲ್ ಭತ್ತ ಉತ್ಪಾದನೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಆತಂಕಕ್ಕೆ ಒಳಗಾಗುತ್ತಿರುವ ರೈತಾಪಿ ವರ್ಗ

ಆತಂಕಕ್ಕೆ ಒಳಗಾಗುತ್ತಿರುವ ರೈತಾಪಿ ವರ್ಗ

ಇನ್ನು 2021-22ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 30 ಸಾವಿರ ರೈತರಿಂದ 5 ಲಕ್ಷ ಕ್ವಿಂಟಾಲ್ ರಾಗಿಯನ್ನು ಬೆಂಬಲ ಬೆಲೆ ನೀಡುವ ಮುಖಾಂತರ ಖರೀದಿಸಲಾಗಿತ್ತು. 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಸುಮಾರು 50,000 ಹೆಕ್ಟೇರ್ ವಿಸ್ತೀರ್ಣದಲ್ಲಿ ರಾಗಿ ಬೆಳೆಯಲಾಗಿದೆ. ಹೀಗಾಗಿ ಸುಮಾರು 10 ಲಕ್ಷಕ್ಕೂ ಹೆಚ್ಚು ಕ್ವಿಂಟಾಲ್ ರಾಗಿ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ ಇನ್ನೂ ಕೂಡ ಖರೀದಿ ಕೇಂದ್ರಗಳನ್ನು ತೆರೆಯದೇ ಇರುವುದರಿಂದ ರಾಗಿ ಬೆಳೆದ ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದಿದ್ದಾರೆ.

ಕಂಗಾಲಾದ ಜಿಲ್ಲೆಯ ಅನ್ನದಾತರು

ಕಂಗಾಲಾದ ಜಿಲ್ಲೆಯ ಅನ್ನದಾತರು

ಈಗಾಗಲೇ ಬೆಲೆ ಕುಸಿತ ಹಾಗೂ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳ ಬೆಲೆ ಏರಿಕೆ ಆಗಿದೆ. ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರೈತನ ಬದುಕು ದುಸ್ತರವಾಗಿದೆ. ಇದರಿಂದ ಜೀವನ ಸಂಕಷ್ಟಕ್ಕೆ ಸಿಲುಕಿ ಆತ್ಯಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕೃಷಿ ವಲಯ ಸಂಕಷ್ಟಕ್ಕೆ ಸಿಲುಕಿ ನಷ್ಟದ ದಾರಿ ಹಿಡಿದಿದೆ. ಕೃಷಿ ಕಾರ್ಮಿಕರ ಕೊರತೆಯೂ ತೀವ್ರವಾಗಿ ರೈತರನ್ನು ಕಾಡುತ್ತಿದೆ. ಖರೀದಿ ಕೇಂದ್ರಗಳನ್ನು ತೆರೆಯುವುದು ವಿಳಂಬವಾದಲ್ಲಿ ಮಧ್ಯವರ್ತಿಗಳ ಮುಷ್ಟಿಗೆ ಸಿಲುಕಿ ರೈತರು ಕಡಿಮೆ ಬೆಲೆಗೆ ಭತ್ತ ಮತ್ತು ರಾಗಿಯನ್ನು ತಮ್ಮ ತುರ್ತು ಅಗತ್ಯತೆಗಳಿಗೆ ಮಾರಾಟ ಮಾಡಿ ನಷ್ಟಕ್ಕೊಳಗಾಗುತ್ತಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಜನರನ್ನು ದಿಕ್ಕು ತಪ್ಪಿಸುತ್ತಿದೆ: ಬೂಕನಕೆರೆಯಲ್ಲಿ ಮಾಜಿ ಸಿಎಂ ಬಿಎಸ್‌ವೈ ಆಕ್ರೋಶಕಾಂಗ್ರೆಸ್ ಪಕ್ಷ ಜನರನ್ನು ದಿಕ್ಕು ತಪ್ಪಿಸುತ್ತಿದೆ: ಬೂಕನಕೆರೆಯಲ್ಲಿ ಮಾಜಿ ಸಿಎಂ ಬಿಎಸ್‌ವೈ ಆಕ್ರೋಶ

ಸೂಕ್ತ ಬೆಲೆ ನಿಗದಿ ಮಾಡಬೇಕು, ಮನವಿ

ಸೂಕ್ತ ಬೆಲೆ ನಿಗದಿ ಮಾಡಬೇಕು, ಮನವಿ

ಆದ್ದರಿಂದ ಸರ್ಕಾರ ಕೂಡಲೇ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಮಂಡ್ಯ ಜಿಲ್ಲೆಯ ಜೊತೆಗೆ ಮೈಸೂರು, ಚಾಮರಾಜನಗರ, ಮಡಿಕೇರಿ, ಹಾಸನ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಕೂಡಲೇ ನೋಂದಣಿ ಕೇಂದ್ರವನ್ನು ಪ್ರಾರಂಭ ಮಾಡಬೇಕು. ಹಾಗೆಯೇ ದರ ಏರಿಕೆ ಮಾಡಬೇಕು ಎಂದು ಆಗ್ರಹಿಸಿದರು.

ದಿನೇಶ್ ಗೂಳಿಗೌಡ ನೀಡಿದ ಪತ್ರದಲ್ಲಿ ಏನಿದೆ?

ದಿನೇಶ್ ಗೂಳಿಗೌಡ ನೀಡಿದ ಪತ್ರದಲ್ಲಿ ಏನಿದೆ?

ಕಳೆದ ಬಾರಿ ಇದ್ದಂತಹ ಒಬ್ಬ ರೈತನಿಂದ ಇಂತಿಷ್ಟೇ ಕ್ವಿಂಟಾಲ್ ಖರೀದಿ ಮಾಡಬೇಕು ಎಂಬ ನಿಯಮವನ್ನು ತೆಗೆದುಹಾಕಬೇಕಿದೆ. ರೈತ ಉತ್ಪಾದಿಸಿದ ಎಲ್ಲ ಭತ್ತ ಮತ್ತು ರಾಗಿಯನ್ನು ಖರೀದಿ ಮಾಡಬೇಕು ಎಂದು ಈ ಭಾಗದ ರೈತರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಯವರಿಗೆ ಸಲ್ಲಿಸಿದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

English summary
Legislative Council Member, MLA Dinesh gooligowda demands paddy and millet purchas centre in Mandya. Gooligowda request to Chief Minister Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X