ಧಾರವಾಡ ಕೃಷಿ ವಿವಿಯಲ್ಲಿ ವಿವಿಧ ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ
ಬೆಂಗಳೂರು, ನವೆಂಬರ್ 02: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (ಯುಎಎಸ್)ದಲ್ಲಿ ಖಾಲಿ ಇರುವ ಫಾರ್ಮ್ ಮ್ಯಾನೇಜರ್ ಮತ್ತು ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಸಂದರ್ಶನ ಕರೆಯಲಾಗಿದೆ
01 ಫಾರ್ಮ್ ಮ್ಯಾನೇಜರ್ ಹಾಗೂ 01 ಪ್ರೋಗ್ರಾಂ ಅಸಿಸ್ಟೆಂಟ್ ಒಟ್ಟು ಎರಡು ಹುದ್ದೆಗಳಿಗೆ ನವೆಂಬರ್ 13ರಂದು 11ಗಂಟೆಗೆ ನಡೆಯಲಿರುವ ವಾಕ್ ಇನ್ ಸಂದರ್ಶನಕ್ಕೆ ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು.

ವಿದ್ಯಾರ್ಹತೆ:
* ಫಾರ್ಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಅಥವಾ ತೋಟಗಾರಿಕೆ ಪದವಿ ಪಡೆದಿರಬೇಕು.
* ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆ: ಬ್ಯಾಚುಲರ್ ಇನ್ ಕಂಪ್ಯೂಟರ್ ಅಪ್ಲಿಕೇಷನ್ / ಬಿ.ಎಸ್,ಸಿ ಮತ್ತು ಪಿ.ಜಿ. ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ಸ್ .
ಆಯ್ಕೆ ವಿಧಾನ: ಮೇಲೆ ತಿಳಿಸಲಾಗಿರುವ ಎರಡೂ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications