ನಾಲ್ಕನೇ ದಿನಕ್ಕೆ ಕಾಲಿರಿಸಿದ ಕುಮಾರಸ್ವಾಮಿ ಪಾದಯಾತ್ರೆ
ಧಾರವಾಡ, ಜೂ.28 : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಪಾದಯಾತ್ರೆ ಭಾನುವಾರ ನಾಲ್ಕನೇ ದಿನಕ್ಕೆ ಕಾಲಿರಿಸದ್ದು ಸಂಜೆ ಬೆಳಗಾವಿ ತಲುಪಲಿದೆ.
ಪಾದಯಾತ್ರೆಗೆ ಅಡ್ಡಿಯಾಗಿದ್ದ ವರುಣ ಕೊಂಚ ಬಿಡುವು ನೀಡಿದ್ದು ಜೆಡಿಎಸ್ ಕಾರ್ಯಕರ್ತರಲ್ಲಿ ಹರ್ಷ ತಂದಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆ ಬಗಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ.[ಮಳೆಯ ನಡುವೆಯೇ ಮುಂದುವರೆದಿದೆ ಎಚ್ಡಿಕೆ ಪಾದಯಾತ್ರೆ]

ಭಾನುವಾರ ಬಾಗೇವಾಡಿಯಿಂದ ಬೆಳಗಾವಿ ತನಕ ಪಾದಯಾತ್ರೆ ಸಾಗಿದೆ. ನಂತರ ಜೂನ್ 29ರಂದು ಬೆಳಗಾವಿ ಸಿ.ಪಿ.ಎಡ್ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು ಮಧ್ಯಾಹ್ನ 12 ಗಂಟೆಗೆ ಸುವರ್ಣ ಸೌಧದಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿ ಸುವರ್ಣ ಸೌಧ ಮಳೆಗಾಲದ ಅಧಿವೇಶನಕ್ಕೆ ಸಿದ್ಧವಾಗಿದ್ದು, ರಾಜ್ಯದಲ್ಲಿ ಪ್ರತಿದಿನ ನಡೆಯುತ್ತಿರುವ ರೈತರ ಆತ್ಮಹತ್ಯೆ, ಕಬ್ಬು ಬೆಳೆಗಾರರ ಸಮಸ್ಯೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಜೆಡಿಎಸ್ ಗಮನ ಸೆಳೆಯಲಿದೆ.













Click it and Unblock the Notifications