ರೈತರ ಆತ್ಮಹತ್ಯೆ: ಪರಿಹಾರದಲ್ಲಿ ವಿಳಂಬವಾದರೆ ಕಠಿಣ ಕ್ರಮ: ಸಿದ್ದು
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಲ್ಲಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಮೇ 06: ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಲ್ಲಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ವಿಧಾನ ಸೌಧದಲ್ಲಿ ನಡೆದ ಜಿಲ್ಲಾ ಉಸ್ತುವಾರಿಗಳ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ರೈತರ ಕುಟುಂಬಕ್ಕೆ ಪರಿಹಾರ ನೀಡುವುದಷ್ಟೇ ಅಲ್ಲ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಮಾಸಾಶನ ನೀಡುವುದು, ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ ನೀಡುವ ಅಗತ್ಯ ಜವಾಬ್ದಾರಿಯನ್ನು ಸಂಬಂಧ ಪಟ್ಟ ಅಧಿಕಾರಿಗಳು ವಹಿಸಬೇಕು. ಈ ವಿಷಯದಲ್ಲಿ ವಿಳಂಬ ಧೋರಣೆ ಪಾಲಿಸುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆಂದು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹೇಳಿದ್ದಾರೆ.[ನೀರು ನಿರ್ವಹಣೆಗೆ ದುಬೈ, ಇಸ್ರೇಲ್ ಮಾದರಿ ಬೇಕು - ಸಿಎಂ]

ಬರ ಇರುವ ಕಡೆಗಳಲ್ಲಿ ಸರ್ಕಾರದ ಒಬ್ಬರಲ್ಲ ಒಬ್ಬ ಅಧಿಕಾರಿಗಳು ಇರಲೇಬೇಕು ಎಂದು ಸಹ ಅವರು ತಾಕೀತುಮಾಡಿದ್ದಾರೆ.












Click it and Unblock the Notifications