Good News: ರಾಜ್ಯದ ರೈತರಿಗೆ ಗುಡ್‌ನ್ಯೂಸ್-ಏನದು?
ಬೆಂಗಳೂರು, ಮೇ, 03: ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಿಲ್ಲದೆ ಬರೀ ಬಿಸಿಲಿನ ವಾತಾವರಣವೇ ಮುಂದುವರೆದಿದ್ದು, ಇದರಿಂದ ಜನರು ಕಂಗೆಟ್ಟಿದ್ದಾರೆ. ಇನ್ನು ಬರಪರಿಹಾರ ಬಿಡುಗಡೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್‌ನ್ಯೂಸ್‌ವೊಂದು ಸಿಕ್ಕಿದೆ. ಹಾಗಾದರೆ ಮಾಹಿತಿ ಇಲ್ಲಿದೆ ಗಮನಿಸಿ.
ಇದೀಗ ರಾಜ್ಯ ಸರ್ಕಾರದ ಒತ್ತಡ ಹಾಕಿದ ಬಳಿಕ ಕೇಂದ್ರ ಬರಪರಿಹಾರವನ್ನು ಬಿಡಿಗಡೆ ಮಾಡಿದೆ. ಇನ್ನು ಇಂದಿನಿಂದಲೇ ಬೆಳೆನಷ್ಟ ಪರಿಹಾರ ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಣೆ ಮಾಡಲಾಗುತ್ತದೆ. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ.

ಕೇಂದ್ರದಿಂದ ಬಂದಿರುವ 3,454 ಕೋಟಿ ರೂಪಾಯಿ ಇನ್ ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ.ಈಗಾಗಲೇ ರೈತರಿಗೆ ವಿತರಿಸಿದ ಗರಿಷ್ಠ 2,000 ರೂಪಾಯಿವರೆಗಿನ ಪರಿಹಾರ ಮೊತ್ತ ಕಡಿತ ಮಾಡಿಕೊಂಡು ಬಾಕಿ ಮೊತ್ತವನ್ನು ಡಿಬಿಟಿ ಮೂಲಕ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ.
ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಖುಷ್ಕಿ, ನೀರಾವರಿ, ತೋಟಗಾರಿಕೆ ಬೆಳೆಗಳಿಗೆ ನಿಗದಿಯಾದ ಮೊತ್ತವನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ಜಮಾ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶುಕ್ರವಾರ ಮೊದಲಿಗೆ 15 ಲಕ್ಷ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುತ್ತದೆ. ನಂತರ ಇನ್ನುಳಿದ ರೈತರಿಗೆ ಮೂರ್ನಾಲ್ಕು ದಿನಗಳಲ್ಲಿ ಪರಿಹಾರ ಹಣ ತಲುಪಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೇಂದ್ರದಿಂದ ಬಂದಿರುವ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಲು ಚುನಾವಣಾ ಆಯೋಗದಿಂದ ಒಪ್ಪಿಗೆ ಪಡೆಯಲಾಗಿದ್ದು, ಕಳೆದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಪರಿಹಾರಕ್ಕೆ ಅರ್ಹರಾಗಿದ್ದವರಿಗೆ ಮಾತ್ರ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.












Click it and Unblock the Notifications