ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಎಚ್ಡಿಕೆ

ಯಾದಗಿರಿ, ಏಪ್ರಿಲ್ 09: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಿ ರೈತರ ಋಣ ತೀರಿಸುತ್ತೇವೆ, ರೈತರ ಹಾಗೂ ಜನಸಾಮಾನ್ಯರ ಹೇಳಿಗೆಗಾಗಿ ಶ್ರಮಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದ ಬೈತುಲ್ ಮಹಲ್ ನಲ್ಲಿ ಹಮ್ಮಿಕೊಂಡಿದ ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಪಕ್ಷ ಸೇರ್ಪಡೆ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

Elections 2018 : Will waive off Farm loan if JDS come to power: HDK

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಗೆಲುವಿಗೆ ಶ್ರಮಿಸುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಅಭಿವೃದ್ಧಿ ಕಾರ್ಯಾಗಳನ್ನು ಮತ್ತು ಸಾಧನೆಗಳನ್ನು ಜನರಿಗೆ ತಿಳಿಸಿಬೇಕು ಎಂದರು.

ಜೆಡಿಎಸ್ಸಿಗೆ ಸೇರ್ಪಡೆ: ಇದೆ ಸಂದರ್ಭದಲ್ಲಿ ನಗರ ಯೋಜನೆ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೊಡ್ಡಪ್ಪಗೌಡ ಕಳಗಿನಮನಿ, ಡಾ. ಶಫಿ ತುನ್ನೂರ,ಗುಂಡಪ್ಪ ಕಲಬುರ್ಗಿ, ಸೇರಿದಂತೆ ಅನೇಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸಮಾವೇಶದಲ್ಲಿ ಜೆಡಿಎಸ್ ಮುಖಂಡರಾದ ಬಂಡೆಪ್ಪ ಖಾಶಂಪೂರ, ಬಸವರಾಜ ಹೊರಟ್ಟಿ, ಯಾದಗಿರಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಸಿ.ಕಾಡ್ಲೂರ್ ಹಾಗೂ ಶರಿಫ ಕಾಡ್ಲೂರ್, ನಾಗರತ್ನ ಕುಪ್ಪಿ, ಸೇರಿದಂತೆ ಪಕ್ಷದ ಪ್ರಮುಖರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+