ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಚಟುವಟಿಕೆಗಳಿಗೆ ಅವಕಾಶ: ಪ್ರತಿದಿನ ಬೆಳಿಗ್ಗೆ 6ರಿಂದ 10ರವರೆಗೆ ವಿನಾಯಿತಿ

|
Google Oneindia Kannada News

ಬೆಂಗಳೂರು, ಮೇ 11: ರಾಜ್ಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್‌ಡೌನ್ ಜಾರಿಗೊಳಿಸಿರುವ ಕಾರಣ ಮೇ10 ರಿಂದ ಲಾಕ್‌ಡೌನ್ ಮುಗಿಯುವವರೆಗೂ ಸರ್ಕಾರದ ಮಾರ್ಗಸೂಚಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರತಿದಿನನ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆವರೆಗೂ ವಿನಾಯಿತಿ ನೀಡಲಾಗಿದೆ.

ಈ ಆದೇಶದನ್ವಯ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳು, ಬಾಡಿಗೆ ಆಧಾರಿತ ಸೇವಾ ಕೇಂದ್ರಗಳು ಹಾಗೂ ಕೃಷಿ ಪರಿಕರ ಮಾರಾಟ ಮಳಿಗೆಗಳು ಬದಲಾದ ಸಮಯದಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಕೃಷಿ ಪರಿಕರಗಳನ್ನು ಖರೀದಿ ಮಾಡುವ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವ ರೈತ ಬಾಂಧವರು ನಿಗಧಿತ ಸಮಯದಲ್ಲಿ ತಮ್ಮ ಹತ್ತಿರದ ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಕೃಷಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Exemption To Agriculture Activities From 6 am To 10 am Everyday During Covid Lockdown

Recommended Video

ಸರ್ಕಾರದ ಈ ನಡೆ ನಿಜಕ್ಕೂ ಆಘಾತಕಾರಿ ! | Oneindia Kannada

ರೈತರು ತಮ್ಮ ಆರೋಗ್ಯದ ಹಿತದೃಷ್ಠಿಯಿಂದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ಯಾನಿಟೈಸರ್ ಬಳಸಿ ಶುಚಿತ್ವ ಕಾಪಾಡುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Exemption to Agricultural activities from 6am to 10am daily on the Covid-19 Guidelines until the lockdown is over.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X