• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೃಷಿ ಕಾಯ್ದೆಗಳ ಕಥೆ: ಉತ್ತರ ಪ್ರದೇಶವೇ ರೈತ ಹೋರಾಟ ಮುಂದಿನ ನಿಲ್ದಾಣ!

|
Google Oneindia Kannada News

ನವದೆಹಲಿ, ಜುಲೈ 22: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರು ಉತ್ತರ ಪ್ರದೇಶದ ಕಡೆಗೆ ತಮ್ಮ ಮುಂದಿನ ಹೆಜ್ಜೆ ಇಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವನ್ನು ಕಟ್ಟಿಹಾಕುವ ಉದ್ದೇಶದಿಂದ ಜನಾಭಿಪ್ರಾಯ ಮೂಡಿಸಲು ರೈತರು ಅಣಿಯಾಗಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ನಡುವೆ ಜಂತರ್ ಮಂತರ್ ಬಳಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ರೈತರು ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.

"ಕೃಷಿ ಕಾಯ್ದೆಗಳ ಬಗ್ಗೆ ರೈತರು ತಮ್ಮದೇ ಸಂಸತ್ತಿನಲ್ಲಿ ಚರ್ಚಿಸಿದ್ದಾರೆ. ಈಗ ಸಂಸತ್ತಿನ ಸದಸ್ಯರು ಪಕ್ಷಬೇಧವನ್ನು ಮರೆತು ಸದನದಲ್ಲಿ ರೈತಪರವಾಗಿ ಧ್ವನಿ ಎತ್ತದಿದ್ದರೆ ತಮ್ಮ ಕ್ಷೇತ್ರದಲ್ಲಿ ತೀವ್ರ ಟೀಕೆಗೆ ಗುರಿಯಾಗಬೇಕಾಗುತ್ತದೆ," ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಕೃಷಿ ಕಾಯ್ದೆ ವಿರುದ್ಧ ಮುಂದಿನ ಹೋರಾಟದ ಹೆಜ್ಜೆ ಉತ್ತರ ಪ್ರದೇಶದ ಕಡೆ ಹೊರಳಲು ಕಾರಣವೇನು. ರೈತರ ಮುಂದಿನ ಹೋರಾಟದ ಬಗೆ ಹೇಗಿರಲಿದೆ ಎನ್ನುವುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ಓದಿ.

ದೆಹಲಿಯ ಜಂತರ್ ಮಂತರ್ ಎದುರು ರೈತರ ಪ್ರತಿಭಟನೆ: ಗಡಿಯಲ್ಲಿ ರೈತರ ಜಮಾವಣೆದೆಹಲಿಯ ಜಂತರ್ ಮಂತರ್ ಎದುರು ರೈತರ ಪ್ರತಿಭಟನೆ: ಗಡಿಯಲ್ಲಿ ರೈತರ ಜಮಾವಣೆ

ಉತ್ತರ ಪ್ರದೇಶದಲ್ಲಿ ಕೇಸರಿ ಪಡೆಗೆ ರೈತರ ಸವಾಲು

ಉತ್ತರ ಪ್ರದೇಶದಲ್ಲಿ ಕೇಸರಿ ಪಡೆಗೆ ರೈತರ ಸವಾಲು

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಬಿಸಿ ಮುಟ್ಟಿಸಲು ರೈತರು ಸನ್ನದ್ಧರಾಗಿದ್ದಾರೆ. ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಪಕ್ಷವನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ತಮ್ಮ ಹೋರಾಟದ ಹೆಜ್ಜೆಯನ್ನು ಇರಿಸುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. "ಬಿಜೆಪಿ ಹೃದಯ" ಎನಿಸಿಕೊಂಡಿರುವ ಉತ್ತರ ಪ್ರದೇಶದ ಕಡೆಗೆ ನಾವು ಮುಂದಿನ ಹೆಚ್ಚೆ ಇಡುತ್ತೇವೆ. ನಾವು ಶಾಂತಿ ಸಂಧಾನಕ್ಕೆ ಸಿದ್ಧರಿದ್ದೇವೆ. ಆದರೆ ಮೂರು ವಿವಾದಿತ ಕಾಯ್ದೆಗಳನ್ನು ರದ್ದುಗೊಳಿಸುವುದರ ಹೊರತಾಗಿ ಯಾವುದೇ ಮಾತುಕತೆಗಳು ಬೇಕಿಲ್ಲ," ಎಂದು ದೆಹಲಿ-ಹರಿಯಾಣದ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡ ಪ್ರೇಮ್ ಸಿಂಗ್ ಭಂಗು ಎಚ್ಚರಿಸಿದ್ದಾರೆ.

"ಬಿಜೆಪಿ ಗೆಲುವಿನ ಹಿಂದೆ ಒತ್ತಡ, ಬೆದರಿಕೆ ಹಾಗೂ ಮೋಸ"

ಉತ್ತರ ಪ್ರದೇಶದಲ್ಲಿ ಇತ್ತೀಚಿನ ನಡೆದ ಸ್ಥಳೀಯ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಅತಿಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ರೈತರ ಪ್ರತಿಭಟನೆ ನಡೆಯುತ್ತಿರುವ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲೂ ಬಿಜೆಪಿ ಗೆಲುವಿಗೆ ಸಂಯುಕ್ತ ಕಿಸಾನ್ ಮೋರ್ಚಾ ಬೇರೆ ವ್ಯಾಖ್ಯಾನವನ್ನು ನೀಡಿದೆ. 'ರಾಜ್ಯದ 3050 ಸ್ಥಾನಗಳಲ್ಲಿ ಬಿಜೆಪಿ ಅತಿಹೆಚ್ಚು ಎಂದರೆ 765 ಪಂಚಾಯತ್ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ ಪಕ್ಷೇತರ ಅಭ್ಯರ್ಥಿಗಳು ಹಾಗೂ ಇತರೆ ಪಕ್ಷಗಳ ಅಭ್ಯರ್ಥಿಗಳು ಹೆಚ್ಚಾಗಿ ಗೆಲುವು ಸಾಧಿಸಿದ್ದಾರೆ,' ಎಂದು ಎಸ್ ಕೆಎಂ ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. "ಇದು ನೇರ ಚುನಾವಣೆಯಾಗಿದ್ದು, ರೈತರು ಬಿಜೆಪಿ ವಿರುದ್ಧ ತಮ್ಮ ಆದೇಶವನ್ನು ಸ್ಪಷ್ಟವಾಗಿ ನೀಡಿದ್ದಾರೆ. ಆದರೆ ಪಂಚಾಯತ್ ಅಧ್ಯಕ್ಷರ ಚುನಾವಣೆಯು ಬೆದರಿಕೆ, ಒತ್ತಡ ಹಾಗೂ ಮೋಸದಿಂದಲೇ ನಡೆಯುತ್ತದೆ," ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಕೃಷಿ ಕಾಯ್ದೆ ಕೆಂಡ: ರೈತರಿಗೆ ಲಾಭದಾಯಕವಾಗಿವೆ ಎಂದ ಸಚಿವ ತೋಮರ್ಕೃಷಿ ಕಾಯ್ದೆ ಕೆಂಡ: ರೈತರಿಗೆ ಲಾಭದಾಯಕವಾಗಿವೆ ಎಂದ ಸಚಿವ ತೋಮರ್

ಹರಿಯಾಣ ಮತ್ತು ಪಂಜಾಬ್ ಮಾದರಿಯ ಹೋರಾಟ

ಹರಿಯಾಣ ಮತ್ತು ಪಂಜಾಬ್ ಮಾದರಿಯ ಹೋರಾಟ

"ಪಂಜಾಬ್ ಮತ್ತು ಹರಿಯಾಣದಲ್ಲಿ ಈ ಹಿಂದೆ ಬಿಜೆಪಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದೆವು. ಗ್ರಾಮೀಣ ಪ್ರದೇಶಗಳಿಗೆ ಬಿಜೆಪಿ ನಾಯಕರು ತೆರಳಿ ಪ್ರಚಾರ ಮಾಡುವುದಕ್ಕೆ ಹಾಗೂ ಪ್ರಚಾರ ಸಭೆಗಳನ್ನು ಆಯೋಜಿಸುವುದಕ್ಕೆ ಅವಕಾಶ ನೀಡುತ್ತಿರಲಿಲ್ಲ. ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕೂಡ ಅದೇ ಹರಿಯಾಣ ಮತ್ತು ಪಂಜಾಬ್ ಮಾದರಿಯಲ್ಲಿ ಹೋರಾಟ ಮುಂದುವರಿಸಲಾಗುವುದು," ಎಂದು ಕ್ರಾಂತಿಕಾರಿ ಕಿಸಾನ್ ಒಕ್ಕೂಟದ ಅಧ್ಯಕ್ಷ ದರ್ಶನ್ ಪಾಲ್ ಹೇಳಿದ್ದಾರೆ.

ಹೋರಾಟದ ಮೂಲಕ ರೈತರ ನೋವಿನ ಬಗ್ಗೆ ಜಾಗೃತಿ

ಹೋರಾಟದ ಮೂಲಕ ರೈತರ ನೋವಿನ ಬಗ್ಗೆ ಜಾಗೃತಿ

"ನಾವು ನೇರವಾಗಿ ಹೋಗಿ ಬಿಜೆಪಿ ಮನ ನೀಡಬೇಡಿ ಎಂದು ಎಲ್ಲಿಯೂ ಹೇಳುವುದಿಲ್ಲ. ದೇಶದ ರೈತರು ನವೆದೆಹಲಿಯ ಮೂರು ಗಡಿ ಪ್ರದೇಶಗಳಲ್ಲಿ ಬಿಸಿಲು, ಗಾಳಿ, ಮಳೆ ಹಾಗೂ ಚಳಿ ಎನ್ನದೇ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಸುಮಾರು ಎಂಟು ತಿಂಗಳು ಕಳೆದರೂ ರೈತರ ಕಡೆಗೆ ತಿರುಗಿ ನೋಡದ ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವುದಷ್ಟೇ ನಮ್ಮ ಉದ್ದೇಶವಾಗಿದೆ," ಎಂದು ಭಾರತೀಯ ಕಿಸಾನ್ ಒಕ್ಕೂಟದ ಉಗ್ರಾಣದ ಅಧ್ಯಕ್ಷ ಜೋಗಿಂದರ್ ಸಿಂಗ್ ಹೇಳಿದ್ದಾರೆ.

ರೈತರು ಸರ್ಕಾರದ ನಡುವಿನ ಸಂಧಾನ ವಿಫಲ

ರೈತರು ಸರ್ಕಾರದ ನಡುವಿನ ಸಂಧಾನ ವಿಫಲ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ನಿರಂತರ ಹೋರಾಟ ನಡೆಸುತ್ತಿವೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಆಹಾರ ಸಚಿವ ಪಿಯೂಶ್ ಗೋಯೆಲ್ ಸೇರಿದಂತೆ ಮೂವರು ಕೇಂದ್ರ ಸಚಿವರು ಪ್ರತಿಭಟನಾನಿರತ ಸಂಘಟನೆಗಳ ಜೊತೆಗೆ ಸಂಧಾನ ಸಭೆ ನಡೆಸಿದ್ದರು. ಈವರೆಗೂ ನಡೆಸಿದ 11 ಸುತ್ತಿನ ಸಂಧಾನ ಮಾತುಕತೆ ವಿಫಲಗೊಂಡಿತ್ತು. ಕಳೆದ ಜನವರಿ 22ರಂದು ಕೊನೆಯದಾಗಿ 41 ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳ ನಡುವಿನ ಸಂಧಾನ ಮಾತುಕತೆ ಮುರಿದು ಬಿದ್ದಿತ್ತು. ಇದಾಗಿ ನಾಲ್ಕು ದಿನಗಳಲ್ಲೇ ನಡೆದ ಜನವರಿ 26ರ ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗಿದ್ದು, ಅಂದು ನವದೆಹಲಿಯಲ್ಲಿ ರೈತರು ನಡೆಸಿದ ರ್ಯಾಲಿ ಹಿಂಸಾಚಾರಕ್ಕೆ ತಿರುಗಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ನಿರಂತರ ಪ್ರತಿಭಟನೆ

ರಾಷ್ಟ್ರ ರಾಜಧಾನಿಯಲ್ಲಿ ನಿರಂತರ ಪ್ರತಿಭಟನೆ

ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳು ಯಾವುವು?

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳು ಯಾವುವು?

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

English summary
Farm Laws: Next Stop For The Farmers Protest Is Will Be The Uttar Pradesh, What The Reason For This.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X