ರೈತರ ಪ್ರತಿಭಟನೆ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕಿಡಿಗೇಡಿಗಳು

ನವದೆಹಲಿ, ಮಾರ್ಚ್ 8: ಸಿಂಘು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಭಾನುವಾರ ರಾತ್ರಿ ಗಾಳಿಯಲ್ಲಿ ಗುಂಡುಹಾರಿಸಿದ್ದಾರೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ನೂರು ದಿನ ದಾಟಿದ್ದು, ಇಂದು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಪ್ರತಿಭಟನೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಹರ್ಯಾಣ ಭಾಗದ ಸಿಂಘು ಗಡಿಯಲ್ಲಿ ರೈತರು ರಾತ್ರಿ 11.25ರ ವೇಳೆ ಊಟ ಸೇವಿಸುತ್ತಿದ್ದ ಸಂದರ್ಭದಲ್ಲಿ ಗುಂಡುಗಳನ್ನು ಹಾರಿಸಲಾಗಿದೆ. ಈ ಕಿಡಿಗೇಡಿಗಳು ಪಂಜಾಬ್‌ನವರಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಅವರು ಬಂದಿದ್ದ ವಾಹನದಲ್ಲಿ ಪಂಜಾಬ್ ರಾಜ್ಯದ ನೋಂದಣಿ ಸಂಖ್ಯೆ ಕಾಣಿಸಿದೆ.

ಈ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಹರ್ಯಾಣದ ಕುಂಡ್ಲಿಯಲ್ಲಿನ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗುಂಡು ಹಾರಿಸಿದ ದುಷ್ಕರ್ಮಿಗಳಿಗೆ ಹುಡುಕಾಟ ಆರಂಭಿಸಿದ್ದಾರೆ. ಪ್ರತಿಭಟನಾನಿರತ ರೈತರನ್ನು ಬೆದರಿಸುವ ತಂತ್ರ ಇದಾಗಿರಬಹುದು ಎಂದು ಅನುಮಾನಿಸಲಾಗಿದೆ.

 Farm Laws: Shots Fired In Air Near Farmers Protest Site At Singhu Border During Meal

ಮಹಿಳಾ ದಿನಾಚರಣೆ ಪ್ರಯುಕ್ತ ಇಂದು ದೆಹಲಿಯಲ್ಲಿ ಸುಮಾರು 40,000 ಮಹಿಳೆಯರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಿದ್ದಾರೆ. ಪಂಜಾಬ್‌ನ ಹಳ್ಳಿ ಹಳ್ಳಿಗಳಿಂದ ಮಹಿಳೆಯರು ಭಾನುವಾರದಿಂದಲೇ ದೆಹಲಿಯತ್ತ ಪ್ರಯಾಣಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+