ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಪ್ರತಿಭಟನೆ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕಿಡಿಗೇಡಿಗಳು

|
Google Oneindia Kannada News

ನವದೆಹಲಿ, ಮಾರ್ಚ್ 8: ಸಿಂಘು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಭಾನುವಾರ ರಾತ್ರಿ ಗಾಳಿಯಲ್ಲಿ ಗುಂಡುಹಾರಿಸಿದ್ದಾರೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ನೂರು ದಿನ ದಾಟಿದ್ದು, ಇಂದು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಪ್ರತಿಭಟನೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಹರ್ಯಾಣ ಭಾಗದ ಸಿಂಘು ಗಡಿಯಲ್ಲಿ ರೈತರು ರಾತ್ರಿ 11.25ರ ವೇಳೆ ಊಟ ಸೇವಿಸುತ್ತಿದ್ದ ಸಂದರ್ಭದಲ್ಲಿ ಗುಂಡುಗಳನ್ನು ಹಾರಿಸಲಾಗಿದೆ. ಈ ಕಿಡಿಗೇಡಿಗಳು ಪಂಜಾಬ್‌ನವರಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಅವರು ಬಂದಿದ್ದ ವಾಹನದಲ್ಲಿ ಪಂಜಾಬ್ ರಾಜ್ಯದ ನೋಂದಣಿ ಸಂಖ್ಯೆ ಕಾಣಿಸಿದೆ.

ಕೃಷಿ ಕಾಯ್ದೆ: ಪ್ರತಿಭಟನೆಗಾಗಿ ದೆಹಲಿಯತ್ತ ಹೊರಟ 40,000 ಮಹಿಳೆಯರುಕೃಷಿ ಕಾಯ್ದೆ: ಪ್ರತಿಭಟನೆಗಾಗಿ ದೆಹಲಿಯತ್ತ ಹೊರಟ 40,000 ಮಹಿಳೆಯರು

ಈ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಹರ್ಯಾಣದ ಕುಂಡ್ಲಿಯಲ್ಲಿನ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗುಂಡು ಹಾರಿಸಿದ ದುಷ್ಕರ್ಮಿಗಳಿಗೆ ಹುಡುಕಾಟ ಆರಂಭಿಸಿದ್ದಾರೆ. ಪ್ರತಿಭಟನಾನಿರತ ರೈತರನ್ನು ಬೆದರಿಸುವ ತಂತ್ರ ಇದಾಗಿರಬಹುದು ಎಂದು ಅನುಮಾನಿಸಲಾಗಿದೆ.

 Farm Laws: Shots Fired In Air Near Farmers Protest Site At Singhu Border During Meal

ಕೃಷಿ ಕಾಯ್ದೆ ಪ್ರತಿಭಟನೆ: ಮತ್ತೊಬ್ಬ ರೈತ ಆತ್ಮಹತ್ಯೆಕೃಷಿ ಕಾಯ್ದೆ ಪ್ರತಿಭಟನೆ: ಮತ್ತೊಬ್ಬ ರೈತ ಆತ್ಮಹತ್ಯೆ

ಮಹಿಳಾ ದಿನಾಚರಣೆ ಪ್ರಯುಕ್ತ ಇಂದು ದೆಹಲಿಯಲ್ಲಿ ಸುಮಾರು 40,000 ಮಹಿಳೆಯರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಿದ್ದಾರೆ. ಪಂಜಾಬ್‌ನ ಹಳ್ಳಿ ಹಳ್ಳಿಗಳಿಂದ ಮಹಿಳೆಯರು ಭಾನುವಾರದಿಂದಲೇ ದೆಹಲಿಯತ್ತ ಪ್ರಯಾಣಿಸಿದ್ದಾರೆ.

English summary
Farm laws: Gunshots were fired in the air by unidentified people on Sunday night near Singhu border.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X