ಬೆಳಗಾವಿ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಬೆಳಗಾವಿ, ಡಿಸೆಂಬರ್ 19: ಸಾಲ ಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ದೇವಾಂಗ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಚಂದ್ರಶೇಖರ ಈರಪ್ಪ ಜಬುಳಿ (45) ತನ್ನದೇ ಹೊಲದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಕಿತ್ತೂರಿನ ಕೆವಿಜೆ ಬ್ಯಾಂಕಿನಲ್ಲಿ 1.34 ಲಕ್ಷ, ಸ್ವಸಹಾಯ ಸಂಘದಲ್ಲಿ 25 ಸಾವಿರ ಮತ್ತು ಖಾಸಗಿಯಾಗಿ 3 ಲಕ್ಷ ಸಾಲ ಮಾಡಿಕೊಂಡಿದ್ದ.

ಮಳೆ ಕೊರತೆ ಹಾಗೂ ಕೀಟ ಬಾಧೆಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಾರದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗಿಲ್ಲ. ಸಾಲ ನೀಡಿದವರ ಒತ್ತಡ ಹೆಚ್ಚಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications