ಕೈಕೊಟ್ಟ ಬೆಳೆ; ಹುಣಸೂರಿನಲ್ಲಿ ರೈತ ಆತ್ಮಹತ್ಯೆ

ಮೈಸೂರು, ಫೆಬ್ರುವರಿ 3: ಒಂದಲ್ಲಾ ಒಂದು ಕಾರಣಕ್ಕೆ ಸಾಲ ಮಾಡಿಕೊಳ್ಳುತ್ತಿರುವ ರೈತ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುವುದು ರಾಜ್ಯದಲ್ಲಿ ಸಾಮಾನ್ಯವಾದಂತಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗದಿರುವುದು ಮಾತ್ರ ಬೇಸರದ ಸಂಗತಿ.

ಇದೀಗ ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಗಾವಡಗೆರೆ ಹೊಬಳಿಯ ಮೈಲಾಂಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸೂರೇಗೌಡ (55) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ವ್ಯವಸಾಯ ಮಾಡುವ ಸಲುವಾಗಿ ಪಿರಿಯಾಪಟ್ಟಣ ತಾಲೂಕಿನ ಮಾಕೊಡು ಗ್ರಾಮದ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು. ಆದರೆ ಖರ್ಚು ಮಾಡಿ ಬೆಳೆದ ಬೆಳೆ ಕೈಕೊಟ್ಟ ಕಾರಣದಿಂದಾಗಿ ನಷ್ಟವಾಗಿದೆ. ಇದರಿಂದ ಸಾಲ ತೀರಿಸಲು ಸಾಧ್ಯವಾಗದ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Farmer Committed Suicide In Hunsur

ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಗೆ ಓರ್ವ ಮಗ, ಮಗಳು ಮತ್ತು ಪತ್ನಿ ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+