ರೈತರ ಸರಣಿ ಆತ್ಮಹತ್ಯೆ, ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿ
ಬೆಂಗಳೂರು, ಜುಲೈ 11 : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಮುಂದುವರೆದಿದೆ. ಶನಿವಾರ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರೈತರು ಆತ್ಮಹತ್ಯೆ ಮಾಡಿಕೊಂಡ ಮಹಾರಾಷ್ಟ್ರ, ಪಂಜಾಬ್, ಹರ್ಯಾಣ ಮುಂತಾದ ರಾಜ್ಯಗಳಿಗೆ ಭೇಟಿ ನೀಡಿ ರೈತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಆದರೆ, ಕರ್ನಾಟಕಕ್ಕೆ ಏಕೆ ಬರುತ್ತಿಲ್ಲ ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪ್ರಶ್ನಿಸಿದ್ದವು. [ಸಾಲ ಮಾಡಿ ಜೀವ ತಕ್ಕಂಡ್ರೆ ನಾವೇನ್ ಮಾಡದು!]

ಈಗ ಕರ್ನಾಟಕದಲ್ಲಿ ರೈತರ ಸರಣಿ ಆತ್ಮಹತ್ಯೆಗಳು ನಡೆಯುತ್ತಿರುವುದರಿಂದ ಕರ್ನಾಟಕಕ್ಕೆ ಭೇಟಿ ನೀಡಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ. ಆದರೆ, ಅವರ ಕರ್ನಾಟಕ ಭೇಟಿಯ ದಿನಾಂಕ ಮಾತ್ರ ಇನ್ನೂ ನಿಗದಿಯಾಗಿಲ್ಲ. [ರೈತರ ಸಾವಿಗೆ ಕಾರಣವೇನು? ಇಲ್ಲಿದೆ ಉತ್ತರ]
ಬಿ.ಕೆ.ಹರಿಪ್ರಸಾದ್ ಭೇಟಿ : ಕಾಂಗ್ರೆಸ್ ಪಕ್ಷದ ಮೂಲಗಳ ಮಾಹಿತಿಯಂತೆ ರಾಹುಲ್ ಗಾಂಧಿ ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. [ಕಬ್ಬು ಬೆಳೆಗಾರರ ಸಮಸ್ಯೆ, ಸಿದ್ದರಾಮಯ್ಯ ಕೊಟ್ಟ ಉತ್ತರ]
ಇದಕ್ಕೂ ಮೊದಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ, ವರದಿಯೊಂದನ್ನು ಹೈಕಮಾಂಡ್‌ಗೆ ನೀಡಲಿದ್ದಾರೆ. ನಂತರ ರಾಹುಲ್ ಭೇಟಿಯ ದಿನಾಂಕ ನಿಗದಿಯಾಗಲಿದೆ.
ಆತ್ಮಹತ್ಯೆ ಪ್ರಕರಣಗಳು
* ಜೂನ್ 8, ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದ ಗುರುನಾಥ ಮಲ್ಲಪ್ಪ ಚಾಪಗಾವಿ (50).
* ಜೂನ್ 25, ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಗಾಣದಹೊಸೂರಿನ ನಿಂಗೇಗೌಡ (50)
* ಜೂನ್ 26, ನಂಜನಗೂಡು ತಾಲೂಕು ಸಿಬ್ಬೇಗೌಡನಹುಂಡಿಯ ಶಿವಲಿಂಗೇಗೌಡ (40)
* ಜೂನ್ 27, ಹಾವೇರಿ ಜಿಲ್ಲೆಯ ಕುರುಗುಂದ ಗ್ರಾಮದ ಜಗದೀಶ್ ಕಿಡೆಗಣಿ (45)
* ಜೂನ್ 28, ಮಂಡ್ಯದ ಹೊನ್ನನಾಯಕನಹಳ್ಳಿಯಲ್ಲಿ ಶಿವಲಿಂಗೇಗೌಡ
ಜೂನ್ 28ರ ನಂತರ ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಜುಲೈ 10ರಂದು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಜುಲೈ 11ರ ಶನಿವಾರ ಮಂಡ್ಯದಲ್ಲಿ ಇಬ್ಬರು ರೈತರು ಸಾವಿಗೆ ಶರಣಾಗಿದ್ದಾರೆ.












Click it and Unblock the Notifications