• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಳಗಾವಿಯ ಧರಣಿ ನಿರತ ರೈತರಿಗೆ ಬೆಂಬಲ ಸೂಚಿಸಿದ ರಾಜ್ಯ ರೈತ ಸಂಘ

By ಮೈಸೂರು ಪ್ರತಿನಿಧಿ
|

ಮೈಸೂರು, ಡಿಸೆಂಬರ್ 13 : ರಾಜ್ಯ ರೈತ ಸಂಘಗಳ ಒಕ್ಕೂಟ , ಕಬ್ಬು ಬೆಳೆಗಾರರ ಸಂಘ ಜಂಟಿಯಾಗಿ ಬೆಳಗಾವಿಯ ಅಧಿವೇಶನದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಮೈಸೂರಿನ ರೈತರು ಬೆಳಗಾವಿಯಲ್ಲಿ ನಿರಂತರ ಧರಣಿ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ನಂಜನಗೂಡು-ಊಟಿ ಮುಖ್ಯರಸ್ತೆ ತಡೆದು ರಾಜ್ಯ ರೈತ ಸಂಘಟನೆ ಒಕ್ಕೂಟ ಪ್ರತಿಭಟನೆ ಮಾಡುತ್ತಿದ್ದು, ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಬೆಳಗಾವಿ: ಸಿಎಂ ಭರವಸೆ ನಂತರ ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್

ಬೆಳಗಾವಿಯಲ್ಲಿ 6 ದಿನಗಳಿಂದ ರೈತರು ಪ್ರತಿಭಟನೆ ಮಾಡಿದರೂ ಸುಮ್ನೆ ಇದ್ದೀರಾ? ರೈತರೆಂದರೆ ಅಷ್ಟು ಕೇವಲನಾ? ಎಂದು ಆಕ್ರೋಶಗೊಂಡ ರೈತರು ಕೂಡಲೇ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸುಮಾರು ಅರ್ಧ ಕಿಲೋಮೀಟರ್ ತನಕ ವಾಹನಗಳು ಸಾಲುಗಟ್ಟಿ ನಿಂತಿವೆ.

ಬೆಳಗಾವಿ ಅಧಿವೇಶನದ ಮೊದಲ ದಿನ: ಅಗಲಿದ ಗಣ್ಯರಿಗೆ ಸಂತಾಪ

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್​ ಭದ್ರತೆ ಏರ್ಪಡಿಸಲಾಗಿದೆ. ಈ ನಡುವೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

English summary
State farmers association has supported the Belgaum farmers protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X