ದೆಹಲಿಯ ಗಡಿ ಭಾಗಗಳಲ್ಲಿ ಪರಿಸ್ಥಿತಿ ಉದ್ವಿಗ್ನ, ಬ್ಯಾರಿಕೇಡ್ ಮುರಿದು ರೈತರ ಮೆರವಣಿಗೆ
ನವದೆಹಲಿ, ಜನವರಿ 26: ಗಣರಾಜ್ಯೋತ್ಸವ ದಿನದಂದು ರೈತರ ಪ್ರತಿಭಟನೆಗೂ ಮುನ್ನ ದೆಹಲಿಯ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಒದ್ದು ಉರುಳಿಸಿದ ಪ್ರತಿಭಟನಾಕಾರರು ಮಂಗಳವಾರ ಬೆಳಿಗ್ಗೆ ಬರಿಗಾಲಲ್ಲಿ ದೆಹಲಿ ಪ್ರವೇಶಿಸಿದರು. ಬೃಹತ್ ಸಂಖ್ಯೆಯಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಅವರನ್ನು ತಡೆಯಲು ಅಶ್ರುವಾಯುಗಳನ್ನು ಸಿಡಿಸಿದರು.
ದೆಹಲಿ ಮತ್ತು ಹರ್ಯಾಣ ನಡುವೆ ಇರುವ ಸಿಂಘು ಗಡಿಯಲ್ಲಿ ದೊಡ್ಡಮಟ್ಟದಲ್ಲಿ ಗದ್ದಲ ಉಂಟಾಯಿತು. ಜತೆಗೆ ದೆಹಲಿಯ ಪಶ್ಚಿಮ ಭಾಗದಲ್ಲಿನ ಟಿಕ್ರಿ ಗಡಿಯಲ್ಲಿಯೂ ಇದೇ ರೀತಿ ಸಂಘರ್ಷಮಯ ವಾತಾವರಣ ನಿರ್ಮಾಣವಾಯಿತು. ಸಾವಿರಾರು ಜನರು ಬಾವುಟಗಳನ್ನು ಹಿಡಿದು ಮೆರವಣಿಗೆ ಸಾಗಿದರೆ,ನೂರಾರು ಟ್ರ್ಯಾಕ್ಟರ್‌ಗಳು ಒಳನುಗ್ಗಿದವು.
ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವ ಪಥಸಂಚಲನ ಮುಗಿದ ಬಳಿಕ ಮಧ್ಯಾಹ್ನ 12 ಗಂಟೆ ನಂತರ ರೈತರ ಟ್ರ್ಯಾಕ್ಟರ್ ಮೆರವಣಿಗೆಗೆ ಅನುಮತಿ ನೀಡಲಾಗಿತ್ತು. ಆದರೆ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೇ ಗಡಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ರೈತರು ಸೇರಿದ್ದರು. ಮುಂದೆ ಓದಿ.

ಗಡಿಗಳಲ್ಲಿ ಮೆರವಣಿಗೆ
ಸಿಂಘು ಗಡಿಯಲ್ಲಿ ಐದು ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರು ಗಡಿ ದಾಡಿ ಮೆರವಣಿಗೆ ಸಾಗಲು ಪಟ್ಟುಹಿಡಿದರು. ಟಿಕ್ರಿಯಲ್ಲಿ ಬೆಳಿಗ್ಗೆ ಒಂಬತ್ತು ಗಂಟೆಗೆ ಮೆರವಣಿಗೆ ಆರಂಭವಾಗಿದ್ದು, ಶಾಂತಿ ಕಾಪಾಡುವಂತೆ ರೈತ ಮುಖಂಡರು ಮನವಿ ಮಾಡಿದರು. ಮೆರವಣಿಗೆ ಸಮಯ ನಿರ್ಧರಿಸಲು ರೈತ ಮುಖಂಡರು ಪೊಲೀಸರ ಜತೆ ಸಭೆ ನಡೆಸಿದರು. ಪಂಜಾಬ್‌ನ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಬ್ಯಾರಿಕೇಡ್ ಮುರಿದು ದೆಹಲಿ ಪ್ರವೇಶಿಸಿತು.
|
ಪೊಲೀಸ್ ವಾಹನಗಳ ಮೇಲೆ ದಾಳಿ
ದೆಹಲಿಯ ಮುಕಾರ್ಬಾ ಚೌಕದಲ್ಲಿ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದರು. ಕಾಂಝ್ವಾಲಾ ಕಡೆಗೆ ಹೊರಟಿದ್ದ ರೈತರು, ಮುಕಾರ್ಬಾ ಚೌಕದಿಂದ ವರ್ತುಲ ರಸ್ತೆ ಕಡೆಗೆ ಮೆರವಣಿಗೆ ಬದಲಿಸಿದರು. ಈ ಸಂದರ್ಭದಲ್ಲಿ ನಡೆದ ಘರ್ಷಣೆಯಲ್ಲಿ ಪೊಲೀಸ್ ವಾಹನಗಳು, ಏಳು ಬಸ್‌ಗಳ ಕಿಟಕಿ ಗಾಜುಗಳನ್ನು ಒಡೆಯಲಾಗಿದೆ. ಪೊಲೀಸರ ಮೇಲೆ ಕೂಡ ದಾಳಿಗಳಾಗಿವೆ. ಪೊಲೀಸರ ಜಲಫಿರಂಗಿ ವಾಹನಗಳ ಮೇಲೆ ಹತ್ತಿ ಪ್ರತಿಭಟನೆ ನಡೆಸಿದರು.
|
ಬ್ಯಾರಿಕೇಡ್ ತೆರವು
ಕರ್ನಾಲ್ ಬೈಪಾಸ್‌ನಲ್ಲಿ ಸಹ ಪ್ರತಿಭಟನಾಕಾರರು ಪೊಲೀಸರ ಬ್ಯಾರಿಕೇಡ್‌ಗಳನ್ನು ಮುರಿದು ಬಲವಂತವಾಗಿ ದೆಹಲಿಯೊಳಗೆ ಟ್ರ್ಯಾಕ್ಟರ್ ಮೆರವಣಿಗೆ ಆರಂಭಿಸಿದರು. ದೊಣ್ಣೆ, ಕೋಲುಗಳನ್ನು ಬಳಸಿ ವಾಹನಗಳ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು, ಬ್ಯಾರಿಕೇಡ್‌ಗಳನ್ನು ಎಳೆದು ಕೆಳಗೆ ನೂಕಿದರು. ಬಳಿಕ ಅವುಗಳನ್ನು ಪಕ್ಕಕ್ಕೆ ಎಳೆದು ಹಾಕಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಸಾಗುವಂತೆ ಮಾಡಿದರು.
|
ಪೊಲೀಸರ 37 ಷರತ್ತುಗಳು
ಗಣರಾಜ್ಯ ದಿನದಂದು ದೆಹಲಿಯ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಲು ದೆಹಲಿಪೊಲೀಸರು 37 ಷರತ್ತುಗಳನ್ನು ವಿಧಿಸಿದ್ದರು. ಶಾಂತಿಯುತ ಪ್ರತಿಭಟನೆ, ನಿರ್ದಿಷ್ಟ ಸಮಯ ಮತ್ತು ಸ್ಥಳ ಹಾಗೂ ಪಾಳ್ಗೊಳ್ಳುವಿಕೆಯ ಮಿತಿ ಹೇರಿದ್ದರು. ಆದರೆ, ಅವರು ನೀಡಿದ ಸಮಯಕ್ಕೂ ಮುನ್ನವೇ ರೈತರು ಬ್ಯಾರಿಕೇಡ್‌ಗಳನ್ನು ಮುರಿದು ಒಳಗೆ ಪ್ರವೇಶಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications