ಸ್ವಾವಲಂಬಿ App ಮೂಲಕ ನಿಮ್ಮ ಜಮೀನಿನ ನಕಾಶೆ ನೀವೆ ಡೌನ್ ಲೋಡ್ ಮಾಡಿಕೊಳ್ಳಿ
ಬಾಗಲಕೋಟೆ,ಅಕ್ಟೋಬರ್ 06 : ರೈತರು ತಮ್ಮ ಜಮೀನಿನ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಲು ಸ್ವಾವಲಂಬಿ ಆ್ಯಪ್ ಮೂಲಕ ಅವಕಾಶ ಕಲ್ಪಿಸಿದ್ದು, ಕರ್ನಾಟಕ ದೇಶದಲ್ಲಿಯೇ ಮೊದಲ ಬಾರಿ ಜಾರಿಗೆ ತಂದ ರಾಜ್ಯವಾಗಿದೆ ಎಂದು ಭೂ ದಾಖಲೆಗಳ ಉಪನಿರ್ದೇಶಕ ಮಹಾಂತೇಶ ಮುಳಗುಂದ ತಿಳಿಸಿದ್ದಾರೆ.
ಮುಟೇನ್ ಪೂರ್ವ ನಕ್ಷೆ ಯೋಜನೆಯು ಕರ್ನಾಟಕ ರಾಜ್ಯಾದ್ಯಂತ ಪ್ರಾರಂಭವಾದಾಗಿನಿಂದ ಜನಸಾಮಾನ್ಯರಿಗೆ ತಮ್ಮ ಜಮೀನುಗಳ ಪೈಕಿ ಖರೀದಿ, ವಾಟ್ನಿ, ದಾನ ಪತ್ರ ಇತ್ಯಾದಿ ಹಕ್ಕು ಬದಲಾವಣೆ ವ್ಯವಹಾರಗಳಲ್ಲಿ ವ್ಯಾಜ್ಯ ರಹಿತ ಸೇವೆ ಸಲ್ಲಿಸುವಲ್ಲಿ ಭೂಮಾಪನ ಇಲಾಖೆಯ ಪಾತ್ರ ಪ್ರಮುಖವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ತಂತ್ರಜ್ಞಾನ ಬಳಸಿ ಸಾಕಷ್ಟು ಮಾರ್ಪಾಡುಗಳನ್ನು ಮಾಡಿ ಸಾರ್ವಜನಿಕರ ಸೇವೆ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ತೊಂದರೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ವಾವಲಂಬಿ ಅಪ್ಲಿಕೇಷನ್ ರೂಪಿಸಲಾಗಿದೆ.
ಈ ಅಪ್ಲಿಕೇಶನ್ ಮೂಲಕ ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಕಛೇರಿಗಳನ್ನು ಅಲೆಯುವ ಜಂಜಾಟ ಇನ್ನು ಮುಂದೆ ತಪ್ಪಲಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ 'ಸ್ವಾವಲಂಬಿ' ವೆಬ್‍ಸೈಟ್ ಆರಂಭಿಸಲಾಗಿದೆ. ಈ ವೆಬ್‍ಸೈಟ್ ಮೂಲಕವೇ ಭೂಮಿಯ ಮಾಲೀಕರು ಜಮೀನಿನ 11ಇ ನಕ್ಷೆ, ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಮೂಲಕ ನಕಾಶೆ ಪಡೆಯಬಹುದು
ಅರ್ಜಿಯನ್ನು rdservices.karanata.gov.in ವೆಬ್‍ಸೈಟ್‍ಮೂಲಕ ಅರ್ಜಿ ಸಲ್ಲಿಸಿದಲ್ಲಿ, ಅರ್ಜಿದಾರರು ಕೋರಿರುವ ಹಿಸ್ಸೆಗೆ ಸಂಬಂಧಿಸಿದ ನಕ್ಷೆಯನ್ನು ಇಲಾಖೆ ಮುಖಾಂತರ ಅಪ್‍ಲೋಡ್ ಮಾಡಲಾಗುತ್ತದೆ. ಅರ್ಜಿದಾರರು ಸದರಿ ನಕ್ಷೆಯನ್ನು ಡೌನ್ ಲೋಡ್ ಮಾಡಿ, ಮಾರಾಟ ಮಾಡಬೇಕಾದ ಭೂಮಿಯನ್ನು ನಿರ್ದಿಷ್ಟ ಅಳತೆ ಗುರುತಿಸಿ ಮರು ಅಪ್ ಲೋಡ್ ಮಾಡಬೇಕು. ತದನಂತರ ಇಲಾಖೆಯು ಅದನ್ನು ಪರಿಶೀಲಿಸಿದ ಬಳಿಕ ಅನುಮೋದಿಸಿ ದೃಢೀಕರಿಸಿ ಮತ್ತೇ ಅಪ್‍ಲೋಡ್ ಮಾಡಲಾಗುತ್ತದೆ. ಸದರಿ ನಕ್ಷೆಯನ್ನು ಆನ್‍ಲೈನ್‍ನಲ್ಲಿ ಎಲ್ಲಿ ಬೇಕಾದರೂ ಪ್ರಿಂಟ್ ಪಡೆದು ಮಾರಾಟಕ್ಕೆ ನೊಂದಣಿ ಮಾಡಿಕೊಡಬಹುದು. ಈ ಪ್ರಕ್ರಿಯೆ ಮುಗಿದ ಬಳಿಕ ಪ್ರತ್ಯೇಕವಾಗಿ ಪಹಣಿಗಳು ಸೃಜಿಸಲಾಗುತ್ತದೆ.

ಅಲ್ಪಾವಧಿ ಕಾರ್ಯ
ಈ ಮೊದಲು ನಾಡ ಕಛೇರಿಗೆ ಹೋಗಿ ಜಮೀನಿನ 11ಇ, ಪೋಡಿ ಕಾರ್ಯ ಸೇರಿ ಇತ್ಯಾದಿ ಕಾರ್ಯಗಳಿಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಆ ಅರ್ಜಿಯು ನಾಡ ಕಛೇರಿಯಲ್ಲಿ ಪರಿಶೀಲನೆಗೊಳಪಟ್ಟು ಸರತಿಯಲ್ಲಿ ಬೀಳುತ್ತಿತ್ತು. ಸರತಿಯಿಂದ ಭೂಮಾಪಕರ ಬಳಿ ಹೋಗುತ್ತಿತ್ತು. ಭೂಮಾಪಕರು ಜಮೀನನ್ನು ಪರಿಸೀಲಿಸಿ ನಕ್ಷೆ ಗುರುತಿಸಿ ಅಪ್‍ಲೋಡ್ ಮಾಡುತ್ತಿದ್ದರು. ಅಪ್‍ಲೋಡ್ ಆದ ದಾಖಲೆಯನ್ನು ತಪಾಸಕರ ಮೂಲಕ ಪರಿಶೀಲಿಸಿ, ಬಳಿಕ ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗೆ ಕಳುಹಿಸಲಾಗುತ್ತಿತ್ತು. ಆದರೆ 'ಸ್ವಾವಲಂಬಿ' ವೆಬ್‍ಸೈಟ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳನ್ನು ಅತೀ ಕಡಿಮೆ ಅವಧಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ.

ಜಮೀನಿನ ಆರ್‌ಟಿಸಿ ನಂಬರ್ ಇದ್ದರೆ ಮಾತ್ರ ಅರ್ಜಿ ಮಾನ್ಯ
ಮೋಜಣಿ-ಕಾವೇರಿಗೆ ಲಿಂಕ್ 'ಸ್ವಾವಲಂಬಿ' ವೆಬ್‍ಸೈಟ್ ಅನ್ನು ಭೂಮಾಪನ ಇಲಾಖೆಯ ಮೋಜಣಿ ಹಾಗೂ ಉಪನೋಂದಣಿ ಇಲಾಖೆಯ ಕಾವೇರಿ ತಂತ್ರಾಂಶಕ್ಕೆ ಲಿಂಕ್ ಮಾಡಲಾಗಿದೆ. ಈ ಮೂಲಕ ಸೇವೆ ಪಡೆಯಬೇಕೆಂದರೆ ಆರ್‌ಟಿಸಿ (ಪಹಣಿ) ಹಾಗೂ ನೋಂದಾಯಿತ ಮೊಬೈಲ್ ನಂಬರ್ ಆಧಾರ್ ಕಾರ್ಡ್ ತಾಳೆಯಾದರೆ ಮಾತ್ರ ಈ ವೆಬ್‍ಸೈಟ್‍ನಲ್ಲಿ ಅರ್ಜಿಗಳು ಸ್ವೀಕೃತವಾಗುತ್ತವೆ. ಕಡ್ಡಾಯವಾಗಿ ಜಮೀನಿನ ಆರ್‌ಟಿಸಿ ನಂಬರ್ ಇದ್ದರೆ ಮಾತ್ರ ಅರ್ಜಿ ಮಾನ್ಯವಾಗುತ್ತದೆ. ಈ ಹೊಸ ಯೋಜನೆಯ ಲಾಭವನ್ನು ಬಾಗಲಕೋಟೆ ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಭೂದಾಖಲೆಗಳ ಉಪ ನಿರ್ದೇಶಕರು ತಿಳಿಸಿದ್ದಾರೆ.

ರೈತರು ಅರ್ಜಿಸಲ್ಲಿಸುವುದೇಗೆ
ರೈತರು ಮನೆಯಲ್ಲಿಯೇ ಕುಳಿತು, ತತ್ಕಾಲ್ ಪೋಡಿ, 11ಇ ನಕ್ಷೆ, ಭೂ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಬೇಕಾದರೆ ಈ https://bhoomojini.karnataka.gov.in/Service27/ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ಭೂ ಕಂದಾಯ ಇಲಾಖೆಯ ವೆಬ್ ಪೇಜ್ ತೆರೆದುಕೊಳ್ಳುತ್ತದೆ. ಆಗ ರೈತರು ತಮ್ಮ ಮೊಬೈಲ್ ನಂಬರ್ ಹಾಕಿ, ಕೆಳಗಡೆ ಕಾಣುವ ಕ್ಯಾಪ್ಚ್ಯಾ ಕೋಡ್ ಹೇಗಿದೆಯೋ ಅದೇ ರೀತಿ ನಮೂದಿಸಬೇಕು. ನಂತರ ನಿಮ್ಮ ಮೊಬೈಲಿಗೆ ಒಟಿಪಿ ಪಡೆಯಲು ಸೆಂಡ್ ಒಟಿಪಿ ಕ್ಲಿಕ್ ಮಾಡಬೇಕು. ನಂತರ ನಿಮ್ಮ ನೋಂದಾಯಿತ ಮೊಬೈಲಿಗೆ ಒಂದು ಒಟಿಪಿ ಬರುತ್ತದೆ. ರೈತರು ಮೊಬೈಲಿಗೆ ಬಂದ ಒಟಿಪಿಯನ್ನು ನಮೂದಿಸಿ ಲಾಗಿನ್ ಮೇಲೆ ಕ್ಲಿಕ್ ಮಾಡಿದರೆ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ರೈತರಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ತೊಂದರೆಯಾಗಬಾರದೆಂದು ಅರ್ಜಿ ಸಲ್ಲಿಸುವಾಗ ಏನಾದರೂ ತೊಂದರೆಯಾದರೆ ಮಾಹಿತಿ ನೀಡಲು ಒಂದು ವೀಡಿಯೋ ಲಿಂಕ್ ಸಹ ಅಪ್ಲೋಡ್ ಮಾಡಲಾಗಿದೆ. ಆ ವೀಡಿಯೋ ಸಹಾಯದಿಂದ ರೈತರು ಸುಲಭವಾಗಿ ಅರ್ಜಿ ಸಲ್ಲಿಸಬಹದು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications