ಅಶೋಕ್ ಖೇಣಿ ರಾಜೀನಾಮೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಬೆಂಗಳೂರು, ಅ.16: ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರು ರೈತರ ಆತ್ಮಹತ್ಯೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ರೈತರು, ಜನಪರ ಸಂಘಟನೆಗಳು ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಕನಕಪುರ ರಸ್ತೆಯಲ್ಲಿರುವ ನೈಸ್‌ರಸ್ತೆಯ ಟೋಲ್‌ನ್ನು ಧ್ವಂಸಗೊಳಿಸಿದ್ದಾರೆ.
ರೈತರು ಸಾಲದ ಹಣವನ್ನು ಜೂಜಾಟ, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಪೋಲು ಮಾಡಿದ್ದೆ ಆತ್ಮಹತ್ಯೆಗೆ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಅಶೋಕ ಖೇಣಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ‍್ಯಕರ್ತರು ನಗರದಲ್ಲಿಂದು ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬಾಗೇಪಲ್ಲಿ ತಾಲೂಕಿನ ಗುಮ್ಮನಾಯಕಪಾಳ್ಯದಲ್ಲಿ 'ಕ್ರಾಂತಿವೀರ' ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಅಶೋಕ್ ಖೇಣಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರೈತರ ಆತ್ಮಹತ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ನೈಸ್ ರಸ್ತೆಯ ಟೋಲ್‌ಗೆ ಮುತ್ತಿಗೆ ಹಾಕಿದ 40 ರಿಂದ 50 ಜನ ಕಾರ್ಯಕರ್ತರು ಹೇಳಿಕೆ ಖಂಡಿಸಿ ಖೇಣಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ನಡೆಸುತ್ತ ಟೋಲ್‌ಗಳ ಮೇಲೆ ಕಲ್ಲು ತೂರಿ ಗಾಜುಗಳನ್ನು ಒಡೆದು, ತಡೆಗಳನ್ನು ಮುರಿದು, ಕ್ಯಾಬಿನ್‌ಗಳನ್ನು ಕಿತ್ತು ಧ್ವಂಸಗೊಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ತಲಘಟ್ಟಪುರ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕಲ್ಲು ತೂರಾಟ ಸಂಬಂಧ ಮುಖಂಡ ನಿತೀಶ್‌ಗೌಡ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.
ಬೀದರ್‌ನಲ್ಲೂ ಪ್ರತಿಭಟನೆ: ಬೀದರ್ ಭಾಗದ ರೈತರೂ ಸಂಕಷ್ಟದಲ್ಲಿದ್ದಾರೆ. ರೈತರ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿರುವ ಶಾಸಕ ಅಶೋಕ್ ಖೇಣಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಧಾರವಾಡದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications