ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿನ ಹೋರಾಟ ಬೆಂಬಲಿಸಿ ದಾವಣಗೆರೆಯಲ್ಲಿ ರೈತರ ಐಕ್ಯತಾ ದಿನಾಚರಣೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಡಿಸೆಂಬರ್ 03: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಡಿ.3 ಅನ್ನು ಅಖಿಲ ಭಾರತ ರೈತರ ಐಕ್ಯತಾ ದಿನವನ್ನಾಗಿ ಆಚರಿಸಿದರು.

ಇಲ್ಲಿನ ಜಯದೇವ ವೃತ್ತದಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಊಟ ನಾವು ತಂದಿದ್ದೇವೆ ಸ್ವಾಮಿ, ನೀವು ಕೊಡೋದು ಬೇಡ: ರೈತರ ಸ್ವಾಭಿಮಾನದ ನುಡಿ ನಮ್ಮ ಊಟ ನಾವು ತಂದಿದ್ದೇವೆ ಸ್ವಾಮಿ, ನೀವು ಕೊಡೋದು ಬೇಡ: ರೈತರ ಸ್ವಾಭಿಮಾನದ ನುಡಿ

ಈ ವೇಳೆ ಮಾತನಾಡಿದ ಆರ್ ಕೆಎಸ್ ರಾಜ್ಯಾಧ್ಯಕ್ಷ ಡಾ.ಟಿ.ಎಸ್.ಸುನೀತ್ ಕುಮಾರ್, ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ರದ್ದುಪಡಿಸುವಂತೆ ದೆಹಲಿಯಲ್ಲಿ ರೈತರು ಪ್ರತಿಭಟಿಸಲು ಮುಂದಾದ ಸಂದರ್ಭ ಅವರು ದೆಹಲಿ ಪ್ರವೇಶಿಸದಂತೆ ತಡೆಯಲು ಬ್ಯಾರಿಕೇಡ್ ‌ಗಳನ್ನು ಹಾಕಿ, ಮುಳ್ಳಿನ ತಂತಿ ಕಟ್ಟಿದ್ದರು. ಇದನ್ನು ಲೆಕ್ಕಿಸದೇ ಮುನ್ನುಗ್ಗಿದ ರೈತರ ಹೋರಾಟವನ್ನು ದಮನ ಮಾಡಲು ಪ್ರಯತ್ನಿಸಿರುವುದು ಪ್ರಜಾತಂತ್ರ ವ್ಯವಸ್ಥೆಗೆ ಮಾಡಿದ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

Farmers Solidarity Day In Davanagere Supporting Delhi Protest

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ್ ಮಾತನಾಡಿ, ಕೇಂದ್ರ ಸರ್ಕಾರ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಶವ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದು, ತಕ್ಷಣವೇ ಈ ರೈತ ವಿರೋಧಿ ತಿದ್ದುಪಡಿಗಳನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.

English summary
Farmers organizations in davanagere celebrated Farmers Solidarity Day supporting delhi protest against central government's agriculture acts,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X