ರೈತ ಆತ್ಮಹತ್ಯೆ, ಸಾಲಮನ್ನಾ ಸದ್ಯಕ್ಕಿಲ್ಲ : ಸಿದ್ದರಾಮಯ್ಯ

ಹುಬ್ಬಳ್ಳಿ, ಆಗಸ್ಟ್ 6 : ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೃಷಿ ಸಾಲ ಅಥವಾ ಬಡ್ಡಿ ಮನ್ನಾ ಮಾಡುವ ಆಲೋಚನೆ ಸದ್ಯಕ್ಕಿಲ್ಲ. ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಮತ್ತೂಮ್ಮೆ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾತನಾಡಿದ ಅವರು, 'ರೈತರ ಸಾಲ ಮನ್ನಾ ಮಾಡುವಂತೆ ಪ್ರತಿಪಕ್ಷಗಳು ಬೇಡಿಕೆ ಇಡುತ್ತಿವೆ. ಜಗದೀಶ ಶೆಟ್ಟರ್ ಅವರು ಸಿಎಂ ಆಗಿದ್ದಾಗ 2,500 ಕೋಟಿ ರೂ. ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಆದರೆ, ಆ ಸಾಲ ಮನ್ನಾ ಮಾಡಿದ್ದು ಕಾಂಗ್ರೆಸ್ ಸರ್ಕಾರ' ಎಂದರು. [ರೈತ ಆತ್ಮಹತ್ಯೆ, ಲೋಕಸಭೆಯಲ್ಲಿ ಯಡಿಯೂರಪ್ಪ ಘರ್ಜನೆ]

siddaramaiah

ಬರಪೀಡಿತ ತಾಲೂಕುಗಳ ಘೋಷಣೆ : ಯಾವ-ಯಾವ ಜಿಲ್ಲೆಗಳ ಎಷ್ಟು ತಾಲೂಕುಗಳಲ್ಲಿ ಬರ ಇದೆ ಎಂಬುದನ್ನು ಕಂದಾಯ, ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿ ನಾಲ್ಕು ಕಂದಾಯ ವಿಭಾಗಗಳ ಅಧಿಕಾರಿಗಳ ಸಭೆ ನಡೆಸಿ ವಿವರ ಸಂಗ್ರಹಿಸಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗುವುದು ಎಂದು ಹೇಳಿದರು. [ಕಬ್ಬು ಬೆಳೆಗಾರರ ಆತ್ಮಹತ್ಯೆ ಸರಣಿಗೆ ಕೊನೆಯಿಲ್ಲ]

ಸರ್ವಪಕ್ಷ ನಿಯೋಗ ದೆಹಲಿಗೆ : ರಾಜ್ಯದಲ್ಲಿ ಸಂಭವಿಸಿರುವ ರೈತರ ಆತ್ಮಹತ್ಯೆ ಪ್ರಕರಣಗಳು ಹಾಗೂ ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ಹಾನಿ ಮತ್ತು ಬರದಿಂದ ಉದ್ಭವಿಸಿರುವ ಪರಿಸ್ಥಿತಿ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಸರ್ವ ಪಕ್ಷ ನಿಯೋಗ ದೆಹಲಿಗೆ ತೆರಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. [ತಂತ್ರಜ್ಞಾನ ಬಳಸಿ ರೈತರಿಗೆ ಸಂದೇಶ ಕಳಿಸಿದ ಎಸ್ಆರ್ ಪಾಟೀಲ್]

ರಾಜ್ಯದ ಪರಿಸ್ಥಿತಿ ಬಗ್ಗೆ ಪ್ರಧಾನ ಮಂತ್ರಿ ನರೇಂದರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟು ಹೆಚ್ಚಿನ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಲು ಸರ್ವ ಪಕ್ಷಗಳ ನಿಯೋಗವು ಶೀಘ್ರದಲ್ಲೇ ದೆಹಲಿಗೆ ತೆರಳಲಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿಗಳ ಕಚೇರಿಯನ್ನು ಈಗಾಗಲೇ ಸಂಪರ್ಕಿಸಿ ಸಂಸತ್ ಅಧಿವೇಶನ ಮುಗಿಯುವ ಮುನ್ನವೇ ಭೇಟಿಗೆ ಸಮಯ ನಿಗದಿಪಡಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದ ಸಿದ್ದರಾಮಯ್ಯ ಅವರು, ಇದೇ ಸಂದರ್ಭದಲ್ಲಿ ಕಳಸಾ ಬಂಡೂರಿ ನಾಲಾ ಯೋಜನೆಯ ಕುರಿತು ಪ್ರಸ್ತಾಪಿಸಲಾಗುತ್ತದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+