ಸಿಗದ ಪರಿಹಾರ, ಬೀದರ ರೈತರಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ

ಬೀದರ್‌, ಆಗಸ್ಟ್ 2: ಬೆಳೆ ನಷ್ಟ ಪರಿಹಾರ ಸಿಗದಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಮ್‌ನಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ.

ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ ಒಂದೆಡೆ ಕೃಷಿ ಸಾಲ ಮನ್ನಾ ಘೋಷಿಸಿದರೂ ಇದುವರೆಗೆ ಜಾರಿಗೆ ಬಂದಿಲ್ಲ. ಜೊತೆಗೆ 2016-17ನೇ ಸಾಲಿನ ಬೆಳೆ ನಷ್ಟ ಪರಿಹಾರ ಸಿಗದಿರುವ ಹಿನ್ನೆಲೆಯಲ್ಲಿ ಬೀದರ್ ರೈತರು ಸಾಮೂಹಿಕ ಆತ್ಮಹತ್ಯೆಯ ಎಚ್ಚರಿಕೆ ನೀಡಿ ಬೀದರ್‌ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಬೆಳೆ ವಿಮಾ ಯೋಜನೆಯ ಒಂದು ಕೋಟಿ ಬಾಕಿ ಹಣ ನೀಡಿಲ್ಲವೆಂದು ರೈತರ ಆರೋಪ ಮಾಡಿದ್ದಾರೆ. ಒಂದು ವರ್ಷದಿಂದ ಜಿಲ್ಲಾಧಿಕಾರಿಗೆ ರೈತರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿದ್ದಾರೆ.

Farmers threat mass suicide seeking compensation for crop loss

ಪ್ರತಿಭಟನಾ ಸ್ಥಳಕ್ಕೆ ಆಗಮಿಸದ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳದಂತೆ ಗ್ರಾಮಸ್ಥರಿಗೆ ಪೊಲೀಸರು ಮನವಿ ಮಾಡಿದ್ದಾರೆ. ನಮ್ಮ ಒತ್ತಾಯಕ್ಕೆ ಸ್ಪಂದಿಸದಿದ್ದರೆ ಇಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ರೈತರು ಎಚ್ಚರಿಸಿದ್ದಾರೆ. ಕೋಸಮ್‌ ಗ್ರಾಮದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+