ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಪ್ರತಿಭಟನೆ: ತಡರಾತ್ರಿ ಅಮಿತ್ ಶಾ, ತೋಮರ್, ರಾಜನಾಥ್ ಸಿಂಗ್ ಸಭೆ

|
Google Oneindia Kannada News

ನವದೆಹಲಿ, ನವೆಂಬರ್ 30: ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ದೆಹಲಿ ನಿವಾಸದಲ್ಲಿ ಭಾನುವಾರ ತಡರಾತ್ರಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮ್ಮ ಪ್ರತಿಭಟನೆಯ ಸ್ಥಳವನ್ನು ಬದಲಿಸುವಂತೆ ಮತ್ತು ಮಾತುಕತೆ ನಡೆಸಲು ಬರುವಂತೆ ಪ್ರತಿಭಟನಾ ನಿರತ ರೈತರಿಗೆ ನೀಡಿದ ಆಹ್ವಾನವನ್ನು ತಿರಸ್ಕರಿಸಿದ ಬಳಿಕ ಈ ಸಭೆ ನಡೆದಿದೆ.

ಕಳೆದ ವಾರ ಶುರುವಾದ ರೈತರ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಪೊಲೀಸ್ ಬಲಪ್ರಯೋಗ ಬಳಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಜತೆಗೆ ದೆಹಲಿಯ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿರುವ ರೈತರು, ರಾಜಧಾನಿ ದೆಹಲಿಗೆ ಪ್ರವೇಶ ಕಲ್ಪಿಸುವ ಐದು ಪ್ರಮುಖ ಮಾರ್ಗಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು ಎರಡು ಗಂಟೆ ಮಾತುಕತೆ ನಡೆದಿದೆ.

ರೈತರಿಂದ ದೆಹಲಿಯ ಎಲ್ಲಾ ಪ್ರವೇಶ ದ್ವಾರ ಬಂದ್ ಎಚ್ಚರಿಕೆ ರೈತರಿಂದ ದೆಹಲಿಯ ಎಲ್ಲಾ ಪ್ರವೇಶ ದ್ವಾರ ಬಂದ್ ಎಚ್ಚರಿಕೆ

ಸೋನಿಪಟ್, ರೋಹ್ಟಕ್, ಜೈಪುರ, ಘಾಜಿಯಾಬಾದ್-ಹಾಪುರ್ ಮತ್ತು ಮಥುರಾದಿಂದ ದೆಹಲಿಗೆ ಪ್ರವೇಶ ನೀಡುವ ಐದು ಮಾರ್ಗಗಳನ್ನು ಬ್ಲಾಕ್ ಮಾಡುವುದಾಗಿ ರೈತರು ಬೆದರಿಕೆ ಹಾಕಿದ್ದಾರೆ. ನೆರೆಯ ಹರಿಯಾಣದ ಗಡಿಯಲ್ಲಿ ರಸ್ತೆಗಳು ಬಂದ್ ಆಗಿರುವುದರಿಂದ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ದೆಹಲಿ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.

 Farmers Threaten To Block Delhi: Amit Shah Late Night Meeting With BJP Leaders

ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಶನಿವಾರ ಹೇಳಿಕೆ ನೀಡಿದ್ದ ಗೃಹ ಸಚಿವ ಅಮಿತ್ ಶಾ, ಪ್ರತಿ ಸಮಸ್ಯೆ ಮತ್ತು ಬೇಡಿಕೆಗಳನ್ನು ಉದ್ದೇಶಿಸಲು ಸಿದ್ಧರಿರುವುದಾಗಿ ತಿಳಿಸಿದ್ದರು. ಡಿಸೆಂಬರ್ 3ರಂದು ಮಾತುಕತೆ ನಡೆಸಲು ನಿಗದಿಗೊಳಿಸಲಾಗಿದ್ದು, ಆದಷ್ಟು ಬೇಗನೆ ಸಭೆ ನಡೆಸಬೇಕೆಂದರೆ ರೈತರು ತಮ್ಮ ಪ್ರತಿಭಟನಾ ಸ್ಥಳವನ್ನು ಬದಲಿಸಬೇಕು ಎಂಬ ಷರತ್ತನ್ನುಅಮಿತ್ ಶಾ ಇರಿಸಿದ್ದು, ಅದನ್ನು ರೈತರು ತಿರಸ್ಕರಿಸಿದ್ದಾರೆ.

ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದಿಲ್ಲ, ಖಟ್ಟರ್‌ಗೆ ಅಮಿತ್‌ ಪ್ರತಿಕ್ರಿಯೆರೈತರ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದಿಲ್ಲ, ಖಟ್ಟರ್‌ಗೆ ಅಮಿತ್‌ ಪ್ರತಿಕ್ರಿಯೆ

ಭಾನುವಾರ ರಾತ್ರಿ ನಡೆದ ಬಿಜೆಪಿಯ ಪ್ರಮುಖ ನಾಯಕರ ಸಭೆಯಲ್ಲಿ ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳ ನಡುವಿನ ಮಾತಿನ ಚಕಮಕಿ ಕೂಡ ಪ್ರಸ್ತಾಪಗೊಂಡಿದೆ.

English summary
Home Minister Amit Shah had late night meeting with Rajnath Singh, Narendra Singh Tomar and Rajnath Singh at BJP president JP Nadda's house on farmers protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X